AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಸಿಕ್ಸರ್, 7 ಫೋರ್​: ತೂಫಾನ್ ಶತಕ ಸಿಡಿಸಿದ ಕರುಣ್ ನಾಯರ್

Maharaja Trophy 2023: ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಬಿರುಗಾಳಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕರುಣ್ ಗುಲ್ಬರ್ಗ ಮಿಸ್ಟಿಕ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಸಂಪೂರ್ಣ ಲಯ ತಪ್ಪಿದ ಎದುರಾಳಿ ಬೌಲರ್​ಗಳು ಬಲಗೈ ದಾಂಡಿಗನ ದಂಡಕ್ಕೆ ಗುರಿಯಾದರು.

9 ಸಿಕ್ಸರ್, 7 ಫೋರ್​: ತೂಫಾನ್ ಶತಕ ಸಿಡಿಸಿದ ಕರುಣ್ ನಾಯರ್
Karun Nair
TV9 Web
| Edited By: |

Updated on: Aug 28, 2023 | 8:52 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 2ನೇ ಸೆಮಿಫೈನಲ್​ನಲ್ಲಿ ಕರುಣ್ ನಾಯರ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ವಾರಿಯರ್ಸ್ ತಂಡಕ್ಕೆ ಕಾರ್ತಿಕ್ ಹಾಗೂ ರವಿಕುಮಾರ್ ಸಮರ್ಥ್ ಉತ್ತಮ ಆರಂಭ ಒದಗಿಸಿದ್ದರು.

ತಂಡದ ಮೊತ್ತ 82 ರನ್​ ಆಗಿದ್ದ ವೇಳೆ ಕಾರ್ತಿಕ್ (41) ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಬಿರುಗಾಳಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕರುಣ್ ಗುಲ್ಬರ್ಗ ಮಿಸ್ಟಿಕ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಸಂಪೂರ್ಣ ಲಯ ತಪ್ಪಿದ ಎದುರಾಳಿ ಬೌಲರ್​ಗಳು ಬಲಗೈ ದಾಂಡಿಗನ ದಂಡಕ್ಕೆ ಗುರಿಯಾದರು.

ಅಷ್ಟೇ ಅಲ್ಲದೆ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಹಾಫ್ ಸೆಂಚುರಿ ಬಳಿಕ ಕರುಣ್ ಅಕ್ಷರಶಃ ಅಬ್ಬರಿಸಲಾರಂಭಿಸಿದರು.

ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಕರುಣ್ ನಾಯರ್ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸಿದ ದಾಖಲೆ ಬರೆದರು.

ಮತ್ತೊಂದೆಡೆ ನಾಯಕನಿಗೆ ಉತ್ತಮ ಸಾಥ್ ನೀಡಿದ ರವಿಕುಮಾರ್ ಸಮರ್ಥ್ 50 ಎಸೆತಗಳಲ್ಲಿ 80 ರನ್ ಬಾರಿಸಿದರು. ಅಂತಿಮವಾಗಿ 42 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 7 ಆಕರ್ಷಕ ಫೋರ್​ಗಳೊಂದಿಗೆ ಅಜೇಯ 107 ರನ್​ ಬಾರಿಸಿದ ಕರುಣ್ ನಾಯರ್ ತಂಡದ ಮೊತ್ತವನ್ನು 248 ಕ್ಕೆ ತಂದು ನಿಲ್ಲಿಸಿದರು. ಈ ಮೂಲಕ ಬೃಹತ್ ಮೊತ್ತದ ಗುರಿಯನ್ನು ಗುಲ್ಬರ್ಗ ಮಿಸ್ಟಿಕ್ಸ್ ತಂಡದ ಮುಂದಿಟ್ಟಿದ್ದಾರೆ.

ಮೈಸೂರು ವಾರಿಯರ್ಸ್ ಪ್ಲೇಯಿಂಗ್ 11: ಎಸ್​ಯು ಕಾರ್ತಿಕ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ (ನಾಯಕ) , ಲಂಕೇಶ್ ಕೆ ಎಸ್ , ಕೋದಂಡ ಅಜಿತ್ ಕಾರ್ತಿಕ್ , ಶಿವಕುಮಾರ್ ರಕ್ಷಿತ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಜಗದೀಶ ಸುಚಿತ್ , ಮೋನಿಶ್ ರೆಡ್ಡಿ , ಶಶಿ ಕುಮಾರ್ ಕೆ , ಕುಶಾಲ್ ವಾಧ್ವಾನಿ.

ಇದನ್ನೂ ಓದಿ: ಏಕದಿನ ವಿಶ್ವಕಪ್​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ನಾಲ್ವರು ಗಾಯಾಳು..!

ಗುಲ್ಬರ್ಗ ಮಿಸ್ಟಿಕ್ಸ್ ಪ್ಲೇಯಿಂಗ್ 11: ಅನೀಶ್ ಕೆ ವಿ , ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ , ಸ್ಮರಣ್ ಆರ್ , ಅಮಿತ್ ವರ್ಮಾ , ಶ್ರೀನಿವಾಸ್ ಶರತ್ ( ವಿಕೆಟ್ ಕೀಪರ್ ) , ಅಬುಲ್ ಹಸನ್ ಖಾಲಿದ್ , ವಿಜಯ್ ಕುಮಾರ್ ವೈಶಾಕ್ (ನಾಯಕ) , ಅವಿನಾಶ್ ಡಿ , ಶರಣ್ ಗೌಡ , ಹಾರ್ದಿಕ್ ರಾಜ್ , ಅಭಿಲಾಷ್ ಶೆಟ್ಟಿ.

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ