Kedar Jadhav: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್ ಜಾಧವ್

Kedar Jadhav: ಟೀಮ್ ಇಂಡಿಯಾ ಪರ 73 ಏಕದಿನ ಪಂದ್ಯಗಳಲ್ಲಿ 52 ಇನಿಂಗ್ಸ್ ಆಡಿರುವ 1389 ರನ್​ ಗಳಿಸಿದ್ದಾರೆ. ಈ ವೇಳೆ 2 ಶತಕ ಹಾಗೂ 6 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ 9 ಟಿ20 ಪಂದ್ಯಗಳಿಂದ 1 ಅರ್ಧಶತಕದೊಂದಿಗೆ 122 ರನ್ ಕಲೆಹಾಕಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಜಾಧವ್ ತಿಳಿಸಿದ್ದಾರೆ.

Kedar Jadhav: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್ ಜಾಧವ್
Kedar Jadhav
Follow us
ಝಾಹಿರ್ ಯೂಸುಫ್
|

Updated on:Jun 04, 2024 | 12:52 PM

ಟೀಮ್ ಇಂಡಿಯಾ ಆಟಗಾರ ಕೇದಾರ್ ಜಾಧವ್ (Kedar Jadhav) ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. 2014 ರಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಜಾಧವ್ 2020 ರಲ್ಲಿ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಬಳಿಕ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಕ್ಕಿಲ್ಲ.

ಇದರ ನಡುವೆ ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿ ಹಲವು ಬಾರಿ ಕಂಬ್ಯಾಕ್ ಮಾಡಲು ಯತ್ನಿಸಿದರೂ ಭಾರತ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಅದರಂತೆ ಇದೀಗ 10 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಈ ವಿದಾಯದೊಂದಿಗೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ಗೂ ಕೇದಾರ್ ಜಾಧವ್ ನಿವೃತ್ತಿ ಘೋಷಿಸಿದ್ದಾರೆ.

“1500 ಗಂಟೆಗಳ ನನ್ನ ವೃತ್ತಿಜೀವನದುದ್ದಕ್ಕೂ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತನಾಗುತ್ತಿದ್ದೇನೆ” ಎಂದು ಕೇದಾರ್ ಜಾಧವ್ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಪರ 73 ಏಕದಿನ ಪಂದ್ಯಗಳಲ್ಲಿ 52 ಇನಿಂಗ್ಸ್ ಆಡಿರುವ ಕೇದಾರ್ ಜಾಧವ್ ಒಟ್ಟು 1389 ರನ್​ ಗಳಿಸಿದ್ದಾರೆ. ಈ ವೇಳೆ 2 ಶತಕ ಹಾಗೂ 6 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ 9 ಟಿ20 ಪಂದ್ಯಗಳಿಂದ 1 ಅರ್ಧಶತಕದೊಂದಿಗೆ 122 ರನ್ ಕಲೆಹಾಕಿದ್ದಾರೆ.

ಇದಲ್ಲದೆ, 2009 ರಲ್ಲಿ ಐಪಿಎಲ್ ಕೆರಿಯರ್ ಆರಂಭಿಸಿದ್ದ ಕೇದಾರ್ ಜಾಧವ್ ಆರ್​ಸಿಬಿ ಪರ ಚೊಚ್ಚಲ ಪಂದ್ಯವಾಡಿದ್ದರು. ಇದಾದ ಬಳಿಕ ಡೆಲ್ಲಿ ಡೇರ್​ ಡೆವಿಲ್ಸ್​ ತಂಡದ ಭಾಗವಾಗಿದ್ದರು. ಇನ್ನು 2011 ರಲ್ಲಿ ಕೊಚ್ಚಿ ಟಸ್ಕರ್ಸ್​ ತಂಡದ ಕಣಕ್ಕಿಳಿದಿದ್ದರು. ಆ ಬಳಿಕ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲಿ ಮೂರು ಸೀಸನ್ ಆಡಿದ್ದರು.

2016 ಮತ್ತು 2017 ರಲ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜಾಧವ್, 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪಾಲಾಗಿದ್ದರು. ಮೂರು ವರ್ಷಗಳ ಕಾಲ ಸಿಎಸ್​ಕೆ ತಂಡದಲ್ಲಿದ್ದ  ಕೇದಾರ್ ಜಾಧವ್ ಅವರನ್ನು 2021 ರ ಹರಾಜಿನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ  2 ಕೋಟಿ ರೂ.ಗೆ ಖರೀದಿಸಿತ್ತು.

ಇನ್ನು 2023 ರ ಐಪಿಎಲ್ ಆರ್​ಸಿಬಿ ಪರ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕೇದಾರ್ ಜಾಧವ್ 2 ಪಂದ್ಯಗಳಲ್ಲಿ ಒಟ್ಟು 12 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಬಾರಿಯ ಹರಾಜಿಗಾಗಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಆದರೆ 38 ವರ್ಷ ಕೇದರ್ ಜಾಧವ್ ಅವರನ್ನು ಹರಾಜು ಪಟ್ಟಿಯಿಂದ ಕೈ ಬಿಡಲಾಗಿತ್ತು.

ಇದನ್ನೂ ಓದಿ: Virat Kohli: ಈ ಬಾರಿಯಾದರೂ ಈಡೇರುತ್ತಾ ಕಿಂಗ್ ಕೊಹ್ಲಿಯ ಕನಸು..!

ಇದರೊಂದಿಗೆ ಜಾಧವ್ ಅವರ ಐಪಿಎಲ್ ಕೆರಿಯರ್ ಕೂಡ ಮುಗಿಯುತು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವ ಮೂಲಕ ಕೇದರ್ ಜಾಧವ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

Published On - 3:21 pm, Mon, 3 June 24

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ