Royal London Cup: ವಿದೇಶಿ ಲೀಗ್​ನಲ್ಲಿ ಟೀಮ್ ಇಂಡಿಯಾ ಆಟಗಾರನ ಸ್ಪೋಟಕ ಶತಕ..!

Cheteshwar Pujara: ಮಧ್ಯಮ ಕ್ರಮಾಂಕದಲ್ಲಿ ಮೈಕೆಲ್ ಬರ್ಗಸ್ 58 ರನ್ ಸಿಡಿಸುವುದರೊಂದಿಗೆ ವಾರ್ವಿಕ್​ಶೈರ್ ತಂಡವು ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 310 ರನ್​ ಕಲೆಹಾಕಿದರು. ಈ ಬೃಹತ್ ಗುರಿ ಬೆನ್ನತ್ತಿದ ಸಸೆಕ್ಸ್ ತಂಡಕ್ಕೆ ಒಲಿಸ್ಟರ್ ಓರ್​ ಉತ್ತಮ ಆರಂಭ ಒದಗಿಸಿದ್ದರು.

Royal London Cup: ವಿದೇಶಿ ಲೀಗ್​ನಲ್ಲಿ ಟೀಮ್ ಇಂಡಿಯಾ ಆಟಗಾರನ ಸ್ಪೋಟಕ ಶತಕ..!
cheteshwar pujara
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 13, 2022 | 10:36 AM

ಟೀಮ್ ಇಂಡಿಯಾ (Team India) ಟೆಸ್ಟ್​ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ (Cheteshwar Pujara) ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್​ನಲ್ಲಿ (Royal London Cup) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಇದೀಗ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಏಕದಿನ ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯ ಗ್ರೂಪ್-ಎ ನಲ್ಲಿ ನಡೆದ ಪಂದ್ಯದಲ್ಲಿ ವಾರ್ವಿಕ್​ಶೈರ್ ಹಾಗೂ ಸಸೆಕ್ಸ್ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ವಾರ್ವಿಕ್​ಶೈರ್ ತಂಡದ ಪರ ಆರಂಭಿಕ ಆಟಗಾರ ರೋಬಾರ್ಟ್​ ಯಾಟ್ಸ್​​ 111 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 114 ರನ್​ ಬಾರಿಸಿದ್ದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೈಕೆಲ್ ಬರ್ಗಸ್ 58 ರನ್ ಸಿಡಿಸುವುದರೊಂದಿಗೆ ವಾರ್ವಿಕ್​ಶೈರ್ ತಂಡವು ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 310 ರನ್​ ಕಲೆಹಾಕಿದರು. ಈ ಬೃಹತ್ ಗುರಿ ಬೆನ್ನತ್ತಿದ ಸಸೆಕ್ಸ್ ತಂಡಕ್ಕೆ ಒಲಿಸ್ಟರ್ ಓರ್​ ಉತ್ತಮ ಆರಂಭ ಒದಗಿಸಿದ್ದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

81 ರನ್​ ಬಾರಿಸುವ ಮೂಲಕ ಚೇಸಿಂಗ್​ಗೆ ಉತ್ತಮ ಅಡಿಪಾಯ ಹಾಕಿಕೊಟ್ಟು ಒಲಿಸ್ಟರ್ ಓರ್ ವಿಕೆಟ್ ಒಪ್ಪಿಸಿದ್ದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಸೆಕ್ಸ್ ತಂಡದ ನಾಯಕ ಚೇತೇಶ್ವರ ಪೂಜಾರ ಎಲ್ಲರೂ ನಿಬ್ಬೆರಗಾಗುವಂತಹ ಇನಿಂಗ್ಸ್​ ಆಡಿದರು.

ವಾರ್ವಿಕ್​ಶೈರ್ ತಂಡದ ಬೌಲರ್​ಗಳ ಬೆಂಡೆತ್ತಿದ ಪೂಜಾರ ವೇಗಿ ಲಿಯಾಮ್ ನಾರ್ವೆಲ್ ಎಸೆದ 45ನೇ ಓವರ್​ನಲ್ಲಿ ಬರೋಬ್ಬರಿ 22 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಕೇವಲ 73 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಬ್ಯಾಟ್ ಮೇಲೆಕ್ಕೆತ್ತಿದರು. ಇನ್ನು ತಮ್ಮ ಈ ಸ್ಪೋಟಕ ಇನಿಂಗ್ಸ್​ನಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಬಾರಿಸಿ ಅಬ್ಬರಿಸಿದರು. ಅಂತಿಮವಾಗಿ  79 ಎಸೆತಗಳಲ್ಲಿ 107 ರನ್​ಗಳಿಸಿ ಪೂಜಾರ 49ನೇ ಓವರ್​ನಲ್ಲಿ ವಿಕೆಟ್​ ಒಪ್ಪಿಸಿದರು.

ಭಾರತೀಯ ಆಟಗಾರನ ಈ ವಿಕೆಟ್​ ವಾರ್ವಿಕ್​ಶೈರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಏಕೆಂದರೆ ಅಂತಿಮವಾಗಿ ಸಸೆಕ್ಸ್ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ವಾರ್ವಿಕ್​ಶೈರ್ ತಂಡವು 4 ರನ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.

ಈ ಸೋಲಿನ ಹೊರತಾಗಿಯೂ ಸಸೆಕ್ಸ್ ತಂಡದ ನಾಯಕ ಚೇತೇಶ್ವರ ಪೂಜಾರ ಅವರ ಸಿಡಿಲಬ್ಬರದ ಬ್ಯಾಟಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡಿದ್ದ ಆಟಗಾರ ಇದೀಗ ಸಿಡಿಲಬ್ಬರದ ಬ್ಯಾಟಿಂಗ್ ಮಾಡಬಲ್ಲೆ ಎಂಬುದನ್ನು ಇಂಗ್ಲೆಂಡ್​ ಪಿಚ್​ನಲ್ಲಿ ನಿರೂಪಿಸಿರುವುದು ವಿಶೇಷ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್