KL Rahul: ಮನಬಂದಂತೆ ಬ್ಯಾಟ್ ಬೀಸಿದ ಕೆಎಲ್ ರಾಹುಲ್: ಟಿ20 ವಿಶ್ವಕಪ್​ನಲ್ಲಿ ಸೃಷ್ಟಿಯಾಯಿತು ಹೊಸ ದಾಖಲೆ

Fastest Fifty in T20 World Cup: ಸ್ಕಾಟ್ಲೆಂಡ್ ವಿರುದ್ಧ ಅಬ್ಬರಿಸುವ ಮೂಲಕ ಕೆಎಲ್ ರಾಹುಲ್ ಟಿ20 ವಿಶ್ವಕಪ್‌ ಇತಿಹಾಸದಲ್ಲಿಯೇ ಅತಿ ವೇಗದ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟರ್ ಎಂಬ ವಿಶೇಷ ದಾಖಲೆಗೆ ಪಾತ್ರರಾದರು. ಇವರ ಜೊತೆಗೆ ಜಸ್​ಪ್ರೀತ್ ಬುಮ್ರಾ ಕೂಡ ವಿಶೇಷ ಮೈಲಿಗಲ್ಲು ತಲುಪಿದ್ದಾರೆ.

KL Rahul: ಮನಬಂದಂತೆ ಬ್ಯಾಟ್ ಬೀಸಿದ ಕೆಎಲ್ ರಾಹುಲ್: ಟಿ20 ವಿಶ್ವಕಪ್​ನಲ್ಲಿ ಸೃಷ್ಟಿಯಾಯಿತು ಹೊಸ ದಾಖಲೆ
KL Rahul vs Scotland
Follow us
| Updated By: Vinay Bhat

Updated on: Nov 06, 2021 | 8:32 AM

ಟಿ20 ವಿಶ್ವಕಪ್​ನಲ್ಲಿ (ICC T20 World Cup 2021) ಭಾರತ ಇನ್ನೂ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಶುಕ್ರವಾರ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ಕಾಣುವ ಮೂಲಕ ಟೀಮ್ ಇಂಡಿಯಾ (India vs Scotland) ನೆಟ್​ರನ್​ರೇಟ್ ಕೂಡ ಹೆಚ್ಚಿಸಿಕೊಂಡಿದೆ. ಅಫ್ಘಾನಿಸ್ತಾನವನ್ನು ಹಿಂದಿಕ್ಕಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬೇಕು ಎಂದಾದರೆ ಭಾರತ (Team India) ಟಾರ್ಗೆಟ್ ಅನ್ನು 7.1 ಓವರ್​ನಲ್ಲಿ ಚೇಸ್ ಮಾಡಬೇಕಿತ್ತು. ಇದನ್ನು ಸವಾಲಾಗಿ ತೆಗೆದುಕೊಂಡಿದ್ದು ಕೆ. ಎಲ್ ರಾಹುಲ್ (KL Rahul) ಹಾಗೂ ರೋಹಿತ್ ಶರ್ಮಾ (Rohit Sharma). ಅದರಲ್ಲು ರಾಹುಲ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ಕಾಟ್ಲೆಂಡ್‌ ನೀಡಿದ್ದ 86 ರನ್‌ ಗುರಿ ಹಿಂಬಾಲಿಸಿದ ಭಾರತ ತಂಡ 6.3 ಓವರ್‌ಗಳಿಗೆ ಎರಡು ವಿಕೆಟ್‌ ನಷ್ಟಕ್ಕೆ 89 ರನ್‌ ಗಳಿಸಿ ಗೆಲುವಿನ ದಡ ಸೇರಿತು. ಇನ್ನೂ 81 ಎಸೆತಗಳು ಬಾಕಿ ಇರುವಾಗಲೇ ಜಯ ಕಂಡಿತು. ರಾಹುಲ್ (KL Rahul Record) ಕೇವಲ 18 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್‌ ಹಾಗೂ 6 ಬೌಂಡರಿಗಳೊಂದಿಗೆ 50 ರನ್‌ ಸಿಡಿಸಿದರು.

ಈ ಮೂಲಕ ಕೆ. ಎಲ್ ರಾಹುಲ್ ವಿಶೇಷ ದಾಖಲೆಯನ್ನ ಮಾಡಿದ್ದಾರೆ. ಟಿ20 ವಿಶ್ವಕಪ್‌ ಇತಿಹಾಸದಲ್ಲಿಯೇ ಅತಿ ವೇಗದ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟರ್ ಎಂಬ ದಾಖಲೆಗೆ ರಾಹುಲ್ ಪಾತ್ರರಾದರು. ಮೊದಲ ಸ್ಥಾನದಲ್ಲಿ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರಿದ್ದಾರೆ. 2007ರ ಉದ್ಘಾಟನಾ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಯುವರಾಜ್‌, ಇಂಗ್ಲೆಂಡ್‌ ವಿರುದ್ಧ ಕೇವಲ 12 ಎಸೆತಗಳಲ್ಲಿ ಅತ್ಯಂತ ವೇಗದ ಅರ್ಧಶತಕ ಸಿಡಿಸಿದ್ದರು. ಈ ದಾಖಲೆ ಮಾಡಿದ ವಿಶ್ವದ ಹಾಗೂ ದೇಶದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ.

ಇದೀಗ ಸ್ಕಾಟ್ಲೆಂಡ್‌ ವಿರುದ್ಧ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕೆ. ಎಲ್‌ ರಾಹುಲ್‌ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. 2009ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ ಭಾರತದ ಜಸ್​ಪ್ರೀತ್ ಬುಮ್ರಾ ದಾಖಲೆಯೊಂದನ್ನು ಬರೆದಿದ್ದಾರೆ. 2 ವಿಕೆಟ್ ಪಡೆದ ಬುಮ್ರಾ ಟಿ20 ಕ್ರಿಕೆಟ್ ನಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 64ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಜಸ್ ಪ್ರೀತ್ ಬುಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಬುಮ್ರಾ 53 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಈ ಸಾಧನೆ ಭಾರತ ಮತ್ತೋರ್ವ ಸ್ಚಾರ್ ಬೌಲರ್ ಯುಜ್ವೇಂದ್ರ ಚಹಾಲ್ ಅವರ ಹೆಸರಿನಲ್ಲಿತ್ತು.

ಇತ್ತ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಭಾರತ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ. ಅತೀ ಹೆಚ್ಚು ಎಸೆತ ಇರುವಂತೆಯೇ ಜಯ ಗಳಿಸಿದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಚೇಸಿಂಗ್ ನಲ್ಲಿ ಭಾರತ ತಂಡದ ಪಾಲಿಗೆ ಇದು ಅತೀ ದೊಡ್ಡ ಗೆಲುವಾಗಿದೆ. ಈ ಪಂದ್ಯದಲ್ಲಿ ಭಾರತ ಇನ್ನೂ 81 ಎಸೆತಗಳು ಬಾಕಿ ಇರುವಂತೆಯೇ ಜಯಿಸಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

India vs Scotland: ಸ್ಕಾಟ್ಲೆಂಡ್ ವಿರುದ್ಧ ಭಾರತದ ರಣಚಂಡಿ ಅವತಾರ: 39 ಎಸೆತಗಳಲ್ಲಿ ಪಂದ್ಯ ಫಿನಿಶ್: ಕೊಹ್ಲಿಗೆ ಪರ್ಫೆಕ್ಟ್ ಗಿಫ್ಟ್

India vs South Africa: ಭಾರತ- ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾವಣೆ! ಸೂಕ್ತ ಕಾರಣ ತಿಳಿಸದ ಮಂಡಳಿ

(KL Rahul hit 18-ball fifty vs Scotland was the second fastest by an Indian in T20 World Cup)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್