Kavya Maran: ಬಿಕ್ಕಳಿಸುತ್ತಾ ಕಣ್ಣೀರಿಟ್ಟ ಕಾವ್ಯ ಮಾರನ್: ವಿಡಿಯೋ ವೈರಲ್

IPL 2024 Final KKR vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಚೆನ್ನೈನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಫೈನಲ್ ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿ ಮೂರನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ 2012 ಮತ್ತು 2014 ರಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿತ್ತು.

Kavya Maran: ಬಿಕ್ಕಳಿಸುತ್ತಾ ಕಣ್ಣೀರಿಟ್ಟ ಕಾವ್ಯ ಮಾರನ್: ವಿಡಿಯೋ ವೈರಲ್
Kavya Maran
Follow us
ಝಾಹಿರ್ ಯೂಸುಫ್
|

Updated on:May 27, 2024 | 7:23 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು.

ಮೊದಲ ಓವರ್​ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಸ್ಟಾರ್ಕ್ ಶುಭಾರಂಭ ಮಾಡಿದ್ದರು. ಇದಾದ ಬಳಿಕ ಟ್ರಾವಿಸ್ ಹೆಡ್ (0) ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಪವರ್​ಪ್ಲೇನಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡ ಸನ್​ರೈಸರ್ಸ್ ಹೈದರಾಬಾದ್ ಈ ಆಘಾತದಿಂದ ಪಾರಾಗುವ ಮುನ್ನವೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್​ಗಳಲ್ಲಿ 113 ರನ್​ಗಳಿಸಿ ಆಲೌಟ್ ಆಯಿತು.​

114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿತು. 2ನೇ ಓವರ್​ನಲ್ಲಿ ಸುನಿಲ್ ನರೈನ್ (6) ವಿಕೆಟ್ ಕಳೆದುಕೊಂಡರೂ, ರಹಮಾನುಲ್ಲಾ ಗುರ್ಬಾಝ್ (39) ಹಾಗೂ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಗೆಲುವಿನ ನಗೆ ಬೀರಿದರು.

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲುವಿನ ನಗೆ ಬೀರುತ್ತಿದ್ದರೆ, ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡ ಮಾಲಕಿ ಕಾವ್ಯ ಮಾರನ್ ಬಿಕ್ಕಳಿಸಿ ಅಳುತ್ತಿರುವ ದೃಶ್ಯ ಕಂಡು ಬಂತು. ಸೋಲಿನ ನೋವನ್ನು ಅದುಮಿಟ್ಟುಕೊಳ್ಳಲಾಗದೇ ಕಣ್ಣೀರು ಸುರಿಸಿದರು. ಇದೀಗ ಎಸ್​ಆರ್​ಹೆಚ್​ ಮಾಲಕಿಯ ಕಣ್ಣೀರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾವ್ಯ ಮಾರನ್ ಅಳುತ್ತಿರುವ ವಿಡಿಯೋ:

ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್) , ಸುನಿಲ್ ನರೈನ್ , ವೆಂಕಟೇಶ್ ಅಯ್ಯರ್ , ಶ್ರೇಯಸ್ ಅಯ್ಯರ್ (ನಾಯಕ) , ರಿಂಕು ಸಿಂಗ್ , ಆಂಡ್ರೆ ರಸೆಲ್ , ರಮಣ್​ದೀಪ್ ಸಿಂಗ್ , ಮಿಚೆಲ್ ಸ್ಟಾರ್ಕ್ , ವೈಭವ್ ಅರೋರಾ , ​​ಹರ್ಷಿತ್ ರಾಣಾ , ವರುಣ್ ಚಕ್ರವರ್ತಿ.

ಇದನ್ನೂ ಓದಿ: IPL Winners List 2024: ಐಪಿಎಲ್​ನಲ್ಲಿ ಈವರೆಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡಗಳಾವುವು? ಇಲ್ಲಿದೆ ಸಂಪೂರ್ಣ ಪಟ್ಟಿ

ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಅಭಿಷೇಕ್ ಶರ್ಮಾ , ರಾಹುಲ್ ತ್ರಿಪಾಠಿ , ಐಡೆನ್ ಮಾರ್ಕ್ರಾಮ್ , ನಿತೀಶ್ ರೆಡ್ಡಿ , ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಪ್ಯಾಟ್ ಕಮಿನ್ಸ್ (ನಾಯಕ) , ಭುವನೇಶ್ವರ್ ಕುಮಾರ್ , ಜಯದೇವ್ ಉನಾದ್ಕತ್ , ಟಿ ನಟರಾಜನ್.

Published On - 7:22 am, Mon, 27 May 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ