ಆಸ್ಟ್ರೇಲಿಯಾ ತಂಡಕ್ಕೆ ಹೊಸ ನಾಯಕ ಆಯ್ಕೆ
Australia vs Pakistan: ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಸರಣಿಯ ಎರಡನೇ ಪಂದ್ಯವು ನವೆಂಬರ್ 8 ರಂದು ನಡೆಯಲಿದ್ದು, ಮೂರನೇ ಪಂದ್ಯ ನವೆಂಬರ್ 10 ರಂದು ಜರುಗಲಿದೆ.
ಪಾಕಿಸ್ತಾನ್ ವಿರುದ್ಧದ ಸರಣಿಯ ಉಳಿದ ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡದ ನಾಯಕರಾಗಿ ಜೋಶ್ ಇಂಗ್ಲಿಸ್ ಆಯ್ಕೆಯಾಗಿದ್ದಾರೆ. ಪಾಕ್ ವಿರುದ್ಧದ ಟಿ20 ಸರಣಿಯಿಂದ ಕ್ಯಾಪ್ಟನ್ ಮಿಚೆಲ್ ಮಾರ್ಷ್ ಹೊರಗುಳಿದಿದ್ದು, ಅವರ ಬದಲಿಗೆ ಇದೀಗ ಇಂಗ್ಲಿಸ್ ಅವರನ್ನು ಹಂಗಾಮಿ ನಾಯಕರಾಗಿ ನೇಮಿಸಲಾಗಿದೆ. ಹಾಗೆಯೇ ಪಾಕಿಸ್ತಾನ್ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಪ್ಯಾಟ್ ಕಮಿನ್ಸ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಆದರೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸಿದ್ಧತೆಗಾಗಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಸ್ಟೀವ್ ಸ್ಮಿತ್ ಅವರಂತಹ ಪ್ರಮುಖ ಆಟಗಾರರು ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಪಾಕ್ ವಿರುದ್ಧದ ಕೊನೆಯ ಏಕದಿನ ಪಂದ್ಯಕ್ಕೆ ಹಂಗಾಮಿ ನಾಯಕರಾಗಿ ಜೋಶ್ ಇಂಗ್ಲಿಸ್ ಆಯ್ಕೆಯಾಗಿದ್ದಾರೆ.
ಅದರಂತೆ ಆಸ್ಟ್ರೇಲಿಯಾ ತಂಡವು ಮುಂದಿನ ನಾಲ್ಕು ಪಂದ್ಯಗಳಲ್ಲಿ ಜೋಶ್ ಇಂಗ್ಲಿಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಪಾಕಿಸ್ತಾನ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ/ಮೊದಲೆರಡು ಪಂದ್ಯಗಳಿಗೆ), ಜೋಶ್ ಇಂಗ್ಲಿಸ್, (ನಾಯಕ/ ಮೂರನೇ ಪಂದ್ಯಕ್ಕೆ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್ (2ನೇ ಪಂದ್ಯಕ್ಕೆ ಮಾತ್ರ) , ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್ (2ನೇ ಪಂದ್ಯಕ್ಕೆ ಮಾತ್ರ), ಗ್ಲೆನ್ ಮ್ಯಾಕ್ಸ್‌ವೆಲ್, ಲ್ಯಾನ್ಸ್ ಮೋರಿಸ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್ (2ನೇ ಪಂದ್ಯಕ್ಕೆ), ಮಿಚೆಲ್ ಸ್ಟಾರ್ಕ್ (2ನೇ ಪಂದ್ಯಕ್ಕೆ), ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.
ಆಸ್ಟ್ರೇಲಿಯಾ ಟಿ20 ತಂಡ: ಜೋಶ್ ಇಂಗ್ಲಿಸ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.
ಇದನ್ನೂ ಓದಿ: IPL 2025: ಐಪಿಎಲ್ ಮೆಗಾ ಹರಾಜಿಗೆ ಇಟಲಿ ಆಟಗಾರ ಎಂಟ್ರಿ
ಪಾಕಿಸ್ತಾನ್ vs ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ:
- ಮೊದಲ T20I: ನವೆಂಬರ್ 14, ಬ್ರಿಸ್ಬೇನ್
- ಎರಡನೇ T20I: ನವೆಂಬರ್ 16, ಸಿಡ್ನಿ
- ಮೂರನೇ T20I: ನವೆಂಬರ್ 18, ಹೋಬರ್ಟ್.