AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿಲ್ ಜ್ಯಾಕ್ಸ್ ಬದಲಿಗೆ ಮುಂಬೈ ತಂಡಕ್ಕೆ ಎಂಟ್ರಿ ಕೊಟ್ಟ ಮತ್ತೋರ್ವ ಸ್ಫೋಟಕ ಬ್ಯಾಟರ್: ಹಾರ್ದಿಕ್ ಫುಲ್ ಖುಷ್

Jonny Bairstow Mumbai Indians: ಐಪಿಎಲ್ 18 ನೇ ಋತುವಿನಲ್ಲಿ, ವಿಲ್ ಜ್ಯಾಕ್ಸ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಫ್ರಾಂಚೈಸಿ ಈಗ ಜ್ಯಾಕ್ಸ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಅವರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳಲು ಸಿದ್ಧತೆ ನಡೆಸುತ್ತಿದೆ.

IPL 2025: ವಿಲ್ ಜ್ಯಾಕ್ಸ್ ಬದಲಿಗೆ ಮುಂಬೈ ತಂಡಕ್ಕೆ ಎಂಟ್ರಿ ಕೊಟ್ಟ ಮತ್ತೋರ್ವ ಸ್ಫೋಟಕ ಬ್ಯಾಟರ್: ಹಾರ್ದಿಕ್ ಫುಲ್ ಖುಷ್
Mi And Jonny Bairstow
Vinay Bhat
|

Updated on: May 16, 2025 | 8:41 AM

Share

ಬೆಂಗಳೂರು (ಮೇ. 16): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier League) ಮೇ 17 ರಿಂದ ಮತ್ತೊಮ್ಮೆ ಪ್ರಾರಂಭವಾಗುತ್ತಿದೆ. ಇದಕ್ಕೂ ಮೊದಲು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದಾಗಿ ಐಪಿಎಲ್ ಅನ್ನು ಒಂದು ವಾರ ಮುಂದೂಡಬೇಕಾಯಿತು. ಆದಾಗ್ಯೂ, ಹೊಸ ವೇಳಾಪಟ್ಟಿಯ ಪ್ರಕಾರ, ರಾಷ್ಟ್ರೀಯ ತಂಡದ ಬದ್ಧತೆಗಳಿಂದಾಗಿ ಲೀಗ್‌ನ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗದ ಅನೇಕ ವಿದೇಶಿ ಆಟಗಾರರಿದ್ದಾರೆ. ಆ ಹೆಸರುಗಳಲ್ಲಿ ಒಂದು ಇಂಗ್ಲೆಂಡ್‌ನ ವಿಲ್ ಜ್ಯಾಕ್ಸ್ ಅವರದ್ದು. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಳಿಗೆ ಇಂಗ್ಲೆಂಡ್ ತಂಡದಲ್ಲಿ ವಿಲ್ ಜ್ಯಾಕ್ಸ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಐಪಿಎಲ್ 18 ನೇ ಋತುವಿನಲ್ಲಿ, ವಿಲ್ ಜ್ಯಾಕ್ಸ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಫ್ರಾಂಚೈಸಿ ಈಗ ಜ್ಯಾಕ್ಸ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಅವರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬೈರ್‌ಸ್ಟೋವ್ ಮತ್ತು ಫ್ರಾಂಚೈಸಿ ನಡುವಿನ ಮಾತುಕತೆ ಅಂತಿಮ ಹಂತದಲ್ಲಿದೆ. ಉಳಿದ ಎರಡು ಲೀಗ್ ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್‌ ಪರ ಬೈರ್​ಸ್ಟೋವ್ ಆಡುವ ಸಾಧ್ಯತೆ ಇದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 14 ಅಂಕಗಳನ್ನು ಗಳಿಸಿದೆ.

ಮುಂಬೈ ಪ್ಲೇಆಫ್ ತಲುಪಿದರೆ, ಬೈರ್‌ಸ್ಟೋವ್‌ ಜೊತೆ ಒಪ್ಪಂದ:

ಜಾನಿ ಬೈರ್‌ಸ್ಟೋವ್ ಮುಂಬೈ ಇಂಡಿಯನ್ಸ್ ಸೇರುವುದನ್ನು ಅಧಿಕೃತವಾಗಿ ಘೋಷಿಸಲಾಗಿಲ್ಲ. ಮಾತುಕತೆ ಬಹುತೇಕ ಅಂತಿಮಗೊಂಡಿದೆ. ವಾಸ್ತವವಾಗಿ, ಮುಂಬೈ ಇಂಡಿಯನ್ಸ್ ತಂಡವು ಲೀಗ್ ಹಂತದಲ್ಲಿ ಇನ್ನೂ ಎರಡು ಪಂದ್ಯಗಳನ್ನು ಆಡಬೇಕಾಗಿದೆ. ಈ ಎರಡೂ ಪಂದ್ಯಗಳು ತಂಡಕ್ಕೆ ಬಹಳ ಮುಖ್ಯ. ಏಕೆಂದರೆ ಮುಂಬೈ ತಂಡ ಪ್ಲೇಆಫ್ ತಲುಪುವ ಸಮೀಕರಣವು ಈ ಎರಡು ಪಂದ್ಯಗಳಿಂದಲೇ ನಿರ್ಧರ ಆಗುತ್ತದೆ. ಅಲ್ಲದೆ ಮುಂಬೈ ತಂಡದ ಈ ಎರಡು ಲೀಗ್ ಪಂದ್ಯಗಳಿಗೆ ವಿಲ್ ಜ್ಯಾಕ್ಸ್ ಲಭ್ಯ ಇರುತ್ತಾರೆ.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಬಾಂಗ್ಲಾ ಪ್ರವಾಸ; ಒಪ್ಪಿಗೆ ಸೂಚಿಸಿದ ಸರ್ಕಾರ
Image
ಬದಲಿ ಆಟಗಾರರನ್ನು ಘೋಷಿಸಿದ ಮೂರು ಐಪಿಎಲ್ ತಂಡಗಳು
Image
ಅನುಭವಿ ಆಲ್​ರೌಂಡರ್​ಗೆ ಟೆಸ್ಟ್ ನಾಯಕತ್ವ ನೀಡಿ ಎಂದ ಅಶ್ವಿನ್
Image
ಇಂಗ್ಲೆಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ

IPL 2025: ಐಪಿಎಲ್​ನಿಂದ ಮತ್ತೆ ಹೊರಬಿದ್ದ ಮಯಾಂಕ್ ಯಾದವ್; ಬದಲಿ ಆಟಗಾರನ ಸೇರ್ಪಡೆ

ಎಲ್ಲಾದರು ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ತಲುಪಿದರೆ, ಮುಂಬರುವ ಪಂದ್ಯಗಳಿಗೆ ಜಾನಿ ಬೈರ್‌ಸ್ಟೋವ್ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲದಿರುವುದು ಇದೇ ಕಾರಣಕ್ಕೆ. ಐಪಿಎಲ್ ಮೆಗಾ ಹರಾಜಿನಲ್ಲಿ ಜಾನಿ ಬೈರ್‌ಸ್ಟೋವ್ ಕೂಡ ತಮ್ಮ ಹೆಸರನ್ನು ನೀಡಿದ್ದರು, ಆದರೆ ಅವರು ಸೇಲ್ ಆಗಲಿಲ್ಲ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ)ನಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾದ ಆಟಗಾರರನ್ನು ಮೇ 26 ರೊಳಗೆ ಬಿಡುಗಡೆ ಮಾಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿಗಳಿಗೆ ನಿರ್ದೇಶನ ನೀಡಿದೆ, ಇದರಿಂದಾಗಿ ಕೆಲ ಕ್ರಿಕೆಟಿಗರು ಐಪಿಎಲ್ ಪ್ಲೇಆಫ್‌ಗಳಿಗೆ ಲಭ್ಯವಿಲ್ಲ.

ದಕ್ಷಿಣ ಆಫ್ರಿಕಾ ಮೇ 31 ರಂದು ಬ್ರಿಟನ್‌ಗೆ ತೆರಳಬೇಕಾಗಿದೆ, ಪ್ಲೇ-ಆಫ್‌ಗಳು ಮೇ 29 ರಿಂದ ಪ್ರಾರಂಭವಾಗಲಿವೆ. ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್‌ ನಡುವೆ ಬಿಳಿ ಚೆಂಡಿನ ಸರಣಿಯೂ ಇದೇ ದಿನಾಂಕದಿಂದ ಪ್ರಾರಂಭವಾಗಲಿದೆ. ತಂಡಗಳಿಗೆ ಅಧಿಕೃತ ಸಂದೇಶದಲ್ಲಿ ಬಿಸಿಸಿಐ, ‘ದಕ್ಷಿಣ ಆಫ್ರಿಕಾದ ಆಟಗಾರರು ಮೇ 26, ಸೋಮವಾರದೊಳಗೆ ದಕ್ಷಿಣ ಆಫ್ರಿಕಾಕ್ಕೆ ಮರಳಬೇಕು’ ಎಂದು ಹೇಳಿದೆ. ವೆಸ್ಟ್ ಇಂಡೀಸ್ ಆಟಗಾರರು ಪಂದ್ಯಾವಳಿಯುದ್ದಕ್ಕೂ ಲಭ್ಯವಿರುತ್ತಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್