Justin Langer: ಆಸ್ಟ್ರೇಲಿಯಾ ಹೆಡ್ ಕೋಚ್ ಸ್ಥಾನದಿಂದ ದಿಢೀರ್ ಕೆಳಗಿಳಿದ ಲ್ಯಾಂಗರ್: ಅನುಮಾನ ಮೂಡಿಸಿದ ಜಸ್ಟಿನ್ ನಡೆ

ಆಸ್ಟ್ರೇಲಿಯಾ ಪುರುಷ ತಂಡದ ಹೆಡ್ ಕೋಚ್ (Australia Head Coach) ಸ್ಥಾನದಿಂದ ಜಸ್ಟಿನ್ ಲ್ಯಾಂಗರ್ (Justin Langer) ದಿಢೀರ್ ಕೆಳಗಿಳಿದಿದ್ದಾರೆ. ಇವರ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ.

Justin Langer: ಆಸ್ಟ್ರೇಲಿಯಾ ಹೆಡ್ ಕೋಚ್ ಸ್ಥಾನದಿಂದ ದಿಢೀರ್ ಕೆಳಗಿಳಿದ ಲ್ಯಾಂಗರ್: ಅನುಮಾನ ಮೂಡಿಸಿದ ಜಸ್ಟಿನ್ ನಡೆ
justin langer
Follow us
TV9 Web
| Updated By: Vinay Bhat

Updated on:Feb 05, 2022 | 9:47 AM

ಕ್ರಿಕೆಟ್ ಜಗತ್ತಿನಲ್ಲಿ ಅಚ್ಚರಿ ಎಂಬಂತೆ ಆಸ್ಟ್ರೇಲಿಯಾ ಪುರುಷ ತಂಡದ ಹೆಡ್ ಕೋಚ್ (Australia Head Coach) ಸ್ಥಾನದಿಂದ ಜಸ್ಟಿನ್ ಲ್ಯಾಂಗರ್ (Justin Langer) ದಿಢೀರ್ ಕೆಳಗಿಳಿದಿದ್ದಾರೆ. ಇವರ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ. ಯಾಕೆಂದರೆ ಮೊನ್ನೆಯಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಆ್ಯಷಸ್‌ (Ashes Series) ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲ್ಲುವಂತೆ ಮಾಡಲು ಲ್ಯಾಂಗರ್‌ ಬಹುಮುಖ್ಯ ಪಾತ್ರ ವಹಿಸಿದ್ದರು. ಇಲ್ಲಿ ಪ್ಯಾಟ್‌ ಕಮಿನ್ಸ್‌ ಮುಂದಾಳತ್ವದ ಆಸ್ಟ್ರೇಲಿಯಾ 4-0 ಅಂತರದ ಭರ್ಜರಿ ಜಯ ದಾಖಲಿಸಿತ್ತು. ಅಲ್ಲದೆ ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್ ಪ್ರವಾಸ ಕೈಗೊಳ್ಳುತ್ತಿದ್ದು,ಇಲ್ಲಿ ಮೂರು ಟೆಸ್ಟ್​ ಪಂದ್ಯ ಹಾಗೂ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿವೆ. ಇದಕ್ಕೂ ಮುನ್ನ ಕೋಚ್‌ ಲ್ಯಾಂಗರ್‌ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕ್ರಿಕೆಟ್‌ನ ಮೂರೂ ಪ್ರಕಾರಗಳಿಗೆ ಆಸ್ಪ್ರೇಲಿಯಾ ತಂಡದ ನೂತನ ಪ್ರಧಾನ ಕೋಚ್‌ ಆಗಿ ಮಾಜಿ ಎಡಗೈ ಆರಂಭಕಾರ ಜಸ್ಟಿನ್‌ ಲ್ಯಾಂಗರ್‌ ಅವರನ್ನು ಕ್ರಿಕೆಟ್‌ ಆಸ್ಪ್ರೇಲಿಯಾ 2018 ಮೇನಲ್ಲಿ ಆಯ್ಕೆ ಮಾಡಿತ್ತು.

ಲ್ಯಾಂಗರ್‌ ಅವರ ಹಠಾತ್‌ ರಾಜಿನಾಮೆಗೆ ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿಲ್ಲ. ಅವರ ಅನುಪಸ್ಥಿತಿಯಲ್ಲಿ ಸಹಾಯಕ ಕೋಚ್‌ ಆಂಡ್ರೂ ಮೆಕ್‌ಡೊನಾಲ್ಡ್‌ ತಂಡದ ಕೋಚಿಂಗ್‌ ಜವಾಬ್ದಾರಿ ಹೊರುವ ಸಾಧ್ಯತೆ ಇದೆ. ಕ್ರೀಡಾ ನಿರ್ವಹಣಾ ಸಂಸ್ಥೆಯಾದ ಡಿಎಸ್‌ಇಜಿ ಮತ್ತು ಕ್ರಿಕೆಟ್‌ ಆಸ್ಟ್ರೇಲಿಯಾ ಲ್ಯಾಂಗರ್ ರಾಜಿನಾಮೆ ಸುದ್ದಿಯನ್ನು ಖಚಿತ ಪಡಿಸಿದೆ. “ಆಸ್ಟ್ರೇಲಿಯಾ ಪುರುಷರ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ಜಸ್ಟಿನ್‌ ಲ್ಯಾಂಗರ್‌ ಇಂದು ಮುಂಜಾನೆ ರಾಜೀನಾಮೆ ಘೋಷಿಸಿದ್ದಾರೆ,” ಎಂದು ಹೇಳಿದೆ.

2019ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಮೂಲಕ ಆಸ್ಟ್ರೇಲಿಯಾ ಹೆಡ್ ಕೋಚ್ ಜಸ್ಟಿನ್ ಲ್ಯಾಂಗರ್ ನೇತೃತ್ವದಲ್ಲಿ ತನ್ನ ಮೊದಲನೇ ಐಸಿಸಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತು. ಹಾಗೂ ಆ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಸೆಮಿಫೈನಲ್ ಹಂತವನ್ನು ತಲುಪಿ ಫೈನಲ್ ಪ್ರವೇಶಿಸಿರುವ ಅವಕಾಶವನ್ನು ಕೊನೆಯಲ್ಲಿ ಕೈ ತಪ್ಪಿಸಿಕೊಂಡಿತ್ತು. ಹೀಗೆ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದ್ದ ಆಸ್ಟ್ರೇಲಿಯಾ ನಂತರ ಅದೇ ವರ್ಷದಲ್ಲಿ ಇಂಗ್ಲೆಂಡ್ ನೆಲದಲ್ಲಿ ನಡೆದ ಆ್ಯಶಸ್ ಸರಣಿಯಲ್ಲಿ ಆಂಗ್ಲರನ್ನು ಬಗ್ಗುಬಡಿದಿತ್ತು.

2021 ರಲ್ಲಿ ಯುಎಇ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಜಸ್ಟಿನ್‌ ಲ್ಯಾಂಗರ್‌ ಮಾರ್ಗದರ್ಶನದಲ್ಲಿ ಆಸ್ಟ್ರೇಲಿಯಾ ತಂಡ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡ ವಿಶೇಷ ಸಾಧನೆ ಮಾಡಿತ್ತು. ಅಲ್ಲದೆ ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ನಡೆಯಲಿದೆ.

24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್​ ಪ್ರವಾಸ:

ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್​ ಪ್ರವಾಸ ಕೈಗೊಳ್ಳುತ್ತಿದ್ದು,ಇಲ್ಲಿ ಮೂರು ಟೆಸ್ಟ್​ ಪಂದ್ಯ ಹಾಗೂ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿವೆ. ಈ ಕುರಿತು ಮಾಹಿತಿ ನೀಡಿದ ಕ್ರಿಕೆಟ್​ ಆಸ್ಟ್ರೇಲಿಯಾ, ಮಾರ್ಚ್ 4ರಿಂದ ಉಭಯ ತಂಡಗಳ ನಡುವಿನ ಕ್ರಿಕೆಟ್​ ಟೂರ್ನಿ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಆಸ್ಟ್ರೇಲಿಯಾ 1998ರಲ್ಲಿ ಕೊನೆಯದಾಗಿ ಪಾಕಿಸ್ತಾನದ ಪ್ರವಾಸ ಕೈಗೊಂಡಿತ್ತು. ಆ ಬಳಿಕ 2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆದ ಬಳಿಕ ಅನೇಕ ವರ್ಷಗಳ ಕಾಲ ಯಾವುದೇ ತಂಡಗಳು ಇಲ್ಲಿಗೆ ಪ್ರವಾಸ ಕೈಗೊಂಡಿರಲಿಲ್ಲ.

ಇಂಗ್ಲೆಂಡ್‌ ಕೋಚ್‌ ಸಿಲ್ವರ್‌ವುಡ್‌ ವಜಾ:

ಆ್ಯಷಸ್ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ ತಂಡ ಅತ್ಯಂತ ಹೀನಾಯ ಪ್ರದರ್ಶನ ತೋರಿದ ಕಾರಣ ಹೆಡ್‌ ಕೋಚ್‌ ಸ್ಥಾನದಿಂದ ಕ್ರಿಸ್‌ ಸಿಲ್ವರ್‌ವುಡ್‌ ಅವರನ್ನು ವಜಾಗೊಳಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ಆಯಶ್ಲೆ ಜೈಲ್ಸ್‌ ಅವರನ್ನು ಕೆಳಗಿಳಿಸಿದ 24 ಗಂಟೆಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಆಸ್ಟ್ರೇಲಿಯ ವಿರುದ್ಧ ಇಂಗ್ಲೆಂಡ್‌ 0-4 ಅಂತರದ ಹೀನಾಯ ಸೋಲನುಭವಿಸಿತ್ತು. “ಇಷ್ಟು ಕಾಲ ಇಂಗ್ಲೆಂಡ್‌ ತಂಡದ ಕೋಚ್‌ ಆಗಿ ಕಾರ್ಯ ನಿರ್ವಹಿಸಿರುವುದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಇಲ್ಲಿನ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಜತೆ ಕೆಲಸ ಮಾಡಿರುವುದಕ್ಕೆ ಖುಷಿ ಇದೆ’ ಎಂದು ಸಿಲ್ವರ್‌ವುಡ್‌ ಹೇಳಿದ್ದಾರೆ.

U19 World Cup Final: ಇಂದು ಅಂಡರ್-19 ವಿಶ್ವಕಪ್ ಫೈನಲ್: 5ನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಭಾರತಕ್ಕೆ ಇಂಗ್ಲೆಂಡ್ ಸವಾಲು

Published On - 8:48 am, Sat, 5 February 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್