KL Rahul: ಕೆಎಲ್ ರಾಹುಲ್ ಐಪಿಎಲ್​ನಲ್ಲಿ ಹಿಟ್: ಟೀಮ್ ಇಂಡಿಯಾ ಪರ ಫ್ಲಾಪ್

India vs Pakistan: ಪಂಜಾಬ್ ಕಿಂಗ್ಸ್​ ಪರ ಕಣಕ್ಕಿಳಿಯುತ್ತಿರುವ ರಾಹುಲ್ ಐಪಿಎಲ್ 2021 ರಲ್ಲಿ 13 ಪಂದ್ಯಗಳಿಂದ 626 ರನ್​ ಕಲೆಹಾಕಿದ್ದರು. ಇದೇ ವೇಳೆ 6 ಅರ್ಧಶತಕಗಳನ್ನು ಬಾರಿಸಿದ್ದರು.

KL Rahul: ಕೆಎಲ್ ರಾಹುಲ್ ಐಪಿಎಲ್​ನಲ್ಲಿ ಹಿಟ್: ಟೀಮ್ ಇಂಡಿಯಾ ಪರ ಫ್ಲಾಪ್
ಹಾಗೆಯೇ ಪಾಕ್ ವಿರುದ್ದದ ಪಂದ್ಯದಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಕೂಡ ಹಿನ್ನಡೆ ಅನುಭವಿಸಿದ್ದು, ಅದರಂತೆ 2 ಸ್ಥಾನ ಕುಸಿದಿದ್ದಾರೆ. ಮತ್ತೊಂದೆಡೆ ವೆಸ್ಟ್ ಇಂಡೀಸ್ ವಿರುದ್ದ ಅರ್ಧಶತಕ ಬಾರಿಸಿದ ಏಡೆನ್ ಮಾರ್ಕ್ರಮ್ 8ನೇ ಸ್ಥಾನ ಮೇಲೇರಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2021 | 11:03 PM

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದ ಕೆಎಲ್ ರಾಹುಲ್ ಪಾಕಿಸ್ತಾನ್​ ವಿರುದ್ದದ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ್ದಾರೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ರಾಹುಲ್ ಕಣಕ್ಕಿಳಿದಾಗ ಸ್ಪೋಟಕ ಬ್ಯಾಟಿಂಗ್ ನಿರೀಕ್ಷಿಸಲಾಗಿತ್ತು. ಏಕೆಂದರೆ ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ದ ರಾಹುಲ್ ಅಬ್ಬರಿಸಿದ್ದರು. ಆದರೆ ಪಾಕ್ ವಿರುದ್ದ 3ನೇ ಓವರ್​ನಲ್ಲೇ ಇನಿಂಗ್ಸ್ ಅಂತ್ಯಗೊಳಿಸುವ ಮೂಲಕ ನಿರಾಸೆ ಮೂಡಿಸಿದರು.

ಶಾಹಿನ್ ಶಾ ಅಫ್ರಿದಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ರಾಹುಲ್ ಕ್ಲೀನ್ ಬೌಲ್ಡ್ ಆಗಿ ಹೊರನಡೆದರು. ಇದಕ್ಕೂ ಮುನ್ನ 8 ಎಸೆತಗಳನ್ನು ಎದುರಿಸಿದರೂ ರಾಹುಲ್ ಕಲೆಹಾಕಿದ್ದು 3 ರನ್ ಮಾತ್ರ. ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರಾಹುಲ್ ಈ ಹಿಂದೆ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಫಲರಾಗಿದ್ದರು.

ಜನವರಿ 4, 2020 ರಂದು ಆಸ್ಟ್ರೇಲಿಯಾ ವಿರುದ್ಧ ಅರ್ಧಶತಕ ಬಾರಿಸಿದ ಬಳಿಕ ರಾಹುಲ್ ಬ್ಯಾಟ್​ನಿಂದ ದೊಡ್ಡ ಇನಿಂಗ್ಸ್ ಮೂಡಿಬಂದಿಲ್ಲ. ಅಂದರೆ ಕಳೆದ 7 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಿಂದ ರಾಹುಲ್ ರನ್‌ಗಳಿಸಲು ಹೆಣಗಾಡುತ್ತಿದ್ದಾರೆ. ಅದರಲ್ಲೂ ಕಳೆದ ಏಳು ಇನ್ನಿಂಗ್ಸ್‌ಗಳಲ್ಲಿ ರಾಹುಲ್‌ಗೆ ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಕೊನೆಯ 7 ಇನಿಂಗ್ಸ್​ಗಳನ್ನು ಗಮನಿಸಿದ್ರೆ ರಾಹುಲ್ ಕಲೆಹಾಕಿದ್ದು 3, 14, 0, 0, 1, 0, 30. ಅಂದರೆ ಏಳು ಇನ್ನಿಂಗ್ಸ್ ಗಳಲ್ಲಿ ಒಟ್ಟು 48 ರನ್ ಮಾತ್ರ ಕಲೆಹಾಕಿದ್ದಾರೆ.

ಆದರೆ ಇನ್ನೊಂದೆಡೆ ಐಪಿಎಲ್​ನಲ್ಲಿ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪಂಜಾಬ್ ಕಿಂಗ್ಸ್​ ಪರ ಕಣಕ್ಕಿಳಿಯುತ್ತಿರುವ ರಾಹುಲ್ ಐಪಿಎಲ್ 2021 ರಲ್ಲಿ 13 ಪಂದ್ಯಗಳಿಂದ 626 ರನ್​ ಕಲೆಹಾಕಿದ್ದರು. ಇದೇ ವೇಳೆ 6 ಅರ್ಧಶತಕಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ ಈ ಬಾರಿ ಐಪಿಎಲ್​ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಕಳೆದ ಐಪಿಎಲ್ 2020 ರಲ್ಲೂ ರಾಹುಲ್ ಭರ್ಜರಿಯಾಗಿ ಬ್ಯಾಟ್ ಬೀಸಿದ್ದರು. 14 ಪಂದ್ಯಗಳಲ್ಲಿ 670 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದಾಗ್ಯೂ ಟೀಮ್ ಇಂಡಿಯಾ ಪರ ಆಡುವಾಗ ಕೆಎಲ್ ರಾಹುಲ್ ವಿಫಲರಾಗುತ್ತಿರುವುದು ಇದೀಗ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(KL rahul flop show against pakistan in t20 world cup 2021 and t20I)

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು