Joginder Sharma retirement: ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಭಾರತದ ಚೊಚ್ಚಲ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

| Updated By: Vinay Bhat

Updated on: Feb 04, 2023 | 7:54 AM

Joginder Sharma: ಜೋಗಿಂದರ್ ಶರ್ಮಾ 2004 ಮತ್ತು 2007ರ ನಡುವೆ ನಾಲ್ಕು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು ಒಟ್ಟಾರೆ ಐದು ವಿಕೆಟ್​ಗಳನ್ನು ಪಡೆದಿದ್ದಾರೆ. ಅವರು ಇದೀಗ ಎಲ್ಲ ಮಾದರಿಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

Joginder Sharma retirement: ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಭಾರತದ ಚೊಚ್ಚಲ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ
Team India Players
Follow us on

2007ರ ಚೊಚ್ಚಲ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಪರ ಬೌಲಿಂಗ್ ಮಾಡಿ, ಗೆಲುವಿನ ನಗೆ ಬೀರುವಂತೆ ಮಾಡಿದ್ದ ವೇಗದ ಬೌಲರ್ ಜೋಗಿಂದರ್ ಶರ್ಮಾ (Joginder Sharma) ಅವರು ಇದೀಗ ಎಲ್ಲ ಮಾದರಿಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಜೋಗಿಂದರ್ 2004 ಮತ್ತು 2007ರ ನಡುವೆ ನಾಲ್ಕು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು ಒಟ್ಟಾರೆ ಐದು ವಿಕೆಟ್​ಗಳನ್ನು ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ಹರಿಯಾಣವನ್ನು ಪ್ರತಿನಿಧಿಸುವ ಇವರು ಟ್ವಿಟರ್​ನಲ್ಲಿ (Twitter) ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. 2007ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್​ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಜೋಗಿಂದರ್ ಇಂದುಕೂಡ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.

“ಇಂದು ಅಪಾರ ಕೃತಜ್ಞತೆ ಮತ್ತು ನಮ್ರತೆಯಿಂದ ನಾನು ಎಲ್ಲ ರೀತಿಯ ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತೇನೆ. 2002 ರಿಂದ 2017 ರವರೆಗಿನ ನನ್ನ ಪ್ರಯಾಣವು ನನ್ನ ಜೀವನದ ಅತ್ಯಂತ ಅದ್ಭುತವಾದ ವರ್ಷಗಳಾಗಿದ್ದವು. ಕ್ರೀಡೆಯಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಗೌರವ ನನ್ನದಾಗಿತ್ತು. ನನಗೆ ಆಡುವ ಅವಕಾಶ ನೀಡಿದ ಬಿಸಿಸಿಐ, ಐಪಿಎಲ್​ನ ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಹರಿಯಾಣ ಸರಕಾರಕ್ಕೆ ಧನ್ಯವಾದಗಳು”, ಎಂದು ಹೇಳಿದ್ದಾರೆ.

ಇದನ್ನೂ ಓದಿ
Ranji Trophy: ಉತ್ತರಾಖಂಡ ವಿರುದ್ಧ ಇನ್ನಿಂಗ್ಸ್ ಜಯದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ
India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಗಳು ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?: ಇಲ್ಲಿದೆ ಎಲ್ಲ ಮಾಹಿತಿ
Shubman Gill: ಮೂರನೇ ಟಿ20 ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ಶುಭ್​ಮನ್ ಗಿಲ್ ಕೆನ್ನೆಗೆ ಬಾರಿಸಿದ ಇಶಾನ್ ಕಿಶನ್: ವಿಡಿಯೋ
India vs Australia: ಮೊದಲ ಟೆಸ್ಟ್​ಗೆ ಬೆಂಗಳೂರಿನ ಆಲೂರಿನಲ್ಲಿ ಆಸ್ಟ್ರೇಲಿಯಾ ಆಟಗಾರರ ಭರ್ಜರಿ ಅಭ್ಯಾಸ

“ನನ್ನ ಕ್ರಿಕೆಟ್​ ವೃತ್ತಿ ಜೀವನದ ಎಲ್ಲ ಅವಧಿಯಲ್ಲಿ ನೆರವು ಕೊಟ್ಟ ಕೋಚ್​ಗಳು ಹಾಗೂ ಮಾರ್ಗದರ್ಶಕರಿಗೆ ನಾನು ಚಿರರುಣಿ ಆಗಿರುತ್ತೇನೆ. ಕೊನೆಯದಾಗಿ ನನ್ನ ವೃತ್ತಿಜೀವನದುದ್ದಕ್ಕೂ ನನ್ನ ಕುಟುಂಬ ಮತ್ತು ಸ್ನೇಹಿತರು ಲೆಕ್ಕವಿಲ್ಲದಷ್ಟು ಪ್ರೀತಿ ಮತ್ತು ಬೆಂಬಲ ನೀಡಿದ್ದೀರಿ. ಅದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇವರೆಲ್ಲರು ನನ್ನ ಬೆನ್ನೆಲುಬುಗಳಾಗಿದ್ದಾರೆ. ಅವರಿಲ್ಲದಿದ್ದರೆ, ನಾನು ಇಂದು ಏನನ್ನು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ”, ಎಂದು ಅವರು ಬರೆದುಕೊಂಡಿದ್ದಾರೆ.

INDW vs SAW: ತ್ರಿಕೋನ ಸರಣಿ ಗೆದ್ದ ಆಫ್ರಿಕಾ: ಫೈನಲ್​ನಲ್ಲಿ ಭಾರತೀಯ ಮಹಿಳೆಯರ ಕಳಪೆ ಪ್ರದರ್ಶನ

 

2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಜೋಗಿಂದರ್ ಶರ್ಮಾ ಎಸೆದ ಇನಿಂಗ್ಸ್​ನ ಕೊನೇ ಓವರ್​ನಲ್ಲಿ ಭಾರತ ತಂಡ ಜಯ ಸಾಧಿಸಿತ್ತು. ಮಿಸ್ಬಾ ಉಲ್​ ಹಕ್​ ವಿಕೆಟ್​ ಪಡೆದ ಅವರು ಭಾರತ ತಂಡ ವಿಶ್ವಕಪ್​ ಗೆಲ್ಲಲು ನೆರವಾಗಿದ್ದರು. ಆದರೆ, ಆ ಪಂದ್ಯದ ಬಳಿಕ ಅವರು ಭಾರತ ತಂಡದಲ್ಲಿ ಆಡುವ ಅವಕಾಶವನ್ನೇ ಪಡೆದಿರಲಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದ ಅವರು ನಂತರ ಪೊಲೀಸ್ ಇಲಾಖೆಗೆ ಸೇರಿದ್ದು ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೋಗಿಂದರ್ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು.

ಹರಿಯಾಣ ಪರವಾಗಿ 49 ಪ್ರಥಮ ದರ್ಜೆ ಪಂದ್ಯಗಳು, 39 ಲಿಸ್ಟ್-ಎ ಪಂದ್ಯಗಳು ಮತ್ತು 43 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ 2017 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದರು. ಬಳಿಕ ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಕಳೆದ ಸೆಪ್ಟೆಂಬರ್​ನಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ