AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Record: 11 ಸಿಕ್ಸ್, 18 ಫೋರ್: ದ್ವಿಶತಕ ಸಿಡಿಸಿ ದಾಖಲೆ ಬರೆದ ಯುವ ಬ್ಯಾಟ್ಸ್​ಮನ್

Ali orr double century: ಈ ಹಂತದಲ್ಲಿ ಜೊತೆಗೂಡಿದ ನಾಯಕ ಚೇತೇಶ್ವರ ಪೂಜಾರ ಹಾಗೂ ಅಲಿ ಓರ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ನಾಲ್ಕನೇ ವಿಕೆಟ್‌ಗೆ 140 ರನ್‌ಗಳ ಅದ್ಭುತ ಜೊತೆಯಾಟವಾಡುವ ಮೂಲಕ ಈ ಜೋಡಿ ಇಡೀ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿದರು.

New Record: 11 ಸಿಕ್ಸ್, 18 ಫೋರ್: ದ್ವಿಶತಕ ಸಿಡಿಸಿ ದಾಖಲೆ ಬರೆದ ಯುವ ಬ್ಯಾಟ್ಸ್​ಮನ್
ali orr
TV9 Web
| Edited By: |

Updated on: Aug 20, 2022 | 2:25 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್​ನಲ್ಲಿ ಯುವ ಬ್ಯಾಟ್ಸ್​ಮನ್ ಅಲಿ ಓರ್ (Ali Orr)  ದ್ವಿಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶುಕ್ರವಾರ ನಡೆದ ಗ್ರೂಪ್​-ಎ ನಲ್ಲಿನ ಪಂದ್ಯದಲ್ಲಿ ಸಸೆಕ್ಸ್ ಹಾಗೂ ಸೋಮರ್​ಸೆಟ್​ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೋಮರ್​ಸೆಟ್ ತಂಡದ ನಾಯಕ ಮ್ಯಾಟ್​ ರೇನ್​ಶಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್​ ಆರಂಭಿಸಿದ ಸಸೆಕ್ಸ್ ಪರ ಅಲಿ ಓರ್ ಹಾಗೂ ಡೇನಿಯಲ್ ಇಬ್ರಾಹಿಂ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ 3ನೇ ಓವರ್​ನ ಅಂತಿಮ ಎಸೆತದಲ್ಲಿ ವಿಕೆಟ್ ಒಪ್ಪಿಸುವ ಮೂಲಕ ಡೇನಿಯ್ ಇಬ್ರಾಹಿಂ (1) ನಿರ್ಗಮಿಸಿದರು. ಆ ಬಳಿಕ ಬಂದ ಟಾಮ್ ಕ್ಲಾರ್ಕ್​ (12) ರನೌಟ್​ಗೆ ಬಲಿಯಾದರು.

ಈ ಹಂತದಲ್ಲಿ ಜೊತೆಗೂಡಿದ ನಾಯಕ ಚೇತೇಶ್ವರ ಪೂಜಾರ ಹಾಗೂ ಅಲಿ ಓರ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ನಾಲ್ಕನೇ ವಿಕೆಟ್‌ಗೆ 140 ರನ್‌ಗಳ ಅದ್ಭುತ ಜೊತೆಯಾಟವಾಡುವ ಮೂಲಕ ಈ ಜೋಡಿ ಇಡೀ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿದರು. ಈ ವೇಳೆ 66 ಎಸೆತಗಳಲ್ಲಿ 66 ರನ್​ ಬಾರಿಸಿದ್ದ ಪೂಜಾರ ಅಲ್​ಡ್ರಿಡ್ಜ್​ಗೆ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಅಲಿ ಓರ್ ಅಷ್ಟರಲ್ಲಾಗಲೇ ಸಿಡಿಲಬ್ಬರ ಆರಂಭಿಸಿದ್ದರು. ಸೋಮರ್​ಸೆಟ್ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಅಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅದರಂತೆ 106 ಎಸೆತಗಳಲ್ಲಿ ಶತಕ ಪೂರೈಸಿದ ಅಲಿ ಓರ್ ಆ ನಂತರ ರನ್​ ಗಳಿಕೆಯ ವೇಗವನ್ನು ಹೆಚ್ಚಿಸಿದರು. ಪರಿಣಾಮ ಮುಂದಿನ 100 ರನ್​ಗಳು ಕೇವಲ 53 ಎಸೆತಗಳಲ್ಲಿ ಮೂಡಿಬಂತು. ಅದರಂತೆ ಕೇವಲ 159 ಎಸೆತಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಹೊಸ ದಾಖಲೆ ಬರೆದರು.

ಈ ಮೂಲಕ ರಾಯಲ್ ಲಂಡನ್ ಕಪ್​ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಸಸೆಕ್ಸ್ ಆಟಗಾರ, ಸಸೆಕ್ಸ್ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಅಲಿ ಓರ್​ ನಿರ್ಮಿಸಿದರು. ಅಂತಿಮವಾಗಿ 161 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 206 ರನ್​ ಬಾರಿಸುವ ಮೂಲಕ ಅಲಿ ಓರ್ ತಂಡದ ಮೊತ್ತವನ್ನು ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 397 ಕ್ಕೆ ತಂದು ನಿಲ್ಲಿಸಿದರು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸೋಮರ್​ಸೆಟ್ ತಂಡವು 38.2 ಓವರ್​ಗಳಲ್ಲಿ 196 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 201 ರನ್​ಗಳ ಅಂತರದೊಂದಿಗೆ ಸೋಲೊಪ್ಪಿಕೊಂಡಿತು. ಸಸೆಕ್ಸ್ ಪರ ಅಲಿ ಓರ್​ ಕಲೆಹಾಕಿದ ಮೊತ್ತವನ್ನು ಸೋಮರ್​ಸೆಟ್ ಬ್ಯಾಟ್ಸ್​ಮನ್ ಜೊತೆಯಾಗಿಲ್ಲ ಕಲೆಹಾಕಿಲ್ಲ ಎಂಬುದು ವಿಶೇಷ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ