Mayank Agarwal: ಕನ್ನಡಿಗ ಮಯಾಂಕ್​ ಅಗರ್ವಾಲ್​ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ..!

Mayank Agarwal: ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್​ಥಾಲ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಘ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

Mayank Agarwal: ಕನ್ನಡಿಗ ಮಯಾಂಕ್​ ಅಗರ್ವಾಲ್​ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ..!
ಮಯಾಂಕ್ ಅಗರ್ವಾಲ್
Follow us
ಪೃಥ್ವಿಶಂಕರ
|

Updated on:Jan 30, 2024 | 6:43 PM

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ (Ranji Trophy 2024) ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ (Mayank Agarwal) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ. ವಾಸ್ತವಾಗಿ ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಕರ್ನಾಟಕ ರಣಜಿ ತಂಡದ ಆಟಗಾರರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ವಿಮಾನದಲ್ಲಿ ನೀರು ಕುಡಿದ ಮಯಾಂಕ್ ಅವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಗಂಟಲಿನಲ್ಲಿ ಉರಿಯ ಅನುಭವ

ಮುಂದಿನ ರಣಜಿ ಪಂದ್ಯಕ್ಕಾಗಿ ಸೂರತ್​ಗೆ ಪ್ರಯಾಣ ಬೆಳೆಸಲು ತಂಡದೊಂದಿಗೆ ವಿಮಾನವೇರಿದ್ದ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕೂಡಿದಿದ್ದಾರೆ. ಮಯಾಂಕ್ ನೀರು ಕುಡಿಯುತ್ತಿದ್ದಂತೆ ಅವರ ಗಂಟಲಿನಲ್ಲಿ ಉರಿಯ ಅನುಭವವಾಗಿದೆ. ಹಾಗೆಯೇ ಬಾಯಿ, ನಾಲಿಗೆ ಸುಟ್ಟಂತ ಅನುಭವವಾಗಿದೆ. ಹೀಗಾಗಿ ಮಯಾಂಕ್​ ಮಾತನಾಡಲು ಸಾಧ್ಯವಾಗದೆ ವಿಮಾನದಲ್ಲೇ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ranji Trophy 2024: ಗೋವಾ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್- ಪಡಿಕ್ಕಲ್..!

ರಣಜಿಯಲ್ಲಿ ಮಯಾಂಕ್ ಸೂಪರ್ ಶೋ

ಕಳೆದ 2 ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ 32 ವರ್ಷದ ಮಯಾಂಕ್ ಅಗರ್ವಾಲ್, ಫೆಬ್ರವರಿ-ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆ ನಂತರ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿತ್ತು. ಆದರೆ, ಪ್ರಸಕ್ತ ರಣಜಿ ಟ್ರೋಫಿ ಸೀಸನ್​ನಲ್ಲಿ ಮಯಾಂಕ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪಂಜಾಬ್ ವಿರುದ್ಧ ನಡೆದ ಮೊದಲ ರಣಜಿ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಖಾತೆ ತೆರೆಯಲಾಗದೆ ಮಯಾಂಕ್ ಔಟಾಗಿದ್ದರು. ಇದಾದ ಬಳಿಕ ನಡೆದ ಗುಜರಾತ್ ಮತ್ತು ಗೋವಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಮಯಾಂಕ್ ಶತಕ ಬಾರಿಸಿದ್ದರು.

ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕ

ಇಲ್ಲಿಯವರೆಗೆ ಆಡಿರುವ ನಾಲ್ಕು ರಣಜಿ ಟ್ರೋಫಿ ಪಂದ್ಯಗಳಲ್ಲಿ ಮಯಾಂಕ್ 44.28 ರ ಸರಾಸರಿಯಲ್ಲಿ ಎರಡು ಶತಕ ಸೇರಿದಂತೆ 460 ರನ್ ಗಳಿಸಿದ್ದಾರೆ. ರಣಜಿ ಟ್ರೋಫಿ ಎಲೈಟ್ ಗುಂಪಿನ ಸಿ ಗುಂಪಿನಲ್ಲಿ ಕರ್ನಾಟಕ ತಂಡವು ನಾಲ್ಕು ಪಂದ್ಯಗಳಲ್ಲಿ 15 ಅಂಕಗಳೊಂದಿಗೆ ಎರಡು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಕಳೆದುಕೊಂಡು ಎರಡನೇ ಸ್ಥಾನದಲ್ಲಿದೆ.

ಮಯಾಂಕ್ ವೃತ್ತಿ ಬದುಕು

ಭಾರತದ ಪರ ತಮ್ಮ ವೃತ್ತಿಜೀವನದಲ್ಲಿ ಒಟ್ಟು 21 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಯಾಂಕ್ ಅವರು 21 ಪಂದ್ಯಗಳಲ್ಲಿ 41.3 ರ ಸರಾಸರಿಯಲ್ಲಿ 1488 ರನ್ ಗಳಿಸಿದ್ದಾರೆ, ಇದರಲ್ಲಿ ನಾಲ್ಕು ಶತಕಗಳು ಸೇರಿವೆ. ಹಾಗೆಯೇ ಟೀಂ ಇಂಡಿಯಾ ಪರ ಮಯಾಂಕ್ ಐದು ಏಕದಿನ ಪಂದ್ಯಗಳನ್ನು ಸಹ ಆಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Tue, 30 January 24

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ