KL Rahul: ದಕ್ಷಿಣ ಆಫ್ರಿಕಾದಲ್ಲಿ ಕೆಎಲ್ ರಾಹುಲ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ..!

Team India: ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್...

KL Rahul: ದಕ್ಷಿಣ ಆಫ್ರಿಕಾದಲ್ಲಿ ಕೆಎಲ್ ರಾಹುಲ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ..!
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 17, 2022 | 8:18 PM

ಭಾರತ-ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಜನವರಿ 19 ರಿಂದ ಶುರುವಾಗಲಿದೆ. ಈ ಸರಣಿಯೊಂದಿಗೆ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಕೆಎಲ್ ರಾಹುಲ್ ಪದಾರ್ಪಣೆ ಮಾಡಲಿದ್ದಾರೆ. ತಂಡದ ಉಪನಾಯರಾಗಿದ್ದ ರಾಹುಲ್, ಇದೀಗ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಆದರೆ ಈಗಾಗಲೇ ಟೀಮ್ ಇಂಡಿಯಾ ವಿರುದ್ದ ಟೆಸ್ಟ್ ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾವನ್ನು ಮಣಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿಯೇ ಸೌತ್ ಆಫ್ರಿಕಾ ಸರಣಿ ಕೆಎಲ್ ರಾಹುಲ್ ಅವರ ನಾಯಕತ್ವಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ.

ಏಕೆಂದರೆ ರಾಹುಲ್ ಇದುವರೆಗೆ ಏಕದಿನ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿಲ್ಲ. ಈ ಹಿಂದೆ ದೇಶೀಯ ಟೂರ್ನಿಯಲ್ಲಿ ಒಂದು ಬಾರಿ ನಾಯಕನಾಗಿ ಆಡಿದ್ದು ಬಿಟ್ಟರೆ, ಆ ಬಳಿಕ ಕ್ಯಾಪ್ಟನ್ ಆಗಿದ್ದು ಐಪಿಎಲ್​ನಲ್ಲಿ ಎಂಬುದು ವಿಶೇಷ. ಆದರೆ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಅವರ ಕ್ಯಾಪ್ಟನ್ಸಿ ಹೇಳಿಕೊಳ್ಳುವಂತಿಲ್ಲ. ಏಕೆಂದರೆ ಎರಡು ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್​ ಅನ್ನು ಮುನ್ನಡೆಸಿದ್ದ ರಾಹುಲ್ ತಂಡವನ್ನು ಪ್ಲೇಆಫ್​ಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದರು.

ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಅವರ ನಾಯಕತ್ವದ ಅಂಕಿ ಅಂಶಗಳನ್ನು ಗಮನಿಸುವುದಾದರೆ, ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು 27 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಇದರಲ್ಲಿ ಗೆದ್ದಿರೋದು 11 ಪಂದ್ಯಗಳಲ್ಲಿ ಮಾತ್ರ. ಅಂದರೆ ರಾಹುಲ್ ಕ್ಯಾಪ್ಟನ್ಸಿಯಲ್ಲಿ ಪಂಜಾಬ್ 14 ಪಂದ್ಯಗಳಲ್ಲಿ ಸೋತಿದ್ದಾರೆ. ಇನ್ನು ಎರಡು ಪಂದ್ಯಗಳು ಟೈ ಆಗಿವೆ. ಇಲ್ಲಿ ಒಟ್ಟಾರೆ ಐಪಿಎಲ್ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ರಾಹುಲ್ ಕ್ಯಾಪ್ಟನ್ಸಿ ಸಕ್ಸಸ್ ಕೇವಲ 44 ಪರ್ಸೆಂಟ್ ಮಾತ್ರ.

ಇನ್ನು ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ ರಾಹುಲ್ ಚೊಚ್ಚಲ ಪಂದ್ಯದಲ್ಲೇ ಸೋಲಿನ ರುಚಿ ನೋಡಿದ್ದರು. ಇತ್ತ ದೇಶೀಯ ಅಂಗಳದಲ್ಲಿ ರಾಹುಲ್ ಜೂನಿಯರ್ ಕ್ರಿಕೆಟ್ ಅಥವಾ ಸೀನಿಯರ್ ಕ್ರಿಕೆಟ್ ತಂಡಗಳ ನಾಯಕರಾಗಿ ಕೂಡ ಕಾಣಿಸಿಕೊಂಡಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯು ನಾಯಕನಾಗಿ ಕೆಎಲ್ ರಾಹುಲ್ ಪಾಲಿಗೆ ದೊಡ್ಡ ಸವಾಲಾಗಿದೆ. ಅಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಕೆಎಲ್ ರಾಹುಲ್ ಅವರ ನಾಯಕತ್ವದ ಸಾಮರ್ಥ್ಯವೂ ಗೊತ್ತಾಗಲಿದೆ. ಇಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರೆ, ಟೆಸ್ಟ್ ತಂಡದ ನಾಯಕನಾಗಿ ಆಯ್ಕೆ ಆಗಬಹುದು. ಒಂದು ವೇಳೆ ಸೋತರೆ, ಟೆಸ್ಟ್ ನಾಯಕತ್ವದ ರೇಸ್‌ನಲ್ಲಿ ಹಿಂದೆ ಬೀಳಬಹುದು.

ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ ವೇಳಾಪಟ್ಟಿ ಹೀಗಿದೆ:

ಜನವರಿ 19 (ಬುಧವಾರ) – 1ನೇ ODI – ಬೋಲ್ಯಾಂಡ್ ಪಾರ್ಕ್, ಪಾರ್ಲ್ – ಮಧ್ಯಾಹ್ನ 2 ಗಂಟೆಗೆ

ಜನವರಿ 21 (ಶುಕ್ರವಾರ) – 2ನೇ ODI – ಬೋಲ್ಯಾಂಡ್ ಪಾರ್ಕ್, ಪಾರ್ಲ್ – ಮಧ್ಯಾಹ್ನ 2 ಗಂಟೆಗೆ

23 ಜನವರಿ (ಭಾನುವಾರ) – 3 ನೇ ODI – ನ್ಯೂಲ್ಯಾಂಡ್ಸ್, ಕೇಪ್ ಟೌನ್ – ಮಧ್ಯಾಹ್ನ 2 ಗಂಟೆಗೆ

ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್, ಇಶಾನ್ ಕಿಶನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಜಯಂತ್ ಯಾದವ್ ಮತ್ತು ನವದೀಪ್ ಸೈನಿ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(KL Rahul Captaincy record & India vs South Africa ODI series)

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ