AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG ತಂಡಕ್ಕೆ ಕೇನ್ ವಿಲಿಯಮ್ಸನ್ ಎಂಟ್ರಿ… ಆದರೆ ಆಟಗಾರನಾಗಿ ಅಲ್ಲ..!

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ರಿಟೆನ್ಶನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

LSG ತಂಡಕ್ಕೆ ಕೇನ್ ವಿಲಿಯಮ್ಸನ್ ಎಂಟ್ರಿ... ಆದರೆ ಆಟಗಾರನಾಗಿ ಅಲ್ಲ..!
Kane Williamson
ಝಾಹಿರ್ ಯೂಸುಫ್
|

Updated on: Oct 16, 2025 | 11:54 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್  (LSG) ಫ್ರಾಂಚೈಸಿ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ ಅವರನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಆದರೆ ಆಟಗಾರನಾಗಿ ಅಲ್ಲ ಎಂಬುದು ವಿಶೇಷ. ಅಂದರೆ ಮುಂಬರುವ ಐಪಿಎಲ್​ನಲ್ಲಿ ವಿಲಿಯಮ್ಸನ್ ಎಲ್​ಎಸ್​ಜಿ ತಂಡ ಕಾರ್ಯತಂತ್ರದ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಕೇನ್ ವಿಲಿಯಮ್ಸನ್ ಈ ಹಿಂದೆ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ 2025 ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ವಿಲಿಯಮ್ಸನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಐಪಿಎಲ್​ನಲ್ಲಿ ಕಾಮೆಂಟೇಟರ್ ಆಗಿ ಕಾಣಿಸಿಕೊಂಡಿದ್ದರು.

ಇದೀಗ ಐಪಿಎಲ್ 2026ರ ಆರಂಭಕ್ಕೂ ಮುನ್ನ ಹೊಸ ಜವಾಬ್ದಾರಿವಹಿಸಿಕೊಳ್ಳಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಅಂದರೆ ಈ ಬಾರಿ ನಡೆಯಲಿರುವ ಮಿನಿ ಹರಾಜಿನಲ್ಲಿ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತ. ಇನ್ನು ಕಾಣಿಸಿಕೊಂಡರೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯೇ ಅವರನ್ನು ಖರೀದಿಸುವ ಸಾಧ್ಯತೆಯಿದೆ.

ಕೇನ್ ವಿಲಿಯಮ್ಸನ್ ಐಪಿಎಲ್ ವೃತ್ತಿಜೀವನ:

ಕೇನ್​ ವಿಲಿಯಮ್ಸನ್ ಐಪಿಎಲ್​ನ ಯಶಸ್ವಿ ಆಟಗಾರರಲ್ಲಿ ಒಬ್ಬರು. ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ಪರ ಒಟ್ಟು  79 ಐಪಿಎಲ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಲಿಯಮ್ಸನ್ 18 ಅರ್ಧಶತಕಗಳೊಂದಿಗೆ 2128 ರನ್ ಗಳಿಸಿದ್ದಾರೆ. ಅಲ್ಲದೆ 2016 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗಿ ಎಸ್​ಆರ್​ಹೆಚ್ ಪಡೆಯನ್ನು ಫೈನಲ್​ಗೆ ಕೊಂಡೊಯ್ದಿದ್ದರು.

ಆದರೆ ಕಳೆದ ಬಾರಿ ಐಪಿಎಲ್​ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ವಯಸ್ಸು. ಅಂದರೆ 35 ವರ್ಷದ ವಿಲಿಯಮ್ಸನ್​ಗಾಗಿ ಕೋಟಿ ಮೊತ್ತ ನೀಡಲು ಎಲ್ಲಾ ಫ್ರಾಂಚೈಸಿಗಳು ಹಿಂದೇಟು ಹಾಕಿದ್ದರು.

ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರ ಮನವಿ ಮೇರೆಗೆ ಕೇನ್ ವಿಲಿಯಮ್ಸನ್ ಅವರು ಎಲ್​ಎಸ್​ಜಿ ತಂಡ ಕಾರ್ಯತಂತ್ರದ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: IPL 2026: LSG ತಂಡದಿಂದ 11 ಕೋಟಿ ರೂ. ಆಟಗಾರನಿಗೆ ಗೇಟ್ ಪಾಸ್..!

LSG ಸಿಬ್ಬಂದಿ ವರ್ಗ:

ಐಪಿಎಲ್ ಸೀಸನ್-19 ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಸಿಬ್ಬಂದಿ ವರ್ಗದಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಅದರಂತೆ ಎಲ್‌ಎಸ್‌ಜಿಯ ಮುಖ್ಯ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ಮುಂದುವರೆಯಲಿದ್ದು, ಸ್ಪಿನ್ ಬೌಲಿಂಗ್ ಕೋಚ್ ಕಾರ್ಲ್ ಕ್ರೋವ್ ನೇಮಕವಾಗಿದ್ದಾರೆ. ಇದಲ್ಲದೆ, ಬೌಲಿಂಗ್ ಕೋಚ್ ಭರತ್ ಅರುಣ್ ಮತ್ತು ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸ್ನರ್ ಕೂಡ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

Follow Us
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು
ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು