AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಟೀಮ್ ಇಂಡಿಯಾದಿಂದ ಕೆಎಲ್ ರಾಹುಲ್ ಔಟ್..!

Team India Squad: ಭಾರತ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ),  ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ.

KL Rahul: ಟೀಮ್ ಇಂಡಿಯಾದಿಂದ ಕೆಎಲ್ ರಾಹುಲ್ ಔಟ್..!
KL Rahul
TV9 Web
| Updated By: ಝಾಹಿರ್ ಯೂಸುಫ್|

Updated on: Jun 16, 2022 | 2:10 PM

Share

ಜುಲೈ 1 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಕೆಎಲ್ ರಾಹುಲ್ (KL Rahul) ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್ ಅವರನ್ನು ತಂಡದಿಂದ ಕೈ ಬಿಡಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜೂನ್ 20 ರಂದು ಟೀಮ್ ಇಂಡಿಯಾ ಟೆಸ್ಟ್ ತಂಡದ ಆಟಗಾರರು ಇಂಗ್ಲೆಂಡ್​ಗೆ ತೆರಳಲಿದೆ. ಆದರೆ ಈ ಆಟಗಾರರ ಪಟ್ಟಿಯಲ್ಲಿ ರಾಹುಲ್ ಹೆಸರಿಲ್ಲ ಎಂದು ತಿಳಿದು ಬಂದಿದೆ. ಇದರೊಂದಿಗೆ ಟೀಮ್ ಇಂಡಿಯಾ ಉಪನಾಯಕ ಕೆಎಲ್​ಆರ್​ ಇಂಗ್ಲೆಂಡ್​ ವಿರುದ್ದದ ಸರಣಿಯಿಂದ ಹೊರಗುಳಿಯುವುದು ಕನ್​ಫರ್ಮ್ ಆದಂತಾಗಿದೆ. ಇದಕ್ಕೂ ಮುನ್ನ ರಾಹುಲ್ ಅವರನ್ನು ಶನಿವಾರ ಮತ್ತೊಂದು ಫಿಟ್​ನೆಸ್​ ಟೆಸ್ಟ್​ಗೆ ಒಳಪಡಿಸಲಾಗುತ್ತದೆ ಎನ್ನಲಾಗಿತ್ತು. ಆದರೆ ಇದೀಗ ಸಂಪೂರ್ಣ ಟೆಸ್ಟ್ ರಿಪೋರ್ಟ್ ಹೊರಬಂದಿದ್ದು, ಹೀಗಾಗಿ ಹೆಚ್ಚುವರಿ ಟೆಸ್ಟ್​ನ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಅಷ್ಟೇ ಅಲ್ಲದೆ ಅವರು ಚೇತರಿಸಿಕೊಳ್ಳಲು ಮತ್ತಷ್ಟು ಸಮಯವಕಾಶದ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಅವರನ್ನು ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಸೌತ್ ಆಫ್ರಿಕಾ ವಿರುದ್ದ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ತೊಡೆಸಂದು ಗಾಯದ ಕಾರಣ ತಂಡದಿಂದ ಅಂತಿಮ ಕ್ಷಣದಲ್ಲಿ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೂ ರಾಹುಲ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಕಾರಣ ರಾಹುಲ್ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ.

ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದು, ಹೀಗಾಗಿಯೇ ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ನಿರ್ಣಾಯಕ ಪಾತ್ರವಹಿಸುವ ನಿರೀಕ್ಷೆಯಲ್ಲಿತ್ತು. ಅಲ್ಲದೆ ರೋಹಿತ್ ಶರ್ಮಾ ಅವರೊಂದಿಗೆ ಟೆಸ್ಟ್‌ನಲ್ಲಿ ಇನಿಂಗ್ಸ್ ಆರಂಭಿಸಬೇಕಿತ್ತು. ಆದರೆ, ಇದೀಗ ಅವರ ನಿರ್ಗಮನದಿಂದಾಗಿ ಟೀಮ್ ಇಂಡಿಯಾ ಪರ್ಯಾಯ ಆರಂಭಿಕನ ಮೊರೆ ಹೋಗಬೇಕಾಗುತ್ತದೆ. ಅಂದಹಾಗೆ, 17 ಸದಸ್ಯರ ತಂಡದಲ್ಲಿ ಶುಭಮನ್ ಗಿಲ್ ಮೂರನೇ ಆರಂಭಿಕನಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಜೊತೆ ಗಿಲ್ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಲ್ಲದೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳನ್ನು ಸಹ ಆಡಲಿದೆ. ಗಾಯಗೊಂಡಿರುವ ಕೆಎಲ್ ರಾಹುಲ್ ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ.

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್