AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಭಾರತಕ್ಕೆ ಸಂತಸದ ಸುದ್ದಿ; ನಿರ್ಣಾಯಕ ಟೆಸ್ಟ್​ನಿಂದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಔಟ್

IND vs NZ: ವಿಲಿಯಮ್ಸನ್ ಅವರ ಮೊಣಕೈ ಗಾಯವು ಅವರನ್ನು ಬಹಳ ಸಮಯದಿಂದ ಕಾಡುತ್ತಿದ್ದು, ಮುಂಬೈ ಟೆಸ್ಟ್‌ಗೆ ಮುಂಚಿತವಾಗಿ ಮತ್ತೊಮ್ಮೆ ಕಿವೀಸ್ ನಾಯಕನನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

IND vs NZ: ಭಾರತಕ್ಕೆ ಸಂತಸದ ಸುದ್ದಿ; ನಿರ್ಣಾಯಕ ಟೆಸ್ಟ್​ನಿಂದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಔಟ್
ಕೇನ್ ವಿಲಿಯಮ್ಸನ್
TV9 Web
| Edited By: |

Updated on: Dec 03, 2021 | 12:49 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಮಳೆಯಿಂದಾಗಿ ವಿಳಂಬವಾಗಿದೆ. ಆದರೆ ಈ ನಡುವೆ ನ್ಯೂಜಿಲೆಂಡ್‌ಗೆ ಕೆಟ್ಟ ಸುದ್ದಿಯೊಂದು ಬಂದಿದೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಅವರ ಮೊಣಕೈ ಗಾಯ. ಮುಂಬೈ ಟೆಸ್ಟ್‌ನಲ್ಲಿ ವಿಲಿಯಮ್ಸನ್ ಆಡುವುದಿಲ್ಲ ಎಂದು ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಖಚಿತಪಡಿಸಿದ್ದಾರೆ. ಅವರ ಸ್ಥಾನದಲ್ಲಿ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ.

ವಿಲಿಯಮ್ಸನ್ ಅವರ ಮೊಣಕೈ ಗಾಯವು ಅವರನ್ನು ಬಹಳ ಸಮಯದಿಂದ ಕಾಡುತ್ತಿದ್ದು, ಮುಂಬೈ ಟೆಸ್ಟ್‌ಗೆ ಮುಂಚಿತವಾಗಿ ಮತ್ತೊಮ್ಮೆ ಕಿವೀಸ್ ನಾಯಕನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ವಿಡಿಯೋ ಬಿಡುಗಡೆ ಮಾಡಿ ಕೋಚ್ ಗ್ಯಾರಿ ಸ್ಟೆಡ್ ಈ ಮಾಹಿತಿ ನೀಡಿದ್ದಾರೆ. “ದುರದೃಷ್ಟವಶಾತ್ ಕೇನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹಿಂದಿನ ಪಂದ್ಯದ ವೇಳೆ ಅವರ ಎಡ ಮೊಣಕೈ ಗಾಯ ಮತ್ತೆ ಕಾಣಿಸಿಕೊಂಡಿತ್ತು. ಹಾಗಾಗಿ ನಾವು ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ನಾವು ಅವರಿಗೆ ಸ್ವಲ್ಪ ವಿಶ್ರಾಂತಿ ನೀಡಬೇಕು ಮತ್ತು ನಂತರ ಅವರನ್ನು ಬಲಪಡಿಸಬೇಕು. ಈ ಪಂದ್ಯದಲ್ಲಿ ಕೇನ್ ಆಡದಿರುವುದು ಬೇಸರ ತಂದಿದೆ ಎಂದಿದ್ದಾರೆ.

ಯೋಜನೆ ಅಗತ್ಯವಿದೆ ಕೋಚ್, ಕೇನ್‌ಗೆ ಇದು ತುಂಬಾ ಕಷ್ಟದ ಸಮಯ. ಅವರು ನಿರಂತರವಾಗಿ ಈ ಗಾಯದ ವಿರುದ್ಧ ಹೋರಾಡುತ್ತಿದ್ದಾರೆ. ನಾವು ವರ್ಷಪೂರ್ತಿ ಅವರ ಗಾಯವನ್ನು ನಿಭಾಯಿಸುತ್ತಿದ್ದೇವೆ. ಟಿ 20 ವಿಶ್ವಕಪ್, ನಂತರ ಟೆಸ್ಟ್ ಕ್ರಿಕೆಟ್ ಆಡುವುದು ಅವರ ಬ್ಯಾಟಿಂಗ್ ಮೇಲೆ ಹೊರೆ ಹೆಚ್ಚಿಸಿತು ಮತ್ತು ಮೊಣಕೈ ಗಾಯ ಮತ್ತೆ ಕಂಡುಬಂದಿತು. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕೇನ್‌ಗೆ ಇದು ಸವಾಲಿನ ವರ್ಷವಾಗಿದೆ. ನಾವು ಅವರಿಗಾಗಿ ಉತ್ತಮ ಯೋಜನೆಯನ್ನು ಸಿದ್ಧಪಡಿಸುವುದು ಮತ್ತು ಈ ಗಾಯಗಳು ಅವರಿಗೆ ಮತ್ತೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ.

ವಿಲಿಯಮ್ಸನ್ ಸ್ಥಾನದಲ್ಲಿ ಯಾವ ಆಟಗಾರನಿಗೆ ಅವಕಾಶ ಸಿಗುತ್ತದೆ ಎಂಬುದು ಟಾಸ್ ಬಳಿಕ ತಿಳಿಯಲಿದೆ ಆದರೆ ಭಾರತಕ್ಕೆ ಖಂಡಿತಾ ಸಮಾಧಾನದ ವಿಚಾರ. ಕೇನ್ ವಿಲಿಯಮ್ಸನ್ ಅವರನ್ನು ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳೆಂದು ಪರಿಗಣಿಸಲಾಗಿದೆ. ಅವರು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ಉಂಟುಮಾಡಬಹುದು. ಈಗ ಅವರಿಲ್ಲದಿರುವುದರಿಂದ ಭಾರತಕ್ಕೆ ಕೆಲಸ ಸುಲಭವಾಗುತ್ತದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ