AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ

Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ತಂಡಗಳು ಸೆಮಿಫೈನಲ್​ಗೇರಲಿದೆ.

ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ
Kl Rahul
ಝಾಹಿರ್ ಯೂಸುಫ್
|

Updated on: Feb 09, 2026 | 11:05 AM

Share

ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವನ್ನು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 120 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ಪರ ಮಯಾಂಕ್ ಅಗರ್ವಾಲ್ 92 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 173 ರನ್​ಗಳಿಸಿ ಆಲೌಟ್ ಆಯಿತು.

ಮುಂಬೈ ಭರ್ಜರಿ ಬ್ಯಾಟಿಂಗ್:

53 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಮುಂಬೈ ಪರ ಆಕಾಶ್ ಆನಂದ್ 70 ರನ್ ಬಾರಿಸಿದರೆ, ಯಶಸ್ವಿ ಜೈಸ್ವಾಲ್ 36 ರನ್​ಗಳಿಸಿದರು. ಇನ್ನು ತನುಷ್ ಕೋಟ್ಯಾನ್ ಅಜೇಯ 48 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬರೋಬ್ಬರಿ 377 ರನ್​ಗಳಿಸಿ ಆಲೌಟ್ ಆಯಿತು.

ಕೆಎಲ್ ರಾಹುಲ್ ಶತಕ:

ಮೊದಲ ಇನಿಂಗ್ಸ್​ನಲ್ಲಿನ 53 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 325 ರನ್​ಗಳ ಗುರಿ ಪಡೆದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಮಯಾಂಕ್ ಅಗರ್ವಾಲ್ ಕೇವಲ 3 ರನ್​ಗಳಿಸಿ ಔಟಾಗಿದ್ದಾರೆ. ಆದರೆ ಬಳಿಕ ಬಂದ ದೇವತ್ ಪಡಿಕ್ಕಲ್ 39 ರನ್​ಗಳ ಕೊಡುಗೆ ನೀಡಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಕೆಎಲ್ ರಾಹುಲ್ 147 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಶತಕ ಪೂರೈಸಿದ್ದಾರೆ. ಈ ಮೂಲಕ ಕರ್ನಾಟಕ ತಂಡವನ್ನು ಗೆಲುವಿತ್ತ ಕೊಂಡೊಯ್ಯುತ್ತಿದ್ದಾರೆ.

ಇದೀಗ 47 ಓವರ್​ಗಳ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 3 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಸ್ಮರಣ್ ರವಿಚಂದ್ರನ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 116 ರನ್​ಗಳಿಸಿದರೆ ಪಂದ್ಯ ಗೆದ್ದು ಸೆಮಿಫೈನಲ್​ಗೇರಬಹುದು.

ಮುಂಬೈ ಪ್ಲೇಯಿಂಗ್ 11: ಅಖಿಲ್ ಹೆರ್ವಾಡ್ಕರ್ , ಯಶಸ್ವಿ ಜೈಸ್ವಾಲ್ , ಮುಶೀರ್ ಖಾನ್ , ತುಷಾರ್ ದೇಶಪಾಂಡೆ , ಆಕಾಶ್ ಆನಂದ್ (ವಿಕೆಟ್ ಕೀಪರ್) , ಶಾರ್ದೂಲ್ ಠಾಕೂರ್ (ನಾಯಕ) , ಸೂರ್ಯಾಂಶ್ ಶೆಡ್ಗೆ , ಸಿದ್ಧೇಶ್ ಲಾಡ್ , ಶಮ್ಸ್ ಮುಲಾನಿ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ಥಿ.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

ಕರ್ನಾಟಕ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಮಾಯಾಂಕ್ ಅಗರ್ವಾಲ್ , ಕರುಣ್ ನಾಯರ್ , ದೇವದತ್ತ್ ಪಡಿಕ್ಕಲ್ (ನಾಯಕ) , ಶ್ರೇಯಸ್ ಗೋಪಾಲ್ , ಸ್ಮರಣ್ ರವಿಚಂದ್ರನ್ , ಕೃತಿಕ್ ಕೃಷ್ಣ (ವಿಕೆಟ್ ಕೀಪರ್) ವಿದ್ಯಾಧರ ಪಾಟೀಲ್ , ಪ್ರಸಿದ್ಧ್ ಕೃಷ್ಣ , ಶಿಖರ್ ಶೆಟ್ಟಿ ,ವಿಧ್ವತ್ ಕಾವೇರಪ್ಪ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು