KL Rahul: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೆಎಲ್ ರಾಹುಲ್

KL Rahul: ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾದಂತಾಗಿದೆ. ಇದಾಗ್ಯೂ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ.

KL Rahul: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೆಎಲ್ ರಾಹುಲ್
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 26, 2023 | 8:27 PM

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಭಾರತ ತಂಡದ ಅಭ್ಯಾಸ ಶಿಬಿರ ನಡೆಯುತ್ತಿದೆ. ಈ ಶಿಬಿರದ 2ನೇ ದಿನದ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಕಾಣಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ಎಂಬುದು ವಿಶೇಷ.

ಈ ಬಾರಿಯ ಏಷ್ಯಾಕಪ್​ಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದರೂ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ತಿಳಿಸಿದ್ದರು. ಅಲ್ಲದೆ ಪಾಕಿಸ್ತಾನ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಅವರು ಫಿಟ್​ನೆಸ್ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಆದರೆ ಎನ್​ಸಿಎ ಕ್ಯಾಂಪ್​ನಲ್ಲಿ ನಡೆದ ಯೋ ಯೋ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಕೆಎಲ್​ಆರ್​ ಕೀಪಿಂಗ್ ಮಾಡುವಷ್ಟು ಫಿಟ್ ಆಗಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ 2ನೇ ದಿನದ ಅಭ್ಯಾಸದಲ್ಲಿ ರಾಹುಲ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್​ನಲ್ಲೂ ಬೆವರಿಳಿಸಿದ್ದಾರೆ.

ಇದರೊಂದಿಗೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾದಂತಾಗಿದೆ. ಇದಾಗ್ಯೂ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ.

ಒಂದು ವೇಳೆ ಮೊದಲ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿದರೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಇಶಾನ್ ಕಿಶನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಇನ್ನುಳಿದ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಗ್ಲೌಸ್ ಧರಿಸುವ ಸಾಧ್ಯತೆ ಹೆಚ್ಚಿದೆ.

ಒಟ್ಟಿನಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವುದು ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆ ಎನ್ನಬಹುದು. ಅದರಂತೆ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲಿ ಎಂದು ಆಶಿಸೋಣ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟ

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್