KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ
Athiya Shetty and KL Rahul Announce Baby Girl's Name: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಇತ್ತಿಚೆಗಷ್ಟೆ ಹೆಣ್ಣು ಮಗುವಿಗೆ ಪೋಷಕರಾಗಿದ್ದರು. ಇದೀಗ ಈ ಜೋಡಿ ತಮ್ಮ ಮಗಳಿಗೆ ಮುದ್ದಾದ ಹೆಸರನ್ನು ಇಟ್ಟಿದ್ದಾರೆ. ಈ ಮಾಹಿತಿಯನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಮಗಳಿಗೆ "ಇವಾರಾ" ಎಂದು ಹೆಸರಿಟ್ಟಿರುವುದಾಗಿ ಬಹಿರಂಗಪಡಿಸಿದ್ದಾರೆ. ಸಂಸ್ಕೃತದಲ್ಲಿ ಇದರ ಅರ್ಥ "ದೇವರ ಕೊಡುಗೆ" ಎಂದು.

ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ (KL Rahul) ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ (Athiya Shetty) ಇತ್ತೀಚೆಗಷ್ಟೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದರು. ಮಾರ್ಚ್ 24 ರಂದು, ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ಹೀಗಾಗಿಯೇ ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ತಮ್ಮ ತಂಡದ ಮೊದಲ ಪಂದ್ಯವನ್ನು ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.
ಕೆಎಲ್ ರಾಹುಲ್ ಮಗಳ ಹೆಸರೇನು?
ಕೆಎಲ್ ರಾಹುಲ್ ಪ್ರಸ್ತುತ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಏತನ್ಮಧ್ಯೆ, ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ನಲ್ಲಿ ಅವರು ಅಥಿಯಾ ಶೆಟ್ಟಿ ಮತ್ತು ಅವರ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ, ಅವರು ಶೀರ್ಷಿಕೆಯಲ್ಲಿ ತಮ್ಮ ಮಗಳ ಹೆಸರನ್ನು ಉಲ್ಲೇಖಿಸಿದ್ದು, ‘ನಮ್ಮ ಮಗಳು, ನಮ್ಮ ಸರ್ವಸ್ವ. ಇವಾರಾ- ದೇವರ ಕೊಡುಗೆ. ಇವಾರಾ ಎಂಬುದು ಸಂಸ್ಕೃತ ಪದವಾಗಿದ್ದು, ಇದರ ಅರ್ಥ ದೇವರ ಕೊಡುಗೆ ಎಂದು ಬರೆದುಕೊಂಡಿದ್ದಾರೆ.
View this post on Instagram
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜನವರಿ 2023 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರಯ. ಅವರ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು, ಇದಕ್ಕೂ ಮೊದಲು ಇಬ್ಬರೂ ದೀರ್ಘಕಾಲ ಡೇಟಿಂಗ್ ಮಾಡಿದ್ದರು. ಆ ಬಳಿಕ 2024 ರ ನವೆಂಬರ್ನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ ಕೆಎಲ್ ರಾಹುಲ್ ಮತ್ತು ಅಥಿಯಾ ತಾವು ಪೋಷಕರಾಗಲಿರುವ ಮಾಹಿತಿ ಹಂಚಿಕೊಂಡಿದ್ದರು.
IND vs NZ: ಕಿವೀಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಕೆಎಲ್ ರಾಹುಲ್
ಐಪಿಎಲ್‌ನಲ್ಲಿ ರಾಹುಲ್ ಪರಾಕ್ರಮ
ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆಎಲ್ ರಾಹುಲ್ ಅವರನ್ನು 14 ಕೋಟಿ ರೂ.ಗೆ ಖರೀದಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅಮೋಘ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಇಲ್ಲಿಯವರೆಗೆ ಆಡಿರುವ 5 ಪಂದ್ಯಗಳಲ್ಲಿ 59.50 ಸರಾಸರಿಯಲ್ಲಿ 238 ರನ್ ಗಳಿಸಿದ್ದಾರೆ, ಇದರಲ್ಲಿ 2 ಅರ್ಧಶತಕಗಳು ಸೇರಿವೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರಾಹುಲ್ 93 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:45 pm, Fri, 18 April 25