AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಅಜೇಯ 142 ರನ್..! ರಣಜಿಯಲ್ಲಿ ಮುಂದುವರೆದ ಕರುಣ್ ನಾಯರ್ ಅಬ್ಬರ

Karun Nair Hits 2nd Consecutive Ranji Century: 2025ರ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಕೇರಳ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದೆ. ಕರುಣ್ ನಾಯರ್ ಅಮೋಘ ಶತಕ (142* ರನ್) ಸಿಡಿಸಿ ತಂಡವನ್ನು ಬಲಪಡಿಸಿದ್ದಾರೆ. ಇದು ಕರುಣ್ ಅವರ ಸತತ ಎರಡನೇ ಶತಕವಾಗಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 9000 ರನ್‌ಗಳನ್ನು ಪೂರೈಸಿದ್ದಾರೆ. ಸ್ಮರಣ್ ರವಿಚಂದ್ರನ್ ಅವರೊಂದಿಗೆ ಉತ್ತಮ ಜೊತೆಯಾಟ ನೀಡಿದ್ದು, ಭಾರತ ತಂಡಕ್ಕೆ ಮರಳುವ ಗುರಿ ಹೊಂದಿದ್ದಾರೆ.

ಪೃಥ್ವಿಶಂಕರ
|

Updated on: Nov 01, 2025 | 6:57 PM

Share
2025 ರ ರಣಜಿ ಟ್ರೋಫಿಯ ಮೂರನೇ ಸುತ್ತು ಇಂದಿನಿಂದ ಆರಂಭವಾಗಿದೆ. ಅದರಂತೆ ಕರ್ನಾಟಕ ತಂಡ ತನ್ನ ಮೂರನೇ ಪಂದ್ಯವನ್ನು ಮಂಗಳಾಪುರಂನ ಕೆಸಿಎ ಕ್ರಿಕೆಟ್ ಮೈದಾನದಲ್ಲಿ ಕೇರಳ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಕರ್ನಾಟಕ ತಂಡ ಮೊದಲ ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 319 ರನ್ ಕಲೆಹಾಕಿದೆ.

1 / 6
ತಂಡಕ್ಕೆ ಉತ್ತಮ ಆರಂಭ ಸಿಗದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್​ಗಳು ತಂಡದ ಕೈಹಿಡಿದಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬಂದ ಶ್ರೀಜಿತ್ 65 ರನ್​ಗಳ ಇನ್ನಿಂಗ್ಸ್ ಆಡಿದರೆ, ಕರುಣ್ ನಾಯರ್ ಅಜೇಯ 142 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ. ಇವರಿಗೆ ಸಾಥ್ ನೀಡುತ್ತಿರುವ ಸ್ಮರಣ್ ರವಿಚಂದ್ರನ್ ಕೂಡ ಅಜೇಯ 88 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ.

2 / 6

ವಾಸ್ತವವಾಗಿ ಪ್ರಸ್ತುತ ರಣಜಿಯಲ್ಲಿ ಕರುಣ್ ನಾಯರ್ ಅವರ ಸತತ ಎರಡನೇ ಶತಕ ಇದಾಗಿದೆ. ಕರುಣ್ 160 ಎಸೆತಗಳಲ್ಲಿ 10 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ತಮ್ಮ ಶತಕವನ್ನು ಪೂರೈಸಿದರು. ಇದು ಕರುಣ್ ನಾಯರ್ ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 26 ನೇ ಶತಕವಾಗಿದೆ. ಈ ಶತಕದ ಇನ್ನಿಂಗ್ಸ್‌ನಲ್ಲಿ, ಕರುಣ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳನ್ನು ಪೂರೈಸಿದರು.

3 / 6
ಈ ಪಂದ್ಯಕ್ಕೂ ಮುನ್ನ ನಡೆದ ಗೋವಾ ವಿರುದ್ಧದ ಪಂದ್ಯದಲ್ಲೂ ಕರುಣ್ ಶತಕ ಬಾರಿಸಿದ್ದರು. ಗೋವಾ ವಿರುದ್ಧ ಅಜೇಯ 174 ರನ್ ಬಾರಿಸಿದ್ದ ಕರುಣ್, ಸೌರಾಷ್ಟ್ರ ವಿರುದ್ಧದ ಮೊದಲ ಪಂದ್ಯದಲ್ಲೂ 73 ರನ್ ಬಾರಿಸಿದ್ದರು. ಇನ್ನು ಕೇರಳ ವಿರುದ್ಧದ ಈ ಪಂದ್ಯದಲ್ಲಿ ಶತಕ ಬಾರಿಸುವುದರ ಜೊತೆಗೆ ಕರುಣ್, ಶ್ರೀಜಿತ್ ಅವರೊಂದಿಗೆ ಮೂರನೇ ವಿಕೆಟ್‌ಗೆ 123 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.ನಂತರ ಸ್ಮರಣ್ ರವಿಚಂದ್ರನ್ ಅವರೊಂದಿಗೆ ನಾಯರ್ ನಾಲ್ಕನೇ ವಿಕೆಟ್‌ಗೆ ಅದ್ಭುತ ಪಾಲುದಾರಿಕೆಯನ್ನು ಹಂಚಿಕೊಂಡು ಕರ್ನಾಟಕವನ್ನು 300 ರನ್​ಗಳ ಗಡಿ ದಾಟಿಸಿದರು.

4 / 6
ವಾಸ್ತವವಾಗಿ ಕಳೆದ ರಣಜಿ ಸೀಸನ್​ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ್ದ ಕರುಣ್​ಗೆ 8 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಆದಾಗ್ಯೂ, ಆ ಪ್ರವಾಸದ ಸಮಯದಲ್ಲಿ ಕರುಣ್ ರನ್ ಗಳಿಸಲು ಹೆಣಗಾಡಿದರು. ಆಡಿದ ನಾಲ್ಕು ಟೆಸ್ಟ್ ಪಂದ್ಯಗಳ ಎಂಟು ಇನ್ನಿಂಗ್ಸ್‌ಗಳಲ್ಲಿ ಕೇವಲ 205 ರನ್ ಬಾರಿಸಿದ್ದರು. ಇದರಲ್ಲಿ ಕೇವಲ ಒಂದು ಅರ್ಧಶತಕ ಸೇರಿತ್ತು.

5 / 6
ಹೀಗಾಗಿ ಈ ಸರಣಿಯ ಬಳಿಕ ಅವರನ್ನು ತಂಡದಿಂದ ಹೊರಹಾಕಲಾಯಿತು. ಇದರ ಪರಿಣಾಮವಾಗಿ ಕರುಣ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯಿಂದಲೂ ಹೊರಗಿಡಲಾಯಿತು. ಇದೀಗ ರಣಜಿಯಲ್ಲಿ ಅಬ್ಬರಿಸುತ್ತಿರುವ ನಾಯರ್ ಈಗ ಮತ್ತೆ ಭಾರತ ಟೆಸ್ಟ್ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಅವರಿಗೆ ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

6 / 6
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್

ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು

ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!

ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ

ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!

ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ