IPL 2024: ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ LSG

Justin Langer: ಆಸ್ಟ್ರೇಲಿಯಾ ಪರ 105 ಟೆಸ್ಟ್​ ಪಂದ್ಯಗಳನ್ನಾಡಿರುವ ಜಸ್ಟಿನ್ ಲ್ಯಾಂಗರ್ 23 ಶತಕ, 3 ದ್ವಿಶತಕ ಹಾಗೂ 30 ಅರ್ಧಶತಕಗಳೊಂದಿಗೆ 7696 ರನ್​ ಕಲೆಹಾಕಿದ್ದರು.

IPL 2024: ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ LSG
LSG
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 10, 2023 | 8:08 PM

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ (LSG) ಬಯಸಿದೆ. ಇದರ ಮೊದಲ ಭಾಗವಾಗಿ ಇದೀಗ ಹೊಸ ಕೋಚ್ ನೇಮಕಕ್ಕೆ LSG ಮುಂದಾಗಿದೆ ಎಂದು ವರದಿಯಾಗಿದೆ. ಅಂದರೆ ಪ್ರಸ್ತುತ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದೆ. ಅವರ ಬದಲಿಗೆ ಹೊಸ ಕೋಚ್ ಆಗಿ ಆಸ್ಟ್ರೇಲಿಯಾದ ಜಸ್ಟಿನ್ ಲ್ಯಾಂಗರ್ ಅವರನ್ನು ಆಯ್ಕೆ ಮಾಡಲು ಬಯಸಿದ್ದಾರೆ.

ಈ ಬಗ್ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಜಸ್ಟಿನ್ ಲ್ಯಾಂಗರ್​ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಈ ಮಾತುಕತೆಯು ಫಲಪ್ರದವಾದರೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಲಕ್ನೋ ತಂಡದ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಜಸ್ಟಿನ್ ಲ್ಯಾಂಗರ್ ಯಾಕೆ?

2021 ರಲ್ಲಿ ಆಸ್ಟ್ರೇಲಿಯಾ ಟಿ20 ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಲ್ಯಾಂಗರ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿದ್ದರು. ಅಷ್ಟೇ ಅಲ್ಲದೆ ಯುಎಇನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು.

ಅಷ್ಟೇ ಅಲ್ಲದೆ ಬಿಗ್ ಬ್ಯಾಷ್​ ಲೀಗ್​ನಲ್ಲಿ ಜಸ್ಟಿನ್ ಲ್ಯಾಂಗರ್ ಕೋಚಿಂಗ್​ನಲ್ಲಿ ನಾಲ್ಕು ವರ್ಷಗಳಲ್ಲಿ ಪರ್ತ್ ಸ್ಕಾರ್ಚರ್ಸ್ ತಂಡವು ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಆಸ್ಟ್ರೇಲಿಯಾದ ಮಾಜಿ ಆಟಗಾರನನ್ನು ಕೋಚ್ ಆಗಿ ನೇಮಿಸಿಕೊಳ್ಳಲು ಬಯಸಿದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ. ಒಂದು ವೇಳೆ ಲ್ಯಾಂಗರ್ LSG ತಂಡಕ್ಕೆ ಎಂಟ್ರಿ ಕೊಟ್ಟರೆ, ಟೀಮ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ: IPL 2024: ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್​ ಗಿಲ್ ಗುಡ್ ಬೈ..?

ಜಸ್ಟಿನ್ ಲ್ಯಾಂಗರ್ ಅಂಕಿ ಅಂಶಗಳು:

ಆಸ್ಟ್ರೇಲಿಯಾ ಪರ 105 ಟೆಸ್ಟ್​ ಪಂದ್ಯಗಳನ್ನಾಡಿರುವ ಜಸ್ಟಿನ್ ಲ್ಯಾಂಗರ್ 23 ಶತಕ, 3 ದ್ವಿಶತಕ ಹಾಗೂ 30 ಅರ್ಧಶತಕಗಳೊಂದಿಗೆ 7696 ರನ್​ ಕಲೆಹಾಕಿದ್ದರು. ಇನ್ನು 8 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಲ್ಯಾಂಗರ್ 160 ರನ್​ ಕಲೆಹಾಕಿದ್ದರು.

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ