AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Test Cricket: 100ನೇ ಟೆಸ್ಟ್ ಪಂದ್ಯವಾಡಲಿರುವ 4 ಆಟಗಾರರು

Test Cricket: ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿರುವುದು ಕೇವಲ 13 ಆಟಗಾರರು ಮಾತ್ರ. ಅದರಲ್ಲೂ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಳಿಕ ಭಾರತದ ಯಾವುದೇ ಆಟಗಾರ ನೂರು ಟೆಸ್ಟ್ ಪಂದ್ಯಗಳ ಮೈಲುಗಲ್ಲನ್ನು ದಾಟಿಲ್ಲ. ಇದೀಗ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ.

Test Cricket: 100ನೇ ಟೆಸ್ಟ್ ಪಂದ್ಯವಾಡಲಿರುವ 4 ಆಟಗಾರರು
Test PlayersImage Credit source: Espn
TV9 Web
| Edited By: |

Updated on: Mar 05, 2024 | 11:37 AM

Share

ಈ ವಾರ ಟೆಸ್ಟ್ ಕ್ರಿಕೆಟ್​ನಲ್ಲಿ ನಾಲ್ವರು ಆಟಗಾರರು 100ನೇ ಪಂದ್ಯವನ್ನಾಡಲಿದ್ದಾರೆ. ಈ ನಾಲ್ವರಲ್ಲಿ ಟೀಮ್ ಇಂಡಿಯಾ (Team India) ಆಟಗಾರ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ. ಅಂದರೆ ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರೆ ಟೀಮ್ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಆಶ್ವಿನ್ ಪಾಲಾಗಲಿದೆ.

ಹಾಗೆಯೇ ಅತ್ತ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಕೂಡ 99 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಬೈರ್​ಸ್ಟೋವ್ ಕಾಣಿಸಿಕೊಂಡರೆ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧನೆ ಮಾಡಲಿದ್ದಾರೆ.

ಇತ್ತ ನ್ಯೂಝಿಲೆಂಡ್ ತಂಡದ ಇಬ್ಬರು ಆಟಗಾರರು ಕೂಡ 100ನೇ ಟೆಸ್ಟ್ ಪಂದ್ಯವನ್ನಾಡುವ ಹೊಸ್ತಿಲಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಕಣಕ್ಕಿಳಿದರೆ, 100 ಟೆಸ್ಟ್ ಪಂದ್ಯಗಳ ದಾಖಲೆ ಬರೆಯಲಿದ್ದಾರೆ.

ಹಾಗೆಯೇ ನ್ಯೂಝಿಲೆಂಡ್ ಟೆಸ್ಟ್ ತಂಡದ ನಾಯಕ ಟಿಮ್ ಸೌಥಿ ಕೂಟ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ 100 ಟೆಸ್ಟ್​ ಪಂದ್ಯಗಳನ್ನು ಪೂರೈಸಲಿದ್ದಾರೆ. ಅಂದರೆ ಕೇವಲ ದಿನಗಳ ಅಂತರದಲ್ಲಿ ನಾಲ್ವರು ಆಟಗಾರರು 100 ಟೆಸ್ಟ್ ಪಂದ್ಯಗಳನ್ನಾಡಿದ ದಾಖಲೆ ಬರೆಯಲಿರುವುದು ವಿಶೇಷ.

ಆಟಗಾರ ಪಂದ್ಯಗಳು 100ನೇ ಟೆಸ್ಟ್ ದಿನಾಂಕ
ಜಾನಿ ಬೈರ್​ಸ್ಟೋವ್ 99 ಮಾರ್ಚ್​ 7 (ಧರ್ಮಶಾಲಾ)
ಆರ್​. ಅಶ್ವಿನ್ 99 ಮಾರ್ಚ್​ 7 (ಧರ್ಮಶಾಲಾ)
ಕೇನ್ ವಿಲಿಯಮ್ಸನ್ ಮಾರ್ಚ್ 8 (ಕ್ರೈಸ್ಟ್​ಚರ್ಚ್​)
ಟಿಮ್ ಸೌಥಿ 99 ಮಾರ್ಚ್​ 8 (ಕ್ರೈಸ್ಟ್​ಚರ್ಚ್​)

100+ ಟೆಸ್ಟ್ ಪಂದ್ಯಗಳನ್ನಾಡಿರುವ ಭಾರತೀಯರು:

  1. ಸಚಿನ್ ತೆಂಡೂಲ್ಕರ್
  2. ರಾಹುಲ್ ದ್ರಾವಿಡ್
  3. ವಿವಿಎಸ್ ಲಕ್ಷ್ಮಣ್
  4. ಅನಿಲ್ ಕುಂಬ್ಳೆ
  5. ಕಪಿಲ್ ದೇವ್
  6. ಸುನಿಲ್ ಗವಾಸ್ಕರ್
  7. ದಿಲೀಪ್ ವೆಂಗ್​ಸರ್ಕಾರ್
  8. ಸೌರವ್ ಗಂಗೂಲಿ
  9. ವಿರಾಟ್ ಕೊಹ್ಲಿ
  10. ಇಶಾಂತ್ ಶರ್ಮಾ
  11. ಹರ್ಭಜನ್ ಸಿಂಗ್
  12. ವೀರೇಂದ್ರ ಸೆಹ್ವಾಗ್
  13. ಚೇತೇಶ್ವರ ಪೂಜಾರ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರವಿಚಂದ್ರನ್ ಅಶ್ವಿನ್ ಭಾರತದ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ 14ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಪ್ರಸ್ತುತ ಆಟಗಾರರಲ್ಲಿ ಈ ಸಾಧನೆ ಮಾಡಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸದ್ಯ ಸಕ್ರಿಯ ಆಟಗಾರರಲ್ಲಿ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಮಾತ್ರ ಈ ಸಾಧನೆ ಮಾಡಿದ್ದಾರೆ. ಇದೀಗ ರವಿಚಂದ್ರನ್ ಅಶ್ವಿನ್ ಕೂಡ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ