AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 12 ಸಿಕ್ಸ್​… ಐಪಿಎಲ್ ಮೆಗಾ ಹರಾಜಿಗೂ ಮುನ್ನ ಜೋಸ್ ಬಟ್ಲರ್ ಸಿಡಿಲಬ್ಬರ

ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 577 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. 204 ಸ್ಥಾನಗಳಿಗೆ ನಡೆಯಲಿರುವ ಈ ಹರಾಜು ಪ್ರಕ್ರಿಯೆಯು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜಿದ್ಧಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಬರೋಬ್ಬರಿ 12 ಸಿಕ್ಸ್​... ಐಪಿಎಲ್ ಮೆಗಾ ಹರಾಜಿಗೂ ಮುನ್ನ ಜೋಸ್ ಬಟ್ಲರ್ ಸಿಡಿಲಬ್ಬರ
Jos Buttler
ಝಾಹಿರ್ ಯೂಸುಫ್
|

Updated on: Nov 23, 2024 | 2:32 PM

Share

ಅಬುಧಾಬಿ ಟಿ10 ಲೀಗ್​ನಲ್ಲಿ ಜೋಸ್ ಬಟ್ಲರ್ ಸಿಡಿಲಬ್ಬರ ಮುಂದುವರೆದಿದೆ. ಡೆಕ್ಕನ್ ಗ್ಲಾಡಿಯೇಟರ್ಸ್ ಪರ ಕಣಕ್ಕಿಳಿಯುತ್ತಿರುವ ಬಟ್ಲರ್ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಚೆನ್ನೈ ಬ್ರೇವ್ಸ್ ವಿರುದ್ಧ ಕೇವಲ 24 ಎಸೆತಗಳಲ್ಲಿ ಅಜೇಯ 62 ರನ್ ಬಾರಿಸಿ ಜೋಸ್ ಬಟ್ಲರ್ ಡೆಕ್ಕನ್ ಗ್ಲಾಡಿಯೇಟರ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ ಅಜ್ಮಾನ್ ಬೋಲ್ಟ್ಸ್ ವಿರುದ್ಧ 22 ಎಸೆತಗಳಲ್ಲಿ 60 ರನ್ ಚಚ್ಚಿದ್ದಾರೆ.

ಅಂದರೆ 2 ಪಂದ್ಯಗಳಲ್ಲಿ 46 ಎಸೆತಗಳನ್ನು ಎದುರಿಸಿರುವ ಜೋಸ್ ಬಟ್ಲರ್, 265ರ ಸ್ಟ್ರೈಕ್ ರೇಟ್‌ನಲ್ಲಿ 122 ರನ್ ಕಲೆಹಾಕಿದ್ದಾರೆ. ಈ ಮೂಲಕ ಬಟ್ಲರ್ ಬ್ಯಾಟ್​ನಿಂದ ಮೂಡಿಬಂದಿರುವ ಸಿಕ್ಸ್​ಗಳ ಸಂಖ್ಯೆ 12 ಎಂಬುದು ವಿಶೇಷ.

ಇದೀಗ ಅಬುಧಾಬಿ ಟಿ10 ಲೀಗ್​ನಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ತಮ್ಮ ಫಾರ್ಮ್ ಪ್ರದರ್ಶಿಸಿರುವ ಬಟ್ಲರ್​ಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

ಮೊದಲ ಸುತ್ತಿನಲ್ಲಿ ಜೋಸ್ ಬಟ್ಲರ್:

ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಅಂದರೆ, ನವೆಂಬರ್ 24 ರಂದು ನಡೆಯಲಿರುವ ಬಿಡ್ಡಿಂಗ್​ನಲ್ಲಿ ಜೋಸ್ ಬಟ್ಲರ್ ಹೆಸರು ಕಾಣಿಸಿಕೊಳ್ಳಲಿದ್ದಾರೆ. ಮೊದಲ ಸುತ್ತಿನ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಬಟ್ಲರ್ ಅವರ ಮೂಲ ಬೆಲೆ 2 ಕೋಟಿ ರೂ.

ಇದೀಗ ಭರ್ಜರಿ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ಜೋಸ್ ಬಟ್ಲರ್ ಖರೀದಿಗಾಗಿ ಮೊದಲ ಸುತ್ತಿನಲ್ಲಿ ಉತ್ತಮ ಪೈಪೋಟಿ ಕಂಡು ಬರಲಿದೆ. ಏಕೆಂದರೆ ಬಟ್ಲರ್ ಆಯ್ಕೆಯಿಂದ ವಿಕೆಟ್ ಕೀಪರ್, ಆರಂಭಿಕ ಆಟಗಾರ ಹಾಗೂ ನಾಯಕನ ಸ್ಥಾನಗಳನ್ನು ತಂಬಬಹುದು. ಹೀಗಾಗಿಯೇ ಜೋಸ್ ಬಟ್ಲರ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಆಸಕ್ತಿ ಹೊಂದಿದ್ದು, ಹೀಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಗೆ ಭರ್ಜರಿ ಪೈಪೋಟಿಯಂತು ಕಂಡು ಬರಲಿದೆ.

ಇದನ್ನೂ ಓದಿ: ಹ್ಯಾಟ್ರಿಕ್ ಸೆಂಚುರಿ: ಹೊಸ ದಾಖಲೆ ಬರೆದ ತಿಲಕ್ ವರ್ಮಾ

IPL 2025 ಮೆಗಾ ಹರಾಜು:

ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 577 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. 204 ಸ್ಥಾನಗಳಿಗೆ ನಡೆಯಲಿರುವ ಈ ಹರಾಜು ಪ್ರಕ್ರಿಯೆಯು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜಿದ್ಧಾದಲ್ಲಿ ನಡೆಯಲಿದೆ. ಈ ಹರಾಜಿನ ಮೂಲಕ 10 ಫ್ರಾಂಚೈಸಿಗಳು ಮುಂಬರುವ ಐಪಿಎಲ್ ಸೀಸನ್​ಗಾಗಿ ತಮ್ಮ ತಂಡಗಳನ್ನು ರೂಪಿಸಿಕೊಳ್ಳಲಿದೆ.