KL Rahul: ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ?

Team India: ಈ ಸರಣಿಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಭಾರತ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಈಗಾಗಲೇ ಟೀಮ್ ಇಂಡಿಯಾ ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ.

KL Rahul: ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ?
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 30, 2022 | 12:25 PM

ಟೀಮ್ ಇಂಡಿಯಾದ (Team India) ಉಪನಾಯಕ ಕೆಎಲ್ ರಾಹುಲ್ (KL Rahul) ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದಾರೆ. ಜುಲೈ 1 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಆರಂಭಿಕನಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಸೌತ್ ಆಫ್ರಿಕಾ ವಿರುದ್ದದ ಸರಣಿಗೂ ಮುನ್ನ ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ರಾಹುಲ್ ತಂಡದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯರಿರಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅಷ್ಟೇ ಅಲ್ಲದೆ ಇದೀಗ ಗಾಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಲು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈಗಾಗಲೇ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿದಿದ್ದು, ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಅಂದರೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಗೂ ಅಲಭ್ಯರಾಗುವುಎದು ಖಚಿತವಾಗಿದೆ.

ಆದರೆ ಅಕ್ಟೋಬರ್-ನವೆಂಬರ್​ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದರ ನಡುವೆ ನಡೆಯುವ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಮಹತ್ವದ ಪಂದ್ಯಗಳಾಗಿವೆ. ಏಕೆಂದರೆ ಈ ಸರಣಿಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಭಾರತ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಈಗಾಗಲೇ ಟೀಮ್ ಇಂಡಿಯಾ ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ. ಆದರೆ ಅತ್ತ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಕಾರಣ ಯಾವಾಗ ಕಂಬ್ಯಾಕ್ ಮಾಡುತ್ತಾರೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಏಕೆಂದರೆ ಸರ್ಜರಿಯ ಬಳಿಕ ಕೆಎಲ್ ರಾಹುಲ್​ ಕನಿಷ್ಠ ಒಂದು ತಿಂಗಳ ವಿಶ್ರಾಂತಿಯನ್ನಾದರೂ ತೆಗೆದುಕೊಳ್ಳಬೇಕಾಗುತ್ತದೆ. ಅಷ್ಟರಲ್ಲಾಗಲೇ ಇಂಗ್ಲೆಂಡ್ ಸರಣಿ ಮುಗಿದಿರಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ-ವೆಸ್ಟ್​ ಇಂಡೀಸ್​ 5 ಟಿ20 ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಜುಲೈ 22 ರಿಂದ ಈ ಸರಣಿ ಶುರುವಾಗಲಿದ್ದು, ಈ ವೇಳೆಗೆ ಕೆಎಲ್ ರಾಹುಲ್ ಚೇತರಿಸಿಕೊಂಡರೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇನ್ನು ಈ ಸರಣಿ ಮುಗಿಯುವುದು ಆಗಸ್ಟ್​ 7 ಕ್ಕೆ, ಅಂದರೆ ಜುಲೈ 29 ರಿಂದ ಟಿ20 ಸರಣಿಯು ಶುರುವಾಗಲಿದೆ. ಹೀಗಾಗಿ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ ಎಂದೇ ಹೇಳಬಹುದು. ಅದರಂತೆ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ವೈಭವವನ್ನು ಕಣ್ತುಂಬಿಕೊಳ್ಳಬೇಕಿದ್ದರೆ ಅಭಿಮಾನಿಗಳು ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯವರೆಗೂ ಕಾಯಲೇಬೇಕಿದೆ.

ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ವೇಳಾಪಟ್ಟಿ ಹೀಗಿದೆ:

  1. ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  2. ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  3. ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  4. ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  5. ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು