ಕೀಸಿ, ಕಿಂಗ್ ಭರ್ಜರಿ ಶತಕ: ಆಂಗ್ಲರನ್ನು ಮಕಾಡೆ ಮಲಗಿಸಿದ ವಿಂಡೀಸ್ ಪಡೆ

West Indies vs England: ವೆಸ್ಟ್ ಇಂಡೀಸ್ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 8 ವಿಕೆಟ್​ಗಳ ಜಯ ಸಾಧಿಸಿದರೆ, 2ನೇ ಏಕದಿನ ಪಂದ್ಯವನ್ನು ಇಂಗ್ಲೆಂಡ್ 5 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಕೀಸಿ, ಕಿಂಗ್ ಭರ್ಜರಿ ಶತಕ: ಆಂಗ್ಲರನ್ನು ಮಕಾಡೆ ಮಲಗಿಸಿದ ವಿಂಡೀಸ್ ಪಡೆ
Keacy Carty- Brandon King
Follow us
ಝಾಹಿರ್ ಯೂಸುಫ್
|

Updated on: Nov 07, 2024 | 9:01 AM

ಬಾರ್ಬಡೋಸ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವೆಸ್ಟ್ ಇಂಡೀಸ್ 2-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಕೇವಲ 24 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಂಗ್ಲ ಪಡೆಗೆ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ ಆಸರೆಯಾಗಿ ನಿಂತರು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ 74 ರನ್ ಬಾರಿಸಿದರು.

ಇನ್ನು ಸ್ಯಾಮ್ ಕರನ್ 40 ರನ್​ಗಳ ಕೊಡುಗೆ ನೀಡಿದರೆ, ಡಾನ್ ಮೌಸ್ಲಿ 57 ರನ್ ಬಾರಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತು.

ಕೀಸಿ, ಕಿಂಗ್ ಭರ್ಜರಿ ಶತಕ:

ಇಂಗ್ಲೆಂಡ್ ನೀಡಿದ 264 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ ಅದ್ಭುತ ಆರಂಭ ಒದಗಿಸಿದ್ದರು. ಆದರೆ ಮತ್ತೋರ್ವ ಆರಂಭಿಕ ಎವಿನ್ ಲೂಯಿಸ್ ಕೇವಲ 19 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಬ್ರಾಂಡನ್ ಕಿಂಗ್ ಹಾಗೂ ಕೀಸಿ ಕಾರ್ಟಿ ದ್ವಿಶತಕದ ಜೊತೆಯಾಟವಾಡಿದರು.

117 ಎಸೆತಗಳನ್ನು ಎದುರಿಸಿದ ಬ್ರಾಂಡನ್ ಕಿಂಗ್ 1 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 102 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅದ್ಭುತ ಬ್ಯಾಟಿಂಗ್ ಮುಂದುವರೆಸಿದ ಕೀಸಿ ಕಾರ್ಟಿ 114 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಅಜೇಯ 128 ರನ್ ಸಿಡಿಸಿದರು.

ಈ ಭರ್ಜರಿ ಶತಕಗಳ ನೆರವಿನಿಂದ ವೆಸ್ಟ್ ಇಂಡೀಸ್ ತಂಡವು 43 ಓವರ್​ಗಳಲ್ಲಿ 2 ವಿಕೆಟ್​ ಕಳೆದುಕೊಂಡು 267 ರನ್ ಕಲೆಹಾಕಿತು. ಈ ಮೂಲಕ ವಿಂಡೀಸ್ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ವಿಂಡೀಸ್ ಪಡೆಗೆ ಸರಣಿ ಗೆಲುವು:

ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವುದೊಂದಿಗೆ ವೆಸ್ಟ್ ಇಂಡೀಸ್ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 8 ವಿಕೆಟ್​ಗಳ ಜಯ ಸಾಧಿಸಿದರೆ, 2ನೇ ಏಕದಿನ ಪಂದ್ಯವನ್ನು ಇಂಗ್ಲೆಂಡ್ 5 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು. ಇದೀಗ 3ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ಭರ್ಜರಿ ಜಯ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್ , ಎವಿನ್ ಲೂಯಿಸ್ , ಕೀಸಿ ಕಾರ್ಟಿ , ಶಾಯ್ ಹೋಪ್ (ನಾಯಕ) , ಶೆರ್ಫೇನ್ ರುದರ್ಫೋರ್ಡ್ , ಶಿಮ್ರಾನ್ ಹೆಟ್ಮೆಯರ್ , ರೋಸ್ಟನ್ ಚೇಸ್ , ರೊಮಾರಿಯೋ ಶೆಫರ್ಡ್ , ಮ್ಯಾಥ್ಯೂ ಫೋರ್ಡ್ , ಗುಡಕೇಶ್ ಮೋಟಿ , ಅಲ್ಝಾರಿ ಜೋಸೆಫ್.

ಇದನ್ನೂ ಓದಿ: IPL 2025: 2 ಕೋಟಿ ರೂ. ಮೂಲ ಬೆಲೆಯ ಆಟಗಾರರ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್, ವಿಲ್ ಜ್ಯಾಕ್ಸ್ , ಜೋರ್ಡನ್ ಕಾಕ್ಸ್ , ಜಾಕೋಬ್ ಬೆಥೆಲ್ , ಲಿಯಾಮ್ ಲಿವಿಂಗ್​ಸ್ಟೋನ್ (ನಾಯಕ) , ಸ್ಯಾಮ್ ಕರನ್ , ಡಾನ್ ಮೌಸ್ಲಿ , ಜೇಮೀ ಓವರ್ಟನ್ , ಜೋಫ್ರಾ ಆರ್ಚರ್ , ಆದಿಲ್ ರಶೀದ್ , ರೀಸ್ ಟೋಪ್ಲಿ.

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ