AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್

Kane Williamson: ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್
Kane Williamson
TV9 Web
| Edited By: |

Updated on: Nov 14, 2023 | 9:01 PM

Share

ಏಕದಿನ ವಿಶ್ವಕಪ್​ 2023ರ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡರು. ಮಂಗಳವಾರ ನಡೆದ ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿವೀಸ್ ನಾಯಕ, ಭಾರತದ ವಿರುದ್ಧ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೆಮಿಫೈನಲ್​ನಲ್ಲಿ ಬಲಿಷ್ಠ ಭಾರತದ ವಿರುದ್ಧ ಕಣಕ್ಕಿಳಿಯುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ತಾಳ್ಮೆಯಿಂದ ಉತ್ತರಿಸಿದ ಕೇನ್ ವಿಲಿಯಮ್ಸನ್, ಟೀಮ್ ಇಂಡಿಯಾ ವಿರುದ್ಧ ಆಡುವುದು ಕಠಿಣ ಸವಾಲು. ಏಕೆಂದರೆ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ಆದರೆ ಫೈನಲ್​ಗೆ (ಸೆಮಿ ಫೈನಲ್​) ತಲುಪಿದರೆ ಎಲ್ಲವೂ ಮತ್ತೆ ಪ್ರಾರಂಭವಾಗುತ್ತದೆ. ಇಲ್ಲಿ ಆ ದಿನ ಒಂದು ತಂಡವಾಗಿ ಹೇಗೆ ಆಡುತ್ತೀರಿ ಎಂಬುದು ಮುಖ್ಯವಾಗುತ್ತದೆ. ಹೀಗಾಗಿ ನಾವು ಒಂದು ತಂಡವಾಗಿ ನಮ್ಮ ಗುರಿಯತ್ತ ಹೆಚ್ಚು ಗಮಹರಿಸುತ್ತೇವೆ ಎಂದು ತಿಳಿಸಿದ್ದಾರೆ.

ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಇದೇ ವೇಳೆ ನ್ಯೂಝಿಲೆಂಡ್ ತಂಡದ 15 ಆಟಗಾರರು ಕೂಡ ಫಿಟ್ ಆಗಿದ್ದಾರೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳಲು ಉತ್ತಮ ಆಯ್ಕೆಗಳಿವೆ. ಸೆಮಿಫೈನಲ್​ಗೂ ಮುನ್ನ ಪಿಚ್ ನೋಡಿ, ಆ ಬಳಿಕ ಮೌಲ್ಯಮಾಪನ ಮಾಡಿ ಆಡುವ ಬಳಗವನ್ನು ರೂಪಿಸಲಿದ್ದೇವೆ ಎಂದು ನ್ಯೂಝಿಲೆಂಡ್ ನಾಯಕ ತಿಳಿಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ