Kapil Dev: ವಿರಾಟ್ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕು! ಕೊಹ್ಲಿ ಬಗ್ಗೆ ಕಪಿಲ್ ದೇವ್ ಮಾತು

ವಿರಾಟ್ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ ಎಂದು ಕಪಿಲ್ ಹೇಳಿದ್ದಾರೆ. ಸುನಿಲ್ ಗವಾಸ್ಕರ್ ಅವರು ನನ್ನ ಅಡಿಯಲ್ಲಿ ಆಡಿದ್ದಾರೆ, ನಾನು ಕೃಷ್ಣಮಾಚಾರಿ ಶ್ರೀಕಾಂತ್ ಮತ್ತು ಮೊಹಮ್ಮದ್ ಅಜರುದ್ದೀನ್ ಅವರ ಅಡಿಯಲ್ಲಿ ಆಡಿದ್ದೇನೆ, ನಾನು ಎಂದಿಗೂ ಅಹಂಕಾರವನ್ನು ಹೊಂದಿರಲಿಲ್ಲ.

Kapil Dev: ವಿರಾಟ್ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕು! ಕೊಹ್ಲಿ ಬಗ್ಗೆ ಕಪಿಲ್ ದೇವ್ ಮಾತು
ಕಪಿಲ್ ದೇವ್
Follow us
TV9 Web
| Updated By: ಪೃಥ್ವಿಶಂಕರ

Updated on: Jan 16, 2022 | 10:50 PM

ಶನಿವಾರ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ನೀಡಿದ್ದಾರೆ. ಕೊಹ್ಲಿ ಕೇವಲ ಟೆಸ್ಟ್ ತಂಡದ ನಾಯಕರಾಗಿದ್ದ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಸೋಲಿನ ನಂತರ ಈ ಹುದ್ದೆಯನ್ನು ತೊರೆದಿದ್ದಾರೆ. ಆದರೆ, ಕೊಹ್ಲಿಯ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡುವ ಮೂಲಕ ಕೊಹ್ಲಿ ಈ ಮಾಹಿತಿ ನೀಡಿದ್ದಾರೆ. ಕೊಹ್ಲಿ ನಾಯಕತ್ವ ತೊರೆಯುವ ಬಗ್ಗೆ ಹಲವು ದಿಗ್ಗಜರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಕಪಿಲ್ ದೇವ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಕೊಹ್ಲಿ ದೀರ್ಘಕಾಲದವರೆಗೆ ಒತ್ತಡದಲ್ಲಿ ಕಾಣಿಸಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ. ಜೊತೆಗೆ ಕೊಹ್ಲಿ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ ಎಂದು ಕಪಿಲ್ ಹೇಳಿದ್ದಾರೆ.

ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯದ ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನವೇ ಕೊಹ್ಲಿ ಪಂದ್ಯದ ಅತ್ಯಂತ ಕಡಿಮೆ ಸ್ವರೂಪದಲ್ಲಿ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಇದರ ನಂತರ, ಡಿಸೆಂಬರ್‌ನಲ್ಲಿ, ಅವರನ್ನು ಏಕದಿನ ತಂಡದ ನಾಯಕತ್ವದಿಂದಲೂ ತೆಗೆದುಹಾಕಲಾಯಿತು. ಕೊಹ್ಲಿ ಐಪಿಎಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನೂ ತೊರೆದಿದ್ದರು. ಇದೇ ವೇಳೆ ಅವರು ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಎರಡು ವರ್ಷಗಳಿಂದ ಅವರ ಬ್ಯಾಟ್‌ ಶತಕ ಬಾರಿಸಿರಲಿಲ್ಲ.

ವಿರಾಟ್ ನಿರ್ಧಾರಕ್ಕೆ ಸ್ವಾಗತ ಭಾನುವಾರ ಮಿಡ್-ಡೇ ಆಂಗ್ಲ ಪತ್ರಿಕೆಯೊಂದಿಗೆ ಮಾತನಾಡಿದ ಕಪಿಲ್, “ವಿರಾಟ್ ನಾಯಕತ್ವ ತೊರೆಯುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ, ಅವರು ಟಿ 20 ತಂಡದ ನಾಯಕತ್ವವನ್ನು ತೊರೆದಾಗಿನಿಂದ ಅವರು ಅತ್ಯಂತ ಕೆಟ್ಟ ಸಮಯವನ್ನು ಎದುರಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ತುಂಬಾ ಒತ್ತಡದಲ್ಲಿರುವಂತೆ ಕಾಣುತ್ತಿರುವುದನ್ನು ಕಂಡು ಆತಂಕಗೊಂಡಿದ್ದರು. ಆದ್ದರಿಂದ ನಾಯಕತ್ವ ತೊರೆಯುವ ನಿರ್ಧಾರದಿಂದ ಅವರು ಇನ್ನು ಮುಂದೆ ಮುಕ್ತವಾಗಿ ಆಡಬಹುದು ಎಂದಿದ್ದಾರೆ.

ಯೋಚಿಸಿಯೇ ನಿರ್ಧಾರ ತೆಗೆದುಕೊಂಡಿರುತ್ತಾರೆ ಇಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೊಹ್ಲಿ ಯೋಚಿಸಿರಬೇಕು ಎಂದು ಕಪಿಲ್ ಹೇಳಿದ್ದಾರೆ. ಅವರು ಪ್ರಬುದ್ಧ ವ್ಯಕ್ತಿ. ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಅವರು ಯೋಚಿಸಿರಬೇಕು ಎಂದು ನನಗೆ ಖಾತ್ರಿಯಿದೆ. ಬಹುಶಃ ಅವರು ನಾಯಕತ್ವವನ್ನು ಆನಂದಿಸುತ್ತಿಲ್ಲ ಅದಕ್ಕಾಗಿಯೇ ಈ ನಿರ್ಧಾರ ತೆಗೆದುಕೊಂಡಿರಬಹುದು. ನಾವು ಅವರನ್ನು ಬೆಂಬಲಿಸಬೇಕು ಮತ್ತು ಅವರಿಗೆ ಶುಭ ಹಾರೈಸಬೇಕು ಎಂದಿದ್ದಾರೆ.

ಅಹಂಕಾರವನ್ನು ತೊರೆಯಬೇಕು ವಿರಾಟ್ ಅಹಂ ಬಿಟ್ಟು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ ಎಂದು ಕಪಿಲ್ ಹೇಳಿದ್ದಾರೆ. ಸುನಿಲ್ ಗವಾಸ್ಕರ್ ಅವರು ನನ್ನ ಅಡಿಯಲ್ಲಿ ಆಡಿದ್ದಾರೆ, ನಾನು ಕೃಷ್ಣಮಾಚಾರಿ ಶ್ರೀಕಾಂತ್ ಮತ್ತು ಮೊಹಮ್ಮದ್ ಅಜರುದ್ದೀನ್ ಅವರ ಅಡಿಯಲ್ಲಿ ಆಡಿದ್ದೇನೆ, ನಾನು ಎಂದಿಗೂ ಅಹಂಕಾರವನ್ನು ಹೊಂದಿರಲಿಲ್ಲ. ವಿರಾಟ್ ತನ್ನ ಅಹಂಕಾರವನ್ನು ಬಿಟ್ಟು ಯುವ ಕ್ರಿಕೆಟಿಗನ ಅಡಿಯಲ್ಲಿ ಆಡಬೇಕಾಗುತ್ತದೆ. ಇದು ಅವರಿಗೆ ಮತ್ತು ಭಾರತೀಯ ಕ್ರಿಕೆಟ್‌ಗೆ ಸಹಾಯ ಮಾಡುತ್ತದೆ ಎಂದು ಕಪಿಲ್ ಹೇಳಿದರು. ಹೊಸ ನಾಯಕನಿಗೆ ವಿರಾಟ್ ಮಾರ್ಗದರ್ಶನ ನೀಡಬೇಕು.ನಾವು ಬ್ಯಾಟ್ಸ್‌ಮನ್ ಆಗಿ ವಿರಾಟ್ ಅವರನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ
Video: ಮಹಿಳೆಯ ಜಡೆ ಹಿಡಿದು ಎಳೆದೊಯ್ದ ಪೊಲೀಸ್​ ಅಧಿಕಾರಿ
Video: ಮಹಿಳೆಯ ಜಡೆ ಹಿಡಿದು ಎಳೆದೊಯ್ದ ಪೊಲೀಸ್​ ಅಧಿಕಾರಿ
ಬೇರೆ ಖಾತೆ ನೀಡಿದರೂ ಚಿಂತೆಯಿಲ್ಲ, ನಿಷ್ಠೆಯಿಂದ ಕೆಲಸ ಮಾಡುವೆ: ಪರಮೇಶ್ವರ್
ಬೇರೆ ಖಾತೆ ನೀಡಿದರೂ ಚಿಂತೆಯಿಲ್ಲ, ನಿಷ್ಠೆಯಿಂದ ಕೆಲಸ ಮಾಡುವೆ: ಪರಮೇಶ್ವರ್
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ