KL Rahul: ಕೆಎಲ್ ರಾಹುಲ್​ರನ್ನು ಕೆಣಕಿದ ಎಲ್ಗರ್: ನಾಯಕರ ನಡುವೆ ಮಾತಿನ ಚಕಮಕಿ

| Updated By: ಝಾಹಿರ್ ಯೂಸುಫ್

Updated on: Jan 05, 2022 | 2:57 PM

India vs South Africa: 2ನೇ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಸುಸ್ಥಿತಿಯಲ್ಲಿದೆ. 3ನೇ ದಿನದಾಟದ ಮೊದಲ ಸೆಷನ್ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿದೆ. ಕ್ರೀಸ್​ನಲ್ಲಿ ಅರ್ಧಶತಗಳನ್ನು ಬಾರಿಸಿದ ಅಜಿಂಕ್ಯ ರಹಾನೆ ಹಾಗೂ ಚೇತೇಶ್ವರ ಪೂಜಾರ ಬ್ಯಾಟ್ ಮಾಡುತ್ತಿದ್ದಾರೆ.

KL Rahul: ಕೆಎಲ್ ರಾಹುಲ್​ರನ್ನು ಕೆಣಕಿದ ಎಲ್ಗರ್: ನಾಯಕರ ನಡುವೆ ಮಾತಿನ ಚಕಮಕಿ
KL Rahul
Follow us on

ಭಾರತ-ದಕ್ಷಿಣ ಆಫ್ರಿಕಾ (India vs South Africa) ನಡುವಣ 2ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ (Team India) ನಾಯಕ ಕೆಎಲ್ ರಾಹುಲ್ (KL Rahul) ಹಾಗೂ ದಕ್ಷಿಣ ಆಫ್ರಿಕಾ ನಾಯಕ ಡೀನ್ ಎಲ್ಗರ್ ನಡುವೆ ಮಾತಿನ ಚಕಮಕಿ ನಡೆದಿದೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 202 ರನ್​ಗಳಿಸಿದರೆ, ದಕ್ಷಿಣ ಆಫ್ರಿಕಾ 229 ರನ್​ ಕಲೆಹಾಕಿತ್ತು. 27 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. 21 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಕೇವಲ 8 ರನ್​ಗಳಿಸಿ ಮಾರ್ಕೊ ಜಾನ್ಸನ್ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು.

ಔಟಾದ ಬಳಿಕ ಹಿಂತಿರುಗುತ್ತಿದ್ದ ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್ ಕೆಣಕಿದ್ದಾರೆ. ಸೌತ್ ಆಫ್ರಿಕಾ ನಾಯಕ ನಡೆಯಿಂದ ಅಸಮಾಧಾನಗೊಂಡ ರಾಹುಲ್ ಕೂಡ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುತ್ತಾ ಮಾತಿನ ಚಕಮಕಿ ಮುಂದುವರೆಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ನಾಯಕ ನಡೆಗೆ ವ್ಯಾಪಕ ಆಕ್ರೋಶಗಳು ಕೇಳಿ ಬರುತ್ತಿದೆ.

ಸದ್ಯ 2ನೇ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಸುಸ್ಥಿತಿಯಲ್ಲಿದೆ. 3ನೇ ದಿನದಾಟದ ಮೊದಲ ಸೆಷನ್ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿದೆ. ಕ್ರೀಸ್​ನಲ್ಲಿ ಅರ್ಧಶತಗಳನ್ನು ಬಾರಿಸಿದ ಅಜಿಂಕ್ಯ ರಹಾನೆ ಹಾಗೂ ಚೇತೇಶ್ವರ ಪೂಜಾರ ಬ್ಯಾಟ್ ಮಾಡುತ್ತಿದ್ದಾರೆ. ಸದ್ಯ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ 128 ರನ್​ ಕಲೆಹಾಕಿದ್ದು, ಬೃಹತ್ ಮೊತ್ತ ಪೇರಿಸಿ ನಾಲ್ಕನೇ ದಿನದಾಟದಲ್ಲಿ ಡಿಕ್ಲೇರ್ ಮಾಡಿಕೊಳ್ಳುವ ಇರಾದೆಯಲ್ಲಿದೆ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(KL Rahul, Dean Elgar have heated exchange after India skipper’s dismissal)