BGT 2024: ಮತ್ತೆ ಅಭ್ಯಾಸ ಶುರು ಮಾಡಿದ ಕೆಎಲ್ ರಾಹುಲ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್​ನಲ್ಲಿ ಆರಂಭವಾದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ಅಡಿಲೇಡ್ ಆತಿಥ್ಯವಹಿಸಲಿದೆ.

BGT 2024: ಮತ್ತೆ ಅಭ್ಯಾಸ ಶುರು ಮಾಡಿದ ಕೆಎಲ್ ರಾಹುಲ್
KL Rahul
Follow us
ಝಾಹಿರ್ ಯೂಸುಫ್
|

Updated on: Nov 17, 2024 | 2:02 PM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆದ ಅಭ್ಯಾಸ ಪಂದ್ಯದ ವೇಳೆ ರಾಹುಲ್ ಅವರ ಮೊಣಕೈಗೆ ಗಾಯವಾಗಿತ್ತು. ಇದೀಗ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ರಾಹುಲ್ ಮತ್ತೆ ಅಭ್ಯಾಸಕ್ಕೆ ಇಳಿದಿದ್ದಾರೆ.

ಭಾನುವಾರ ನಡೆದ ಅಭ್ಯಾಸದ ವೇಳೆ ಕೆಎಲ್ ರಾಹುಲ್ ಒಂದು ಗಂಟೆಗೂ ಹೆಚ್ಚು ಕಾಲ ಬ್ಯಾಟ್ ಬೀಸಿದ್ದಾರೆ. ಇದೇ ವೇಳೆ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರ ಎಸೆತಗಳನ್ನು ಎದುರಿಸಿದ್ದಾರೆ.

ಇನ್ನು ಸೈಡ್ ಆರ್ಮ್ ಥ್ರೋವರ್‌ಗಳ ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಯಾವುದೇ ಸಮಸ್ಯೆಯಿಲ್ಲದೇ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಹೀಗಾಗಿ ಪರ್ತ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಶುಭ್​ಮನ್ ಗಿಲ್ ಅಲಭ್ಯ:

ಪರ್ತ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಯುವ ದಾಂಡಿಗ ಶುಭ್​ಮನ್ ಗಿಲ್ ಅಲಭ್ಯರಾಗಿದ್ದಾರೆ. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ವೈದ್ಯಕೀಯ ಪರಿಶೀಲನೆ ಬಳಿಕ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಹೊರಗುಳಿಯಲಿದ್ದಾರೆ.

5 ಪಂದ್ಯಗಳ ಟೆಸ್ಟ್ ಸರಣಿ:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್​ನಲ್ಲಿ ಆರಂಭವಾದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ಅಡಿಲೇಡ್ ಆತಿಥ್ಯವಹಿಸಲಿದೆ.

ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ವಿರುದ್ಧ ಗಂಭೀರ ಆರೋಪ: ಟೀಮ್ ಇಂಡಿಯಾದಿಂದ ಬ್ಯಾನ್ ಭೀತಿ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.