K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

IPL 2021 Auction: ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..
ಕೆ. ಗೌತಮ್
Follow us
ರಾಜೇಶ್ ದುಗ್ಗುಮನೆ
|

Updated on: Feb 18, 2021 | 5:50 PM

ಐಪಿಎಲ್​ನಲ್ಲಿ ಚೆನ್ನೈ ಹಾಗೂ ಬೆಂಗಳೂರು ತಂಡಗಳ ನಡುವಣ ಮ್ಯಾಚ್​ ಯಾವಾಗಲೂ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ಕಾರಣ, ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಇರುವ ವೈಷಮ್ಯಗಳು ಕಾರಣವಾಗಿರಬಹುದು. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕನಾದರೆ, ಚೆನ್ನೈಗೆ ಧೋನಿ ನಾಯಕ. ವಿರಾಟ್​-ಧೋನಿ ಅಭಿಮಾನಿಗಳ ನಡುವೆ ಶೀತಲ ಸಮರ ನಡೆಯುತ್ತಲೇ ಇರುತ್ತದೆ ಎನ್ನುವುದು ಗುಟ್ಟಾಗೇನು ಉಳಿದಿಲ್ಲ. ಹೀಗಿರುವಾಗಲೇ ಇಂದಿನ ಐಪಿಎಲ್​ ಹರಾಜಿನಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ ದೊಡ್ಡ ಮೊತ್ತಕ್ಕೆ ಚೆನ್ನೈ ಪಾಲಾಗಿದ್ದಾರೆ.

ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಇಂದಿನ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಗೌತಮ್​ ಸೇಲ್​ ಆಗಿದ್ದಾರೆ.

ಗೌತಮ್​ ಮೂಲ ಬೆಲೆ 20 ಲಕ್ಷ ರೂಪಾಯಿ ಆಗಿತ್ತು. ಒಂದೊಂದೇ ತಂಡಗಳು ಗೌತಮ್​ ಮೇಲೆ ಬಿಡ್​ ಮಾಡಲು ಆರಂಭಿಸಿದ್ದವು. ಗೌತಮ್​ನನ್ನು ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್​, ಸನ್​ ರೈಸರ್ಸ್​ ಹೈದರಾಬಾದ್​ ಹಾಗೂ ಕೋಲ್ಕತ್ತ ನೈಟ್​ ರೈಡರ್ಸ್​ ನಡುವೆ ಬಿಗ್​ ಫೈಟ್​ ಏರ್ಪಟ್ಟಿತ್ತು. ಕೊನೆಗೆ ಸಿಎಸ್​ಕೆ ಕೂಡ ಈ ರೇಸ್​ನಲ್ಲಿ ಸೇರಿಕೊಂಡು, ಅಂತಿಮವಾಗಿ 9.25 ಕೋಟಿ ರೂಪಾಯಿಗೆ ಗೌತಮ್​ರನ್ನು ಖರೀದಿಸಿತ್ತು.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

 ಇದನ್ನೂ ಓದಿ: Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​