AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs GT: ಐಪಿಎಲ್ 2022 ರಲ್ಲಿ ಮೊದಲ ಸೋಲು ಕಂಡ ಹಾರ್ದಿಕ್ ಪಡೆ: ಬಲಿಷ್ಠವಾಗುತ್ತಿದೆ ಎಸ್​ಆರ್​​ಹೆಚ್

IPL 2022: ಎಸ್​ಆರ್​​ಹೆಚ್ ತಂಡ 8 ವಿಕೆಟ್​​ಗಳ ಅಮೋಘ ಜಯ ಕಂಡಿದ್ದು ಸತತ ಎರಡನೇ ಗೆಲುವಿನೊಂದಿಗೆ ಬಲಿಷ್ಠವಾಗಿ ಕಮ್​ಬ್ಯಾಕ್ ಮಾಡಿದೆ. ಕೇನ್ ವಿಲಿಯಮ್ಸನ್ (Kane Williason) ನಾಯಕನ ಆಟ ಹೈದರಾಬಾದ್ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು.

SRH vs GT: ಐಪಿಎಲ್ 2022 ರಲ್ಲಿ ಮೊದಲ ಸೋಲು ಕಂಡ ಹಾರ್ದಿಕ್ ಪಡೆ: ಬಲಿಷ್ಠವಾಗುತ್ತಿದೆ ಎಸ್​ಆರ್​​ಹೆಚ್
SRH vs GT IPL 2022
TV9 Web
| Edited By: |

Updated on: Apr 12, 2022 | 7:33 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೋಮವಾರ ನಡೆದ 21ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್​ರೈಸರ್ಸ್​​ ಹೈದರಾಬಾದ್ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (SRH vs GT) ತಂಡ ಸೋಲುಂಡಿದೆ. ಈ ಮೂಲಕ ಐಪಿಎಲ್ 2022 ರಲ್ಲಿ (IPL 2022) ಹ್ಯಾಟ್ರಿಕ್ ಗೆಲುವಿನ ಬಳಿಕ ಇದೀಗ ಸೋಲಿನ ರುಚಿ ಕಂಡಿದೆ. ಇತ್ತ ಎಸ್​ಆರ್​​ಹೆಚ್ ತಂಡ 8 ವಿಕೆಟ್​​ಗಳ ಅಮೋಘ ಜಯ ಕಂಡಿದ್ದು ಸತತ ಎರಡನೇ ಗೆಲುವಿನೊಂದಿಗೆ ಬಲಿಷ್ಠವಾಗಿ ಕಮ್​ಬ್ಯಾಕ್ ಮಾಡಿದೆ. ಕೇನ್ ವಿಲಿಯಮ್ಸನ್ (Kane Williason) ನಾಯಕನ ಆಟ ಹೈದರಾಬಾದ್ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಗೆಲುವಿನೊಂದಿಗೆ ಸನ್​ರೈಸರ್ಸ್​ ಅಂಕಪಟ್ಟಿಯಲ್ಲಿ ನಾಲ್ಕು ಪಂದ್ಯಗಳ ಪೈಕಿ ಎರಡರಲ್ಲಿ ಸೋಲು ಗೆಲುವು ಕಂಡು 4 ಪಾಯಿಂಟ್​ನೊಂದಿಗೆ ಎಂಟನೇ ಸ್ಥಾನದಲ್ಲಿದೆ. ಇತ್ತ ಗುಜರಾತ್ ತಂಡ ಐದನೇ ಸ್ಥಾನಕ್ಕೆ ಕುಸಿದಿದ್ದು ನಾಲ್ಕು ಪಂದ್ಯಗಳ ಪೈಕಿ ಒಂದರಲ್ಲಿ ಸೋಲುಂಡು 6 ಅಂಕ ಸಂಪಾದಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಪರ ಓಪನರ್​ಗಳಾದ ಮ್ಯಾಥ್ಯೂ ವೇಡ್ ಮತ್ತು ಶುಭ್ಮನ್ ಗಿಲ್ ಉತ್ತಮ ಆರಂಭ ಕಟ್ಟಿ ಕೊಡುವಲ್ಲಿ ವಿಫಲರಾದರು. ಮ್ಯಾಥ್ಯೂ ವೇಡ್ 19 ರನ್ ಕಲೆಹಾಕಿದರೆ, ಗಿಲ್ ಆಟ 7 ರನ್​ಗೆ ಅಂತ್ಯವಾಯಿತು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 11 ರನ್, ಡೇವಿಡ್ ಮಿಲ್ಲರ್ 12 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಇನ್ನೊಂದೆಡೆ ನಾಯಕನ ಆಟವಾಡಿದ ಪಾಂಡ್ಯ ತಂಡಕ್ಕೆ ಆಸರೆಯಾದರು. ಅವರಿಗೆ ಅಭಿನವ್ ಮನೋಹರ್ ಅವರಿಂದಲೂ ಉತ್ತಮ ಬೆಂಬಲ ದೊರಕಿತು. ಅಲ್ಲದೆ ಐದನೇ ವಿಕೆಟ್‌ಗೆ 50 ರನ್‌ಗಳ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾದರು.

21 ಎಸೆತಗಳನ್ನು ಎದುರಿಸಿದ ಅಭಿನವ್ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು. ಅತ್ತ ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಪಾಂಡ್ಯ 50 ರನ್ (42 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಔಟಾಗದೆ ಉಳಿದರು. ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತು. ಗುಜರಾತ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಹೈದರಾಬಾದ್ ತಂಡದ ಬೌಲರ್ಸ್ ಯಶಸ್ವಿಯಾದರು. ಭುನೇಶ್ವರ್ ಕುಮಾರ್ ಮತ್ತು ಟಿ ನಟರಾಜನ್ ತಲಾ 2 ವಿಕೆಟ್ ಪಡೆಯುವ ಮೂಲಕ ಮಿಂಚಿದರೆ, ಮಾರ್ಕೋ ಜಾನ್ಸಿನ್ ಮತ್ತು ಉಮ್ರಾನ್ ಮಲ್ಲಿಕ್ ತಲಾ 1 ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್, ವಿಲಿಯಮ್ಸನ್ ಕಲಾತ್ಮಕ ಬ್ಯಾಟಿಂಗ್ ನೆರವಿನಿಂದ ಇನ್ನೂ ಐದು ಎಸೆತಗಳು ಬಾಕಿ ಉಳಿದಿರುವಂತೆಯೇ 19.1 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಎಸ್‌ಆರ್‌ಎಚ್‌ಗೆ ಅಭಿಷೇಕ್ ಶರ್ಮಾ ಹಾಗೂ ನಾಯಕ ಕೇನ್ ವಿಲಿಯಮ್ಸನ್ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 64 ರನ್ ಒಟ್ಟುಗೂಡಿಸಿದರು. ಆದರೆ ಉತ್ತಮವಾಗಿ ಆಡುತ್ತಿದ್ದ ಅಭಿಷೇಕ್ ಶರ್ಮಾ (42 ರನ್, 32 ಎಸೆತ, 6 ಬೌಂಡರಿ) ವಿಕೆಟ್ ನಷ್ಟವಾಯಿತು.ಅತ್ತ ಆಕರ್ಷಕ ಇನ್ನಿಂಗ್ಸ್ ಕಟ್ಟಿದ ವಿಲಿಯಮ್ಸನ್ 42 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಆದರೆ ಅರ್ಧಶಕದ (57 ರನ್, 46 ಎಸೆತ, 2 ಬೌಂಡರಿ, 4 ಸಿಕ್ಸರ್) ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು. ಕೊನೆಯ ಹಂತದಲ್ಲಿ ನಿಕೋಲಸ್ ಪೂರನ್ (34*) ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಸ್​ಆರ್​​ಹೆಚ್ ಸತತ ಎರಡನೇ ಗೆಲುವು ಕಂಡಿತು. ಕೇನ್ ಪಂದ್ಯಶ್ರೇಷ್ಠ ಬಾಜಿಕೊಂಡರು.

Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ