IPL 2027: ಎಷ್ಟು ಕೋಟಿ ಹೇಳಿ… ಹಾರ್ದಿಕ್ ಪಾಂಡ್ಯ ಖರೀದಿಗೆ KKR..!

Hardik Pandya: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು 38 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಎಂಐ ಪಡೆ ಗೆದ್ದಿರುವುದು ಕೇವಲ 15 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ ಬರೋಬ್ಬರಿ 23 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸೋಲನುಭವಿಸಿದೆ. ಹೀಗಾಗಿಯೇ ಹಾರ್ದಿಕ್ ಪಾಂಡ್ಯರನ್ನು ಟ್ರೇಡ್ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಿದೆ.

IPL 2027: ಎಷ್ಟು ಕೋಟಿ ಹೇಳಿ... ಹಾರ್ದಿಕ್ ಪಾಂಡ್ಯ ಖರೀದಿಗೆ KKR..!
Hardik Pandya
Image Credit source: KKRfans IG

Updated on: Jun 24, 2026 | 12:24 PM

IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20ರ ಮಿನಿ ಹರಾಜಿಗೂ ಮುನ್ನವೇ ಮತ್ತೊಂದು ಬಿಗ್ ಟ್ರೇಡ್ ನಡೆಯುವ ಸಾಧ್ಯತೆಯಿದೆ. ಈ ಬಾರಿ ಟ್ರೇಡ್ ನಡೆಯಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ. ಅದು ಕೂಡ ಹಾರ್ದಿಕ್ ಪಾಂಡ್ಯಗಾಗಿ..!

ಅಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಆಸಕ್ತಿ ತೋರಿದೆ.  ಅಲ್ಲದೆ ಈ ಕುರಿತು ಕೆಕೆಆರ್ ಆಡಳಿತ ಮಂಡಳಿಯು ಈಗಾಗಲೇ ಮುಂಬೈ ಇಂಡಿಯನ್ಸ್ ಜೊತೆ ಮಾತುಕತೆ ಆರಂಭಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಕೋಲ್ಕತಾ ನೈಟ್ ರೈಡರ್ಸ್ ತಂಡವು ಹಾರ್ದಿಕ್ ಪಾಂಡ್ಯಗೆ ಕೇವಲ ದೊಡ್ಡ ಮೊತ್ತದ ಆಫರ್ ಮಾತ್ರ ನೀಡಿಲ್ಲ, ಬದಲಿಗೆ ತಂಡದ ದೀರ್ಘಕಾಲದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಆಮಿಷ ಒಡ್ಡಿದೆ ಎಂದು ತಿಳಿದು ಬಂದಿದೆ.

ಅಂದರೆ ಐಪಿಎಲ್ 2027ರ ಹರಾಜಿಗೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ಖರೀದಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನನ್ನಾಗಿ ಮಾಡಲು ಕೆಕೆಆರ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಕೆಕೆಆರ್ ಎರಡು ಆಯ್ಕೆಗಳನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮುಂದಿಟ್ಟಿದ್ದಾರೆ.

  • ಕ್ಯಾಶ್ ಡೀಲ್: ಹಾರ್ದಿಕ್ ಪಾಂಡ್ಯರನ್ನು ಎಷ್ಟಕ್ಕೆ ಮಾರಾಟ ಮಾಡುತ್ತೀರಾ? ಎಂಬ ಪ್ರಶ್ನೆಯನ್ನು ಕೆಕೆಆರ್ ಫ್ರಾಂಚೈಸಿ ಮುಂಬೈ ಇಂಡಿಯನ್ಸ್​ನ ಮುಂದಿಟ್ಟಿದ್ದಾರೆ. ಅಂದರೆ ಮುಂಬೈ ಇಂಡಿಯನ್ಸ್ ಹೇಳುವ ಮೊತ್ತ ನೀಡಿ ಪಾಂಡ್ಯರನ್ನು ಖರೀದಿಸಲು ಕೆಕೆಆರ್ ಮುಂದಾಗಲಿದೆ.
  • ಸ್ವಾಪ್ ಡೀಲ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಕ್ಯಾಮರೋನ್ ಗ್ರೀನ್ ಅವರನ್ನು ನೀಡಿ ಹಾರ್ದಿಕ್ ಪಾಂಡ್ಯರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕೂಡ ಕೆಕೆಆರ್ ರೆಡಿ ಇದೆ ಎಂದು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಬೇಡಿಕೆ ಏನು?

ಹಾರ್ದಿಕ್ ಪಾಂಡ್ಯ ಬದಲಿಗೆ ಕೆಕೆಆರ್ ತಂಡದಿಂದ ಹರ್ಷಿತ್ ರಾಣಾ, ಆಂಗ್​ಕ್ರಿಶ್ ರಘುವಂಶಿ, ರಮಣ್​ದೀಪ್ ಸಿಂಗ್ ಅವರಂತಹ ಪ್ರಮುಖ ಆಟಗಾರರನ್ನು ನೀಡುವಂತೆ ಮುಂಬೈ ಇಂಡಿಯನ್ಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ಈ ಮೂವರು ಆಟಗಾರರು ಕೆಕೆಆರ್ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರು. ಹೀಗಾಗಿಯೇ ಸ್ವಾಪ್ ಡೀಲ್ ಕುದುರಲಿದೆಯಾ ಎಂಬುದೇ ಪ್ರಶ್ನೆ.

ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್:

ಒಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾರ್ದಿಕ್ ಪಾಂಡ್ಯ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಕೂಡ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತೆರೆಮರೆಯ ಪ್ರಯತ್ನಕ್ಕೆ ಕೈಹಾಕಿದ್ದಾರೆ.

ಇದನ್ನೂ ಓದಿ: IPL 2027: ಬಿಗ್ ಟ್ರೇಡ್… ಇಬ್ಬರು ಆಟಗಾರರ ತಂಡಗಳು ಅದಲು-ಬದಲು

ಪ್ರಸ್ತುತ ಮಾಹಿತಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಯಶಸ್ವಿ ಜೈಸ್ವಾಲ್ ಅವರನ್ನುನೀಡಿ, ಹಾರ್ದಿಕ್‌ ಪಾಂಡ್ಯರನ್ನು ಪಡೆಯಲು ಚಿಂತನೆ ನಡೆಸುತ್ತಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ದೊಡ್ಡ ಕುತೂಹಲವಾಗಿ ಮಾರ್ಪಟ್ಟಿದೆ.

 

 

Follow Us