ನ್ಯೂಝಿಲೆಂಡ್ ತಂಡದ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ (Kane Williamson) ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಟಿ20 ವಿಶ್ವಕಪ್ನಲ್ಲಿನ ನ್ಯೂಝಿಲೆಂಡ್ ತಂಡದ ಹೀನಾಯ ಪ್ರದರ್ಶನದ ಹಿನ್ನಲೆ, ವಿಲಿಯಮ್ಸನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅದರಂತೆ ಏಕದಿನ ಮತ್ತು ಟಿ20 ತಂಡಗಳ ನಾಯಕತ್ವದಿಂದ ಕೆಳಗಿಳಿಯಲು ವಿಲಿಯಮ್ಸನ್ ನಿರ್ಧರಿಸಿದ್ದಾರೆ.
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಸೋತಿದ್ದ ಕಿವೀಸ್ ಪಡೆ, ಆ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಸೋಲನುಭವಿಸಿತ್ತು. ಈ ಎರಡು ಸೋಲುಗಳೊಂದಿಗೆ ನ್ಯೂಝಿಲೆಂಡ್ ತಂಡ ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲೇ ಹೊರಬಿದ್ದಿದೆ.
ಈ ಹೀನಾಯ ಪ್ರದರ್ಶನದ ಬೆನ್ನಲ್ಲೇ ಕೇನ್ ವಿಲಿಯಮ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೆ 2024-25 ಋತುವಿಗಾಗಿ ಮಂಡಳಿಯಿಂದ ಕೇಂದ್ರೀಯ ಒಪ್ಪಂದವನ್ನು ಸಹ ನಿರಾಕರಿಸಿದ್ದಾರೆ.
ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇನ್ ವಿಲಿಯಮ್ಸನ್ ತೆಗೆದುಕೊಂಡ ನಿರ್ಧಾರವನ್ನು ಪ್ರಕಟಿಸಿದ್ದು, ಸ್ಟಾರ್ ಬ್ಯಾಟರ್ ತನ್ನ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ವಿಸ್ತರಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಅದರಂತೆ ವೈಟ್ ಬಾಲ್ ಕ್ರಿಕೆಟ್ನಲ್ಲಿ ನಾಯಕನಾಗಿ ಮುಂದುವರೆಯಲು ಇಚ್ಛಿಸುತ್ತಿಲ್ಲ. ಹೀಗಾಗಿ ನ್ಯೂಝಿಲೆಂಡ್ ತಂಡಕ್ಕೆ ಬದಲಿ ಕ್ಯಾಪ್ಟನ್ನನ್ನು ಆಯ್ಕೆ ಮಾಡುವಂತೆ ವಿಲಿಯಮ್ಸನ್ ಮಂಡಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಲಾಗಿದೆ.
ಇದಾಗ್ಯೂ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ನಾಯಕನಾಗಿ ಮುಂದುವರೆಯುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಕೇನ್ ವಿಲಿಯಮ್ಸನ್ ಕೇವಲ ಆಟಗಾರನಾಗಿ ನ್ಯೂಝಿಲೆಂಡ್ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.
ಅಂದರೆ ಮೂರು ಮಾದರಿಯಲ್ಲೂ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಝಿಲೆಂಡ್ ತಂಡವು ಶೇ.50 ಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಹೀಗಾಗಿಯೇ ವಿಲಿಯಮ್ಸನ್ ಅವರನ್ನು ನ್ಯೂಝಿಲೆಂಡ್ ತಂಡದ ಅತ್ಯಂತ ಯಶಸ್ವಿ ನಾಯಕ ಎಂದು ಪರಿಗಣಿಸಲಾಗುತ್ತದೆ.
ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್
Published On - 7:56 am, Wed, 19 June 24