AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಣಜಿ ತಂಡ ಪ್ರಕಟ: ಯುವ ದಾಂಡಿಗನಿಗೆ ನಾಯಕತ್ವ

ಪ್ರಸಕ್ತ ಸಾಲಿನ ದೇಶಿ ಕ್ರಿಕೆಟ್‌ ಹಬ್ಬಕ್ಕೆ ಕೌಂಟ್‌ಡೌನ್‌ ಆರಂಭವಾಗಿದ್ದು, ಬಹುನಿರೀಕ್ಷಿತ ರಣಜಿ ಟ್ರೋಫಿ ಟೂರ್ನಿಯ ಮುಖಾಮುಖಿಗೆ ಕರ್ನಾಟಕ ತಂಡ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿದೆ. ಮೊದಲ ಪಂದ್ಯದಲ್ಲೇ ಬಲಿಷ್ಠ ಆಂಧ್ರಪ್ರದೇಶ ತಂಡವನ್ನು ಎದುರಿಸಲು ರಾಜ್ಯ ಕ್ರಿಕೆಟ್ ಸಂಸ್ಥೆಯು ಸ್ಟಾರ್ ಆಟಗಾರರನ್ನೊಳಗೊಂಡ ಬಲಿಷ್ಠ ಪಡೆಯನ್ನು ಅಖಾಡಕ್ಕಿಳಿಸಿದೆ.

ಕರ್ನಾಟಕ ರಣಜಿ ತಂಡ ಪ್ರಕಟ: ಯುವ ದಾಂಡಿಗನಿಗೆ ನಾಯಕತ್ವ
Karnataka SquadImage Credit source: KSCA
ಝಾಹಿರ್ ಯೂಸುಫ್
|

Updated on: Oct 05, 2026 | 7:38 AM

Share

ದೇಶಿ ಕ್ರಿಕೆಟ್‌ನ ಅತ್ಯಂತ ಪ್ರತಿಷ್ಠಿತ ಟೂರ್ನಿಯಾದ 2026-27ನೇ ಸಾಲಿನ ರಣಜಿ ಟೂರ್ನಿಯ ಮೊದಲ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಯುವ ಆಟಗಾರ ಸ್ಮರಣ್ ರವಿಚಂದ್ರನ್ ಮುನ್ನಡೆಸಲಿದ್ದು, ತಂಡದಲ್ಲಿ ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಪ್ರಸಿದ್ಧ್ ಕೃಷ್ಣ ಸೇರಿದಂತೆ ಸ್ಟಾರ್ ಆಟಗಾರರು ಕಾಣಿಸಿಕೊಂಡಿದ್ದಾರೆ.

ಸ್ಮರಣ್ ಹೆಗಲಿಗೆ ನಾಯಕತ್ವ!

ಕಳೆದ ಬಾರಿಯ ರಣಜಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಮುನ್ನಡೆಸಿದ್ದರು. ಈ ಬಾರಿ ಯುವ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಕ್ಯಾಪ್ಟನ್ ಆಗಿ ನೇಮಕ ಮಾಡಲಾಗಿದೆ. ದೇಶಿ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಸ್ಮರಣ್, ಹಿರಿಯ ಆಟಗಾರರ ಮಾರ್ಗದರ್ಶನದಲ್ಲಿ ತಂಡವನ್ನು ಮುನ್ನಡೆಸುವ ಗುರುತರ ಜವಾಬ್ದಾರಿ ಹೊತ್ತಿದ್ದಾರೆ.

ಅನುಭವಿ ಆಟಗಾರರ ಬಲ:

ಭಾರತ ರಾಷ್ಟ್ರೀಯ ತಂಡದ ಪ್ರಮುಖ ಆಟಗಾರರಾದ ಕೆ.ಎಲ್. ರಾಹುಲ್ ಮತ್ತು ವೇಗಿ ಪ್ರಸಿದ್ಧ್ ಕೃಷ್ಣ ಅವರ ಸೇರ್ಪಡೆ ಕರ್ನಾಟಕ ತಂಡದ ಬಲವನ್ನು ದುಪ್ಪಟ್ಟುಗೊಳಿಸಿದೆ. ಹಾಗೆಯೇ ಕರುಣ್ ನಾಯರ್, ಮಯಾಂಕ್ ಅಗರ್ವಾಲ್ ಅವರಂತಹ ಅನುಭವಿ ದಾಂಡಿಗರು ಕೂಡ ಕರ್ನಾಟಕ ತಂಡದಲ್ಲಿದ್ದಾರೆ.

ದೇವದತ್ ಪಡಿಕ್ಕಲ್ ಅಲಭ್ಯ:

ಕರ್ನಾಟಕದ ಖಾಯಂ ಆಟಗಾರ ದೇವದತ್ ಪಡಿಕ್ಕಲ್ ಮೊದಲ ಪಂದ್ಯಕ್ಕೆ ಲಭ್ಯವಿರುವುದಿಲ್ಲ. ಇದೇ ಅವಧಿಯಲ್ಲಿ (ಅಕ್ಟೋಬರ್ 6 ರಿಂದ 11) ನಡೆಯಲಿರುವ ಆಸ್ಟ್ರೇಲಿಯಾ ‘ಎ’ ವಿರುದ್ಧದ ಏಕದಿನ ಸರಣಿಗೆ ಅವರನ್ನು ಭಾರತ ‘ಎ’ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿರುವುದರಿಂದ, ಅವರು ಈ ರಣಜಿ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ದೇವದತ್ ಪಡಿಕ್ಕಲ್ ಹಿಂತಿರುಗಿದರೆ ನಾಯಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದ್ದು, ಸ್ಮರಣ್ ರವಿಚಂದ್ರನ್ ಉಪನಾಯಕನಾಗಿ ತಂಡದಲ್ಲಿರಲಿದ್ದಾರೆ.

ಹೊಸ ಕೋಚ್ ವಿನಯ್ ಕುಮಾರ್:

ಕರ್ನಾಟಕ ತಂಡದ ಮಾಜಿ ಯಶಸ್ವಿ ನಾಯಕ ಹಾಗೂ ವೇಗಿ ಆರ್. ವಿನಯ್ ಕುಮಾರ್ ಅವರು ಮುಖ್ಯ ತರಬೇತುದಾರರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಎದುರಿಸುತ್ತಿರುವ ಮೊದಲ ದೊಡ್ಡ ಸವಾಲು ಇದಾಗಿದೆ. ಆ ಮೂಲಕ ವಿನಯ್ ಕುಮಾರ್, ರಾಜ್ಯ ತಂಡದ ಕೋಚ್ ಆಗಿ ತಮ್ಮ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ತಂಡ: ಸ್ಮರಣ್ ರವಿಚಂದ್ರನ್ (ನಾಯಕ), ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣ, ಶ್ರೇಯಸ್ ಗೋಪಾಲ್, ಕೆ.ಎಲ್. ಶ್ರೀಜಿತ್, ಕೃತಿಕ್ ಕೃಷ್ಣ, ಎ. ಗೌತಮ್, ಕೆ.ವಿ. ಅನೀಶ್, ಶಿಖರ್ ಶೆಟ್ಟಿ, ಅಭಿಲಾಷ್ ಶೆಟ್ಟಿ, ಮನ್ವಂತ್ ಕುಮಾರ್, ಎಲ್.ಆರ್. ಕುಮಾರ್, ರಿತೇಶ್ ಭಟ್ಕಲ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ