Sachin Tendulkar: ಪಂದ್ಯ ಮುಗಿದ ಬಳಿಕ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸಿದ ಎದುರಾಳಿ ತಂಡದ ಕೋಚ್
Jonty Rhodes: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿರುವ ಸಚಿನ್ ತೆಂಡುಲ್ಕರ್ಗೆ (Sachin Tendulkar) ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್-ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಕಾಲಿಗೆ ಬಿದ್ದು ನಮಸ್ಕರಿಸುವ ವಿಡಿಯೋ ವೈರಲ್ ಆಗುತ್ತಿದೆ.
ಐಪಿಎಲ್ (IPL) ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡ ಎಂದು ಖ್ಯಾತಿ ಪಡೆದಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಮಾತ್ರ ಒಂದು ಗೆಲುವಿಗಾಗಿ ಹಾತೊರೆಯುತ್ತಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಐದೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ಸತತ ಕಳಪೆ ಪ್ರದರ್ಶನ ತೋರುತ್ತಿದ್ದರೂ ತಂಡದ ಸದಸ್ಯರ ಘಟನೆತೆ ಚೂರು ದಕ್ಕೆಯಾಗಲಿಲ್ಲ. ಇದಕ್ಕೆ ಸಾಕ್ಷಿ ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿರುವ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ಗೆ (Sachin Tendulkar) ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ (Jonty Rhodes) ಕಾಲಿಗೆ ಬಿದ್ದು ನಮಸ್ಕರಿಸಿರುವುದು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ವೈರಲ್ ಆಗುತ್ತಿದೆ.
ಹೌದು, ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೆಂಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋಲಿನ ಕೊಂಡಿ ಕಳಚುವ ಅವಕಾಶ ಮುಂಬೈ ಬಳಗದ ಕೈಲಿತ್ತು. ಆದರೆ, ನಿರ್ಣಾಯಕ ಘಟ್ಟದಲ್ಲಿ ವಿಕೆಟ್‌ಗಳನ್ನು ಕೈಚೆಲ್ಲಿ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಳ್ಳಬೇಕಾಯಿತು. ಪಂದ್ಯದ ನಂತರ ಇತ್ತಂಡಗಳ ಬಳಗ ಆನ್‌ಫೀಲ್ಡ್‌ಗೆ ಇಳಿದು ಕೈ-ಕುಲುಕುತ್ತಿದ್ದ ಸಂದರ್ಭದಲ್ಲಿ ಜಾಂಟಿ ರೋಡ್ಸ್ ಮುಂಬೈ ಮೆಂಟರ್ ಸಚಿನ್ ತೆಂಡೂಲ್ಕರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
i missed this last night why is he like this? pic.twitter.com/AnlnoyZgOp
— m. (@idyyllliic) April 14, 2022
ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯ ಸಚಿನ್ ತೆಂಡೂಲ್ಕರ್, ಕ್ರಿಕೆಟ್‌ನಿಂದ ನಿವೃತ್ತಿಯಾಗಿ ಹಲವು ವರ್ಷಗಳು ಕಳೆದರೂ ಸಹ ಅವರನ್ನ ಆರಾಧಿಸುವವರೇನು ಕಮ್ಮಿ ಆಗಿಲ್ಲ. ಭಾರತೀಯರು ಸಾಮಾನ್ಯವಾಗಿ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಮತ್ತು ಗೌರವವನ್ನು ಪಡೆಯುವುದು ವಾಡಿಕೆ. ಆದರೆ ಕ್ರಮೇಣ ನಮ್ಮ ನೆಚ್ಚಿನ ಹೀರೋ, ಕ್ರಿಕೆಟಿಗನ ಕಾಲಿಗೆ ಮತ್ತೊಬ್ಬ ಮಾಜಿ ಕ್ರಿಕೆಟಿಗನು ಬೀಳುವಂತೆ ಪ್ರೀತಿ ವ್ಯಕ್ತಪಡಿಸುವ ಮಾರ್ಗವಾಗಿ ಮಾರ್ಪಟ್ಟಿದೆ. ಈ ಹಿಂದೆ ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್ ಕೂಡಾ ಮೈದಾನದಲ್ಲಿ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸಿದ್ದರು.
ಸಂಕಷ್ಟದಲ್ಲಿ ರೋಹಿತ್ ಶರ್ಮಾ:
ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಧಾನಗತಿಯ ಬೌಲಿಂಗ್ ಮಾಡಿದೆ. ಈ ಕಾರಣದಿಂದ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ 24 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ. ಉಳಿದಂತೆ ತಂಡದ ಆಟಗಾರರಿಗೆ 6 ಲಕ್ಷ ರೂ. ದಂಡ ಹೇರಲಾಗಿದೆ. ಇದಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ರೋಹಿತ್ ನಿಧಾನಗತಿಯ ಬೌಲಿಂಗ್ ನಡೆಸಿ 12 ಲಕ್ಷ ರೂ. ದಂಡನೆಗೆ ಒಳಗಾಗಿದ್ದರು. ಮುಂಬೈ ಇಂಡಿಯನ್ಸ್ ತಂಡ ಮುಂದಿನ ಪಂದ್ಯಗಳಲ್ಲಿ ನಿಗದಿತ ಅವಧಿಯಲ್ಲಿ 20 ಓವರ್ ಮೂಗಿಸಬೇಕಿದೆ. ಹೀಗೆ ಆಗದೇ ಇದ್ದಲ್ಲಿ ಇವರು ಶಿಕ್ಷೆಗೆ ಒಳಗಾಗಲಿದ್ದಾರೆ. ಒಂದು ವೇಳೆ ಮುಂಬೈ ಮೂರು ಪಂದ್ಯಗಳಲ್ಲಿ ಒಂದೇ ತಪ್ಪನ್ನು ಮಾಡಿದ್ದಲ್ಲಿ ರೋಹಿತ್ ಅವರಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗುತ್ತದೆ.
Hardik Pandya: ಹಾರ್ದಿಕ್ ಪಾಂಡ್ಯ ಬುಲೆಟ್ ಥ್ರೋಗೆ ಪೀಸ್ ಪೀಸ್ ಆದ ವಿಕೆಟ್: ರೋಚಕ ವಿಡಿಯೋ ನೋಡಿ