IND vs SA ODI Series: ಪ್ರ್ಯಾಕ್ಟೀಸ್ ನಡುವೆ ಮೈದಾನದಲ್ಲಿ ಏಕಾಏಕಿ ವಾಂತಿ ಮಾಡಿಕೊಂಡ ಕೆಎಲ್ ರಾಹುಲ್

KL Rahul, India vs South Africa ODI Series: ಕೆಎಲ್ ರಾಹುಲ್ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಅಭ್ಯಾಸದ ನಡುವಿನಲ್ಲಿ ರಾಹುಲ್​ಗೆ ವಾಂತಿಯಾಗಿದೆ.

IND vs SA ODI Series: ಪ್ರ್ಯಾಕ್ಟೀಸ್ ನಡುವೆ ಮೈದಾನದಲ್ಲಿ ಏಕಾಏಕಿ ವಾಂತಿ ಮಾಡಿಕೊಂಡ ಕೆಎಲ್ ರಾಹುಲ್
KL Rahul
Follow us
Vinay Bhat
|

Updated on: Dec 13, 2023 | 9:57 AM

ಭಾರತ ಕ್ರಿಕೆಟ್ ತಂಡ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಟಿ20 ಸರಣಿ ಆಡುತ್ತಿದೆ. ಇದಾದ ಬಳಿಕ ಡಿಸೆಂಬರ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಒಡಿಐ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವದ ಜವಾಬ್ದಾರಿ ಕೆಎಲ್ ರಾಹುಲ್ (KL Rahul) ಅವರ ಮೇಲಿದೆ. ODI ತಂಡದ ಕೆಲವು ಆಟಗಾರರು ಇನ್ನೂ ಭಾರತದಲ್ಲಿದ್ದು, ಹರಿಣಗಳ ನಾಡಿಗೆ ತೆರಳಬೇಕಷ್ಟೆ. ಈ ಪೈಕಿ ಕೆಎಲ್ ರಾಹುಲ್ ಕೂಡ ಒಬ್ಬರು. ಭಾರತದಲ್ಲಿರುವ ರಾಹುಲ್ ಮೈದಾನದಲ್ಲಿ ಬೆವರು ಹರಿಸಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಇದೀಗ ರಾಹುಲ್ ಅಭ್ಯಾಸದ ವೇಳೆ ವಾಂತಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೆಎಲ್ ರಾಹುಲ್ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ರಾಹುಲ್ ಏಕದಿನ ಸರಣಿಗೆ ತಯಾರಿ ನಡೆಸುತ್ತಿರುವುದು ಕಾಣುತ್ತಿದೆ. ಮೊದಲು ಓಡಿ ನಂತರ ಸ್ಟ್ರೆಚ್ ಮಾಡಿದ್ದಾರೆ. ಈ ಸಮಯದಲ್ಲಿ ಅವರಿಗೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಮೈದಾನದ ಪಕ್ಕಕ್ಕೆ ತೆರಳಿ ವಾಂತಿ ಮಾಡಿಕೊಂಡಿದ್ದಾರೆ. ನಂತರ ರಾಹುಲ್ ಸ್ವಲ್ಪ ನಿರಾಳರಾಗಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಆತಂಕಗೊಂಡಿದ್ದಾರೆ.

ಇದನ್ನೂ ಓದಿ
Image
ಭಾರತ-ದಕ್ಷಿಣ ಆಫ್ರಿಕಾ ನಿರ್ಣಾಯಕ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?
Image
ರಿಂಕು ಸಿಂಗ್ ಸ್ಫೋಟಕ ಆಟದಿಂದ ಆಫ್ರಿಕಾಕ್ಕೆ ಭಾರೀ ನಷ್ಟ: ಗಾಜುಗಳು ಪುಡಿ ಪುಡ
Image
ಸೋತರೂ ಕೈಬಿಡದ ನಾಯಕ: ಪಂದ್ಯದ ಬಳಿಕ ಸೂರ್ಯಕುಮಾರ್ ಏನು ಹೇಳಿದ್ರು ನೋಡಿ
Image
IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ

Suryakumar Yadav: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

View this post on Instagram

A post shared by KL Rahul👑 (@klrahul)

ಕೆಎಲ್ ರಾಹುಲ್ ಆರೋಗ್ಯ ಈಗ ಹೇಗಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ, ವಿಡಿಯೋದಲ್ಲಿ ಅವರು ಗುಣಮುಖರಾದಂತೆ ಕಾಣುತ್ತಿದೆ. ಈ ಅಭ್ಯಾಸದ ಸಮಯದಲ್ಲಿ, ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸಹ ಅವರೊಂದಿಗೆ ಇದ್ದರು. ಈ ವಿಡಿಯೋದಲ್ಲಿ ಬುಮ್ರಾ- ರಾಹುಲ್ ಸಂಭಾಷಣೆ ಕೂಡ ಇದೆ. ಸದ್ಯದಲ್ಲೇ ಭಾರತ ಏಕದಿನ ತಂಡ ಆಫ್ರಿಕಾ ನಾಡಿಗೆ ಪ್ರಯಾಣ ಬೆಳೆಸಲಿದೆ.

ರಾಹುಲ್ ನಾಯಕತ್ವದ ದಾಖಲೆ

ಕೆಎಲ್ ರಾಹುಲ್ ಇದುವರೆಗೆ ಒಟ್ಟು ಒಂಬತ್ತು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಯಕತ್ವ ವಹಿಸಿದ್ದು, ಈ ಪೈಕಿ ಭಾರತ ಆರರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. 2022ರಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾಗ ಅಲ್ಲಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ರಾಹುಲ್ ತಂಡದ ನಾಯಕರಾಗಿದ್ದರು. ಆದರೆ ಇದರಲ್ಲಿ ಭಾರತ ಸೋಲನುಭವಿಸಿತ್ತು. ಈ ಬಾರಿಯೂ ರಾಹುಲ್ ನಾಯಕರಾಗಿದ್ದು, ಸೇಡು ತೀರಿಸಿಕೊಳ್ಳುತ್ತಾರ ನೋಡಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ