AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವೃತ್ತಿಜೀವನದ 9ನೇ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್..!

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯಗಳಲ್ಲಿ ಬ್ಯಾಟಿಂಗ್ ಅವಕಾಶ ಸಿಗದಿದ್ದರೂ, ರಾಹುಲ್ 80 ಎಸೆತಗಳಲ್ಲಿ 9ನೇ ಏಕದಿನ ಶತಕ ಪೂರೈಸಿ, ಒತ್ತಡದ ಪರಿಸ್ಥಿತಿಯಲ್ಲಿ ಅಮೂಲ್ಯ ಪ್ರದರ್ಶನ ನೀಡಿದರು. ಸಿಕ್ಸರ್ ಮೂಲಕ ಶತಕ ಪೂರೈಸಿದ್ದು ಇನ್ನೊಂದು ವಿಶೇಷವಾಗಿತ್ತು.

ಏಕದಿನ ವೃತ್ತಿಜೀವನದ 9ನೇ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್..!
ಕೆಎಲ್ ರಾಹುಲ್
ಪೃಥ್ವಿಶಂಕರ
|

Updated on:Oct 03, 2026 | 6:49 PM

Share

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿದ್ದಾರೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ಮಾಡುವ ಅವಕಾಶವೇ ರಾಹುಲ್​ಗೆ ಸಿಕ್ಕಿರಲಿಲ್ಲ. ಹೀಗಾಗಿ ತಂಡದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲೇಬೇಕಾದ ಒತ್ತಡದಲ್ಲಿದ್ದ ರಾಹುಲ್ ಅವಕಾಶ ಸಿಕ್ಕೊಡನೆ ಅದನ್ನು ಎರಡು ಕೈಗಳಿಂದ ಬಾಚಿಕೊಂಡಿದ್ದಾರೆ. ನ್ಯೂ ಚಂಡೀಗಢದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ರಾಹುಲ್ ವಿಂಡೀಸ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ 80 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ 9ನೇ ಶತಕವನ್ನು ಪೂರೈಸಿದರು.ರಾಹುಲ್ 49ನೇ ಓವರ್​ನ 4ನೇ ಎಸೆತವನ್ನು ಸಿಕ್ಸರ್​ಗಟ್ಟುವ ಮೂಲಕ ತಮ್ಮ ಶತಕ ಪೂರೈಸಿದ್ದು ಮತ್ತಷ್ಟು ವಿಶೇಷವಾಗಿತ್ತು. ರಾಹುಲ್ ಅವರ ಶತಕದ ಬಲದಿಂದ ಭಾರತ ಮೊದಲು ಬ್ಯಾಟಿಂಗ್ ಮಾಡಿ 351 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.

Published On - 6:16 pm, Sat, 3 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More