Keshav Maharaj: ಭಾರತದ ಹೊರಗೂ ರಾಮಮಂದಿರದ ಸದ್ದು: ಸ್ಪೆಷಲ್ ವಿಡಿಯೋ ಮಾಡಿದ ವಿದೇಶಿ ಕ್ರಿಕೆಟಿಗ
Keshav Maharaj, Ayodhya Ram Mandir: ರಾಮಮಂದಿರ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಪ್ರತಿಧ್ವನಿಸಿದೆ. ಈ ಸಂದರ್ಭದಲ್ಲಿ ವಿದೇಶಿ ರಾಮಭಕ್ತ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದ (Ram mandir) ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಭಾರತದಲ್ಲಿ ಸಂಭ್ರಮದ ವಾತಾವರಣವಿದೆ. ಇಡೀ ದೇಶವೇ ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿಯಿದೆ. ಭಾರತೀಯ ನಟರಿಂದ ಹಿಡಿದು ಕ್ರಿಕೆಟಿಗರವರೆಗೆ ಎಲ್ಲರೂ ರಾಮಮಂದಿರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ರಾಮಮಂದಿರ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಪ್ರತಿಧ್ವನಿಸಿದೆ. ಈ ಸಂದರ್ಭದಲ್ಲಿ ವಿದೇಶಿ ರಾಮಭಕ್ತ ಕ್ರಿಕೆಟಿಗರೊಬ್ಬರು ವಿಡಿಯೋ ಮೂಲಕ ಶುಭಕೋರಿದ್ದಾರೆ.
ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ರಾಮ ಭಕ್ತ ಮತ್ತು ಹನುಮಾನ್ ಭಕ್ತ. ಇದನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಬರೆದಿದ್ದಾರೆ. ಇತ್ತೀಚೆಗಷ್ಟೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ಅವರು ಬ್ಯಾಟ್ ಮಾಡಲು ಬಂದಾಗ ರಾಮ್ ಸಿಯಾ ರಾಮ್ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ರಾಮ ಮತ್ತು ಹನುಮಂತನ ಭಕ್ತ ಕೇಶವ ಮಹಾರಾಜ್ ವಿಶೇಷ ಸಂದೇಶ ನೀಡುವ ಮೂಲಕ ಶುಭಹಾರೈಸಿದ್ದಾರೆ.
IND vs ENG: ಭಾರತದ 2ನೇ ಬೌಲರ್; ಟೆಸ್ಟ್ನಲ್ಲಿ ಇತಿಹಾಸ ಸೃಷ್ಟಿಸಲ್ಲಿದ್ದಾರೆ ಆರ್. ಅಶ್ವಿನ್..!
ಕೇಶವ್ ಮಹಾರಾಜ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲೆಡೆ ಶಾಂತಿ, ಸದ್ಭಾವನೆ ಹಾಗೂ ಆಧ್ಯಾತ್ಮಿಕ ಜಾಗೃತಿ ಮೂಡಲಿ ಎಂದು ಹೇಳಿದ್ದಾರೆ. ಜೈ ಶ್ರೀ ರಾಮ್ ಎಂದು ಹೇಳುವ ಮೂಲಕ ವಿಡಿಯೋವನ್ನು ಕೊನೆಗೊಳಿಸಿದರು.
Keshav Maharaj wishes everyone ahead of the Pran Pratishtha of Lord Rama in Ram Temple. pic.twitter.com/zU00hr7DgJ
— Mufaddal Vohra (@mufaddal_vohra) January 21, 2024
ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಹಲವಾರು ಕ್ರಿಕೆಟಿಗರನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ಸುನಿಲ್ ಗವಾಸ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ವೀರೇಂದ್ರ ಸೆಹ್ವಾಗ್, ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಕೂಡ ಇದ್ದಾರೆ. ಕೊಹ್ಲಿ ಅಯೋಧ್ಯೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ವಿರಾಟ್ ಅವರ ಬೆಂಗಾವಲು ಪಡೆ ಅಯೋಧ್ಯೆ ಪ್ರವೇಶಿಸುವ ವಿಡಿಯೋ ವೈರಲ್ ಆಗಿದೆ.
ಕ್ರಿಕೆಟಿಗರನ್ನು ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್ ಅವರನ್ನೂ ಆಹ್ವಾನಿಸಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ