AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ; ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್

KL Rahul's Century: ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಟೀಂ ಇಂಡಿಯಾವನ್ನು ಪ್ರಬಲ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. 202 ಎಸೆತಗಳಲ್ಲಿ 13 ಬೌಂಡರಿಗಳೊಂದಿಗೆ ಅವರು ತಮ್ಮ 9ನೇ ಟೆಸ್ಟ್ ಶತಕವನ್ನು ಪೂರೈಸಿದರು. ರಿಷಭ್ ಪಂತ್ ಕೂಡ ಶತಕದತ್ತ ಸಾಗುತ್ತಿದ್ದಾರೆ. ಈ ಇಬ್ಬರ ಜೊತೆಯಾಟ ಭಾರತಕ್ಕೆ ದೊಡ್ಡ ಮೊತ್ತವನ್ನು ಗಳಿಸಲು ಸಹಾಯ ಮಾಡಿದೆ.

IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ; ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್
Kl Rahul
ಪೃಥ್ವಿಶಂಕರ
|

Updated on:Jun 23, 2025 | 8:10 PM

Share

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ತಮ್ಮ ತಾಳ್ಮೆಯ ಆಟದ ಮೂಲಕವೇ ಆಂಗ್ಲ ಬೌಲರ್‌ಗಳನ್ನು ಹೈರಾಣಾಗಿಸಿದ ರಾಹುಲ್ 202 ಎಸೆತಗಳಲ್ಲಿ 13 ಬೌಂಡರಿಗಳ ಸಹಿತ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕವನ್ನು ಪೂರೈಸಿದರು. ರಾಹುಲ್ ಅವರ ಈ ಬಲಿಷ್ಠ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ 2ನೇ ಇನ್ನಿಂಗ್ಸ್​ನಲ್ಲಿ ಬಲಿಷ್ಠ ಸ್ಥಿತಿಯಲ್ಲಿದ್ದು, 200 ಕ್ಕೂ ಅಧಿಕ ರನ್ ಕಲೆಹಾಕಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ರಾಹುಲ್ ಮಾತ್ರವಲ್ಲದೆ ಉಪನಾಯಕ ರಿಷಭ್ ಪಂತ್ (Rishabh Pant) ಕೂಡ ಶತಕದ ಸಮೀಪದಲ್ಲಿದ್ದಾರೆ. ಇವರಿಬ್ಬರ ನಡುವೆ ಶತಕದ ಜೊತೆಯಾಟವೂ ಮೂಡಿದೆ.

2023 ರ ನಂತರ ಮೊದಲ ಟೆಸ್ಟ್ ಶತಕ

ಲೀಡ್ಸ್‌ನಲ್ಲಿ ರಾಹುಲ್​ ಅವರ ಬ್ಯಾಟ್‌ನಿಂದ ಸಿಡಿದ ಮೊದಲ ಶತಕವಾಗಿರುವುದರಿಂದ ಇದು ಬಹಳ ವಿಶೇಷವಾಗಿದೆ. ಹಾಗೆಯೇ 2023 ರ ನಂತರ ರಾಹುಲ್ ಸಿಡಿಸಿದ ಮೊದಲ ಟೆಸ್ಟ್ ಶತಕ ಇದಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಸೆಂಚುರಿಯನ್ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ಶತಕ ಬಾರಿಸಿದ್ದ ರಾಹುಲ್, ಇದೀಗ ತಮ್ಮ ಶತಕಗಳ ಬರವನ್ನು ನೀಗಿಸಿಕೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ರಾಹುಲ್ ಕೊನೆಯ ಇಂಗ್ಲೆಂಡ್ ಪ್ರವಾಸದಲ್ಲಿಯೂ ಶತಕ ಬಾರಿಸಿದ್ದರು. ರಾಹುಲ್ ಇದುವರೆಗೆ ಇಂಗ್ಲೆಂಡ್‌ನಲ್ಲಿ ಒಟ್ಟು 3 ಟೆಸ್ಟ್ ಶತಕಗಳನ್ನು ಬಾರಿಸಿದ್ದು, ಇಂಗ್ಲೆಂಡ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ ಐದು ಶತಕಗಳನ್ನು ಕಲೆಹಾಕಿದ್ದಾರೆ.

ವಿದೇಶಿ ಪಿಚ್‌ಗಳಲ್ಲಿ ರಾಹುಲ್ ಮ್ಯಾಜಿಕ್

ಸಾಮಾನ್ಯವಾಗಿ ಆಟಗಾರರು ತಮ್ಮ ತವರು ನೆಲದಲ್ಲಿ ಹೆಚ್ಚು ಶತಕಗಳನ್ನು ಬಾರಿಸಿರುವುದನ್ನು ನಾವು ನೋಡಿದ್ದೇವೆ. ಆದರೆ ಕೆಎಲ್ ರಾಹುಲ್ ಈ ವಿಚಾರದಲ್ಲಿ ಸ್ವಲ್ಪ ಭಿನ್ನವಾಗಿದ್ದಾರೆ. ವಿದೇಶದಲ್ಲಿ ಶತಕ ಬಾರಿಸುವುದನ್ನು ರೂಢಿ ಮಾಡಿಕೊಂಡಿರುವ ರಾಹುಲ್, ಇದುವರೆಗೆ ಬಾರಿಸಿರುವ 9 ಟೆಸ್ಟ್ ಶತಕಗಳಲ್ಲಿ, 8 ಶತಕಗಳನ್ನು ವಿದೇಶಿ ನೆಲದಲ್ಲೇ ಗಳಿಸಿದ್ದಾರೆ. ರಾಹುಲ್ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು 3 ಶತಕಗಳನ್ನು ಬಾರಿಸಿದ್ದರೆ, ದಕ್ಷಿಣ ಆಫ್ರಿಕಾದಲ್ಲಿ 2 ಶತಕಗಳು, ಶ್ರೀಲಂಕಾದಲ್ಲಿ ಒಂದು ಶತಕ, ವೆಸ್ಟ್ ಇಂಡೀಸ್‌ನಲ್ಲಿ ಒಂದು ಶತಕ ಮತ್ತು ಆಸ್ಟ್ರೇಲಿಯಾದಲ್ಲಿ ಒಂದು ಶತಕ ಬಾರಿಸಿದ್ದಾರೆ. ಅಲ್ಲದೆ ರಾಹುಲ್ ಸೆನಾ ದೇಶಗಳಲ್ಲಿ ಆರಂಭಿಕ ಆಟಗಾರನಾಗಿ 5 ಶತಕಗಳನ್ನು ಬಾರಿಸಿದ್ದು, ಈ ವಿಚಾರದಲ್ಲಿ ಸುನಿಲ್ ಗವಾಸ್ಕರ್ ನಂತರದ ಸ್ಥಾನದಲ್ಲಿದ್ದಾರೆ. ಗವಾಸ್ಕರ್ ಸೆನಾ ದೇಶಗಳಲ್ಲಿ 8 ಶತಕಗಳನ್ನು ಗಳಿಸಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್

ಇಂಗ್ಲೆಂಡ್ ಎಂದರೆ ರಾಹುಲ್​ಗೆ ಅಚ್ಚುಮೆಚ್ಚು

ಸೆನಾ ದೇಶಗಳಲ್ಲಿ ಇಂಗ್ಲೆಂಡ್‌ ಎಂದರೆ ರಾಹುಲ್​ಗೆ ಬಹಳ ಅಚ್ಚುಮೆಚ್ಚು. ಅವರು ಈ ದೇಶದಲ್ಲಿ ಒಟ್ಟು ಮೂರು ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. 2018 ರಲ್ಲಿ ದಿ ಓವರ್​ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಮೊದಲ ಶತಕ ಬಾರಿಸಿದ್ದ ರಾಹುಲ್, ಆ ಬಳಿಕ 2021 ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ 2ನೇ ಶತಕ ಪೂರೈಸಿದ್ದರು. ಈಗ ಲೀಡ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Mon, 23 June 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ