AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

Ranji Trophy Final 2026, Karnataka vs Jammu and Kashmir: ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಈವರೆಗೆ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 9ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಅತ್ತ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಫೈನಲ್ ಆಡುತ್ತಿರುವುದು ಇದೇ ಮೊದಲ ಬಾರಿ. ಈ ಮೂಲಕ ಚೊಚ್ಚಲ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದೆ.

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Kar Vs Jk
ಝಾಹಿರ್ ಯೂಸುಫ್
|

Updated on: Feb 24, 2026 | 9:51 AM

Share

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ನಾಯಕ ದೇವದತ್ ಪಡಿಕ್ಕಲ್ ಬ್ಯಾಟ್ ಬೀಸಲಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಮತ್ತೋರ್ವ ಅನುಭವಿ ದಾಂಡಿಗ ಕರುಣ್ ನಾಯರ್ ಕಣಕ್ಕಿಳಿಯಲಿದ್ದಾರೆ. ಇನ್ನು ಯುವ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಹಾಗೆಯೇ ಆಲ್​ರೌಂಡರ್ ಆಗಿ ಶ್ರೇಯಸ್ ಗೋಪಾಲ್ ಕಣಕ್ಕಿಳಿದರೆ, ವಿಎಕಟ್ ಕೀಪರ್ ಬ್ಯಾಟರ್ ಆಗಿ ಕೃತಿಕ್ ಕೃಷ್ಣ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​ಗಳಾಗಿ ವಿದ್ಯಾಧರ್ ಪಾಟೀಲ್, ವಿಜಯಕುಮಾರ್ ವೈಶಾಕ್, ಶಿಖರ್ ಶೆಟ್ಟಿ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರ ಪರ ಬ್ಯಾಟಿಂಗ್ ಶಕ್ತಿಯಾಗಿ ಪರಸ್ ಡೋಗ್ರಾ ಹಾಗೂ ಅಬ್ದುಲ್ ಸಮದ್ ಇದ್ದಾರೆ. ಇನ್ನು ಬೌಲಿಂಗ್​ನಲ್ಲಿ ಜಮ್ಮು-ಕಾಶ್ಮೀರ ತಂಡ ನೆಚ್ಚಿಕೊಂಡಿರುವು ಆಖಿಬ್ ನಬಿ ಅವರನ್ನು. ಹೀಗಾಗಿ ಕಾಶ್ಮೀರಿ ಪಡೆಯಿಂದ ಕೂಡ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ…

ಜಮ್ಮು ಮತ್ತು ಕಾಶ್ಮೀರ ಪ್ಲೇಯಿಂಗ್ XI: ಕಮ್ರಾನ್ ಇಕ್ಬಾಲ್, ಯಾವರ್ ಹಸನ್, ಶುಭಂ ಪುಂಡೀರ್, ಪರಸ್ ಡೋಗ್ರಾ (ನಾಯಕ), ಅಬ್ದುಲ್ ಸಮದ್, ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್), ಅಬಿದ್ ಮುಷ್ತಾಕ್, ಆಖಿಬ್ ನಬಿ ದಾರ್, ಯುದ್ವೀರ್ ಸಿಂಗ್ ಚರಕ್, ಸಾಹಿಲ್ ಲೋತ್ರಾ, ಸುನೀಲ್ ಕುಮಾರ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಕರ್ನಾಟಕ ಪ್ಲೇಯಿಂಗ್ XI: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.