AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗುಜರಾತ್ ಟೈಟನ್ಸ್ ತಂಡಕ್ಕೆ ಶಾಕ್ ಕೊಟ್ಟ ಜೋಸ್ ಬಟ್ಲರ್

Jos Buttler Out of IPL 2025: ಐಪಿಎಲ್ 2025 ರಲ್ಲಿ ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಜೋಸ್ ಬಟ್ಲರ್ ರಾಷ್ಟ್ರೀಯ ಕರ್ತವ್ಯದ ಕಾರಣದಿಂದಾಗಿ ಉಳಿದ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಗುಜರಾತ್ ತಂಡವು ಅವರ ಬದಲಿಗೆ ಶ್ರೀಲಂಕಾದ ಆಟಗಾರ ಕುಸಲ್ ಮೆಂಡಿಸ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುತ್ತಿದೆ. ಬಟ್ಲರ್ ಈ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು, ಆದರೆ ಅವರ ಅನುಪಸ್ಥಿತಿಯು ಗುಜರಾತ್‌ಗೆ ಹೊಡೆತವಾಗಿದೆ

IPL 2025: ಗುಜರಾತ್ ಟೈಟನ್ಸ್ ತಂಡಕ್ಕೆ ಶಾಕ್ ಕೊಟ್ಟ ಜೋಸ್ ಬಟ್ಲರ್
Jos Buttler
ಪೃಥ್ವಿಶಂಕರ
|

Updated on: May 15, 2025 | 4:40 PM

Share

ಈ ಬಾರಿಯ ಐಪಿಎಲ್​ನಲ್ಲಿ (IPL 2025) ಚಾಂಪಿಯನ್ ಪಟ್ಟಕ್ಕೇರುವ ಪ್ರಮುಖ ಸ್ಪರ್ಧಿಗಳಲ್ಲಿ ಗುಜರಾತ್ ಟೈಟನ್ಸ್ (Gujarat Titans) ಕೂಡ ಒಂದಾಗಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್​ಗೆ ಇದೀಗ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ (Jos Buttler) ಈ ಸೀಸನ್​ನಲ್ಲಿ ಇನ್ನು ಮುಂದೆ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿಗೆ ತಿಳಿಸಿದ್ದಾರೆ. ರಾಷ್ಟ್ರೀಯ ಕರ್ತವ್ಯದ ಕಾರಣದಿಂದಾಗಿ ಬಟ್ಲರ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೀಗಾಗಿ ಬಟ್ಲರ್ ಅವರ ಸ್ಥಾನದಲ್ಲಿ ಗುಜರಾತ್ ಟೈಟನ್ಸ್, ಶ್ರೀಲಂಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕುಸಲ್ ಮೆಂಡಿಸ್ (Kusal Mendis) ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಉಳಿದ ಪಂದ್ಯಗಳನ್ನು ಬಟ್ಲರ್ ಆಡುವುದಿಲ್ಲ

ಗುಜರಾತ್ ಟೈಟನ್ಸ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಮೇ 17 ರಿಂದ ಪ್ರಾರಂಭವಾಗುವ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಆಡಲು ಸಾಧ್ಯವಾಗುವುದಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಬಟ್ಲರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇನ್ನು ಮುಂದೆ ಗುಜರಾತ್ ಪರ ಪಂದ್ಯಗಳನ್ನು ಆಡಲು ಸಾಧ್ಯವಾಗುವುದಿಲ್ಲ ಎಂದು ತಮ್ಮ ಫ್ರಾಂಚೈಸಿಗೆ ತಿಳಿಸಿದ್ದಾರೆ.

ವರದಿಯ ಪ್ರಕಾರ, ಈ ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಷ್ಟ್ರೀಯ ಕರ್ತವ್ಯದ ಕಾರಣದಿಂದಾಗಿ ಐಪಿಎಲ್ 2025 ರ ಉಳಿದ ಪಂದ್ಯಗಳಲ್ಲಿ ಇನ್ನು ಮುಂದೆ ಕಾಣಿಸಿಕೊಳ್ಳುವುದಿಲ್ಲ. ಅವರು ಈ ಮಾಹಿತಿಯನ್ನು ಗುಜರಾತ್ ಟೈಟನ್ಸ್‌ನ ಆಡಳಿತ ಮಂಡಳಿಗೆ ನೀಡಿದ್ದಾರೆ. ಹೀಗಾಗಿ ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್‌ ಪರ ಆಡುತ್ತಿರುವ ಕುಸಲ್ ಮೆಂಡಿಸ್ ಅವರನ್ನು ಸೇರಿಸಿಕೊಳ್ಳಲು ಜಿಟಿ ಸಿದ್ಧತೆ ನಡೆಸುತ್ತಿದೆ.

ಮುಂಬೈನಲ್ಲಿ ಮಕ್ಕಳೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ ಜೋಸ್ ಬಟ್ಲರ್; ವಿಡಿಯೋ ನೋಡಿ

ಉತ್ತಮ ಫಾರ್ಮ್‌ನಲ್ಲಿದ್ದ ಬಟ್ಲರ್

ಗುಜರಾತ್ ಟೈಟನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಈ ಸೀಸನ್​ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದರು. ಅವರು ಆಡಿದ 11 ಪಂದ್ಯಗಳ 11 ಇನ್ನಿಂಗ್ಸ್‌ಗಳಲ್ಲಿ 71.42 ಸರಾಸರಿಯಲ್ಲಿ 5 ಅರ್ಧಶತಕಗಳನ್ನು ಒಳಗೊಂಡಂತೆ 500 ರನ್ ಗಳಿಸಿದ್ದಾರೆ. ಈಗ ಅವರು ತಂಡದಿಂದ ಹೊರಗುಳಿದಿರುವುದು ಪ್ಲೇಆಫ್ ಪಂದ್ಯಗಳಲ್ಲಿ ಗುಜರಾತ್ ಟೈಟನ್ಸ್‌ನ ಸಮಸ್ಯೆಗಳನ್ನು ಹೆಚ್ಚಿಸಬಹುದು. ಇನ್ನು ಪಿಎಸ್ಎಲ್ 2025 ರಲ್ಲಿ ಕುಸಾಲ್ ಮೆಂಡಿಸ್ ಅವರ ಪ್ರದರ್ಶನದ ಬಗ್ಗೆ ಮಾತನಾಡಿದರೆ, ಅವರು ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರ 8 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 5 ಇನ್ನಿಂಗ್ಸ್‌ಗಳಲ್ಲಿ 35.75 ಸರಾಸರಿಯಲ್ಲಿ 143 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು