The Oval Pitch Report: ಊಹಿಸಲಾಗದ ಪಿಚ್​ನಲ್ಲಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಇಲ್ಲಿದೆ ನೋಡಿ ಸಂಪೂರ್ಣ ಪಿಚ್ ರಿಪೋರ್ಟ್

IND vs AUS, WTC 2023 Final: ಓವಲ್‌ನಲ್ಲಿ ಭಾರತವು ಅದ್ಭುತ ದಾಖಲೆ ಹೊಂದಿಲ್ಲ. ಇಲ್ಲಿ ಆಡಿದ 14 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 2ರಲ್ಲಿ ಗೆಲುವು, 5ರಲ್ಲಿ ಸೋಲು, 7ರಲ್ಲಿ ಡ್ರಾ ಸಾಧಿಸಿದೆ.

The Oval Pitch Report: ಊಹಿಸಲಾಗದ ಪಿಚ್​ನಲ್ಲಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಇಲ್ಲಿದೆ ನೋಡಿ ಸಂಪೂರ್ಣ ಪಿಚ್ ರಿಪೋರ್ಟ್
WTC Final The Oval Pitch
Follow us
Vinay Bhat
|

Updated on: Jun 05, 2023 | 10:29 AM

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final 2023) ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಇನ್ನು ಕೇವಲ ಎರಡು ದಿನವಷ್ಟೇ ಬಾಕಿಯಿದೆ. ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಇದೀಗ ಲಂಡನ್​ನ ಓವಲ್ (The Oval) ಕ್ರೀಡಾಂಗಣಕ್ಕೆ ಕಾಲಿಟ್ಟಿದ್ದಾರೆ. ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ. ಮಿಸ್ಟ್ರಿ ಪಿಚ್ ಎಂದೇ ಹೇಳಲಾಗುವ ಕೆನ್ನಿಂಗ್ಟನ್ ಓವಲ್​ನಲ್ಲಿ ವಿಶ್ವದ ಎರಡನೇ ಅತ್ಯಂತ ಹಳೆಯ ಕ್ರೀಡಾಂಗಣ. ಈ ಪಿಚ್ ಹಿಂದೆ ವೇಗಿಗಳಿಗೆ ಅನುಕೂಲಕರವಾಗಿದ್ದರೆ, ಕಳೆದ ಆರು ಪಂದ್ಯಗಳು ಇದಕ್ಕೆ ವಿರುದ್ಧವಾಗಿ ಕಂಡಿವೆ. 2016 ರಿಂದ ಓವಲ್‌ನಲ್ಲಿ ನಡೆದ ಕೊನೆಯ 6 ಟೆಸ್ಟ್‌ಗಳು ದಿನಗಳು ಕಳೆದಂತೆ ಪಿಚ್ ಕ್ರಮೇಣ ಉತ್ತಮಗೊಳ್ಳುತ್ತವೆ ಎಂದು ತೋರಿಸಿದೆ.

WTC Final 2023: ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ! ಹೇಜಲ್‌ವುಡ್‌ ಬದಲು ಆಸೀಸ್ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ?

ಇದನ್ನೂ ಓದಿ
Image
WTC Final 2023, IND vs AUS: ಲಂಡನ್​ನ ಓವಲ್ ಮೈದಾನಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರು: ಮಿಸ್ಟ್ರಿ ಪಿಚ್ ಕಂಡು ಶಾಕ್?
Image
Dewald Brevis: 6,6,6,6,6,6,6: ‘ಬೇಬಿ ಎಬಿ’ ಪರಾಕ್ರಮಕ್ಕೆ ಮಕಾಡೆ ಮಲಗಿದ ಶ್ರೀಲಂಕಾ..!
Image
SL vs AFG 2nd ODI: ಶ್ರೀಲಂಕಾ ಆಟಗಾರರ ಅಬ್ಬರದ ಬ್ಯಾಟಿಂಗ್: ಅಫ್ಘಾನ್ ವಿರುದ್ಧ 132 ರನ್​ಗಳ ಜಯ
Image
ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ವೀರೇಂದ್ರ ಸೆಹ್ವಾಗ್

ಕೆನ್ನಿಂಗ್ಟನ್ ಓವಲ್ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದ ದಾಖಲೆಯನ್ನು ಹೊಂದಿದೆ. ಇಂಗ್ಲೆಂಡಿನ ಹವಾಮಾನವು ಯಾವಾಗಲೂ ಬದಲಾಗುತ್ತಿರುತ್ತದೆ ಮತ್ತು ಅನಿರೀಕ್ಷಿತವಾಗಿರುವುದರಿಂದ ಚೆಂಡು ಮತ್ತು ಬ್ಯಾಟ್​ನ ಕಾಳಗದಲ್ಲಿ ಯಾರು ಗೆಲ್ಲುತ್ತಾರೆ ಎಂದು ನಿರೀಕ್ಷಿಸುವುದು ಕಷ್ಟ. ಟಾಸ್‌ನ ಫಲಿತಾಂಶ ನಿರ್ಣಾಯಕ ಎಂದು ಹೇಳಬಹುದು. ಪಂದ್ಯದ ಅಂತಿಮ ಎರಡು ದಿನಗಳಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿ ಆಗುತ್ತಾರೆ. ಹಸಿರು ಮೇಲ್ಮೈ ಕೊರತೆಯಿಂದಾಗಿ ಇಲ್ಲಿ ವೇಗದ ಬೌಲರ್‌ಗಳ ದಾಖಲೆಗಳು ಉತ್ತಮವಾಗಿಲ್ಲ.

ಅಂಕಿಅಂಶಗಳು:

ಪಂದ್ಯಗಳು: 104

ತವರಿನ ತಂಡ (ಇಂಗ್ಲೆಂಡ್) ಗೆಲುವು: 43

ಪ್ರವಾಸಿ ತಂಡದ ಗೆಲುವು: 23

ಪಂದ್ಯ ಡ್ರಾ: 37

ಮೊದಲು ಬ್ಯಾಟಿಂಗ್ ಮಾಡಿದ ತಂಡ : 37 ಗೆಲುವು

ದ್ವಿತೀಯ ಬ್ಯಾಟಿಂಗ್ ಮಾಡಿದ ತಂಡ : 29 ಗೆಲುವು

ಗರಿಷ್ಠ ಸ್ಕೋರ್: 903/7

ಕನಿಷ್ಠ ಸ್ಕೋರ್: 44 ರನ್​ಗೆ ಆಲೌಟ್

ಸರಾಸರಿ 1 ನೇ ಇನ್ನಿಂಗ್ಸ್ ಸ್ಕೋರ್: 343

ಸರಾಸರಿ 2 ನೇ ಇನ್ನಿಂಗ್ಸ್ ಸ್ಕೋರ್: 304

ಸರಾಸರಿ 3 ನೇ ಇನ್ನಿಂಗ್ಸ್ ಸ್ಕೋರ್: 238

ಓವಲ್‌ನಲ್ಲಿ ಭಾರತವು ಅದ್ಭುತ ದಾಖಲೆ ಹೊಂದಿಲ್ಲ. ಇಲ್ಲಿ ಆಡಿದ 14 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 2ರಲ್ಲಿ ಗೆಲುವು, 5ರಲ್ಲಿ ಸೋಲು, 7ರಲ್ಲಿ ಡ್ರಾ ಸಾಧಿಸಿದೆ. ಓವಲ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 157 ರನ್‌ಗಳಿಂದ ಸೋಲಿಸಿದೆ ಎಂಬುದು ಭಾರತದ ಹೆಮ್ಮೆಯ ಸಂಗತಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ