ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಈಗಾಗಲೇ ಉಭಯ ತಂಡಗಳು ಬುಧವಾರ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕಾಗಿ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಮೈದಾನಕ್ಕೆ ಬಂದಿದ್ದು, ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ರೋಹಿತ್ ಶರ್ಮಾ ಈ ಸರಣಿಗೆ ಇಲ್ಲದ ಕಾರಣ ತಂಡವನ್ನು ಇದೇ ಮೊದಲ ಬಾರಿಗೆ ಕೆಎಲ್ ರಾಹುಲ್ (KL Rahul) ಮುನ್ನಡೆಸುತ್ತಿದ್ದಾರೆ. ಇವರಿಗೆ ಜಸ್ಪ್ರೀತ್ ಬುಮ್ರಾ ಸಾಥ್ ನೀಡಲಿದ್ದಾರೆ. ಕೆಎಲ್ ರಾಹುಲ್ ಹಾಗೂ ರಾಹುಲ್ ದ್ರಾವಿಡ್ ಇಬ್ಬರು ಕನ್ನಡಿಗರು ಏಕದಿನ ಸರಣಿ ಗೆಲುವಿಗೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದು ಸೇಡು ತೀರಿಸಿಕೊಳ್ಳುವ ಎಲ್ಲ ಲಕ್ಷಣಗಳಿವೆ. ನಾಳೆ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಇದಕ್ಕೂ ಮುನ್ನ ನಾಯಕ ರಾಹುಲ್ ಇಂದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಈವೇಳೆ ತಂಡದ ಪ್ಲೇಯಿಂಗ್ ಇಲೆವೆನ್ (India Playing XI) ಬಗ್ಗೆ ಮಹತ್ವದ ಹೇಳಿಕೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು, ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಮೇಲೆಯೇ ಎಲ್ಲರ ಕಣ್ಣಿದೆ. ಯಾಕಂದ್ರೆ ಅಷ್ಟೊಂದು ಸ್ಟಾರ್ ಆಟಗಾರರಿಂದ ಟೀಮ್ ಇಂಡಿಯಾ ತುಂಬಿದೆ. ಓಪನರ್ಗಳ ಸ್ಥಾನಕ್ಕೇ 4 ಆಟಗಾರರಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಅನುಭವಿಗಳ ದಂಡೇ ಇದೆ. ಆಲ್ರೌಂಡರ್ ಸ್ಥಾನಕ್ಕೆ ಕೂಡ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಆಡುವ ಬಳಗದ್ದೇ ದೊಡ್ಡ ತಲೆನೋವಾಗಿದೆ. ಸುದ್ದಿಗೋಷ್ಠಿಯಲ್ಲಿ ರಾಹುಲ್ ಈ ಪ್ರಶ್ನೆಗೆ ಹೇಗೆ ಉತ್ತರಿಸುತ್ತಾರೆ ಎಂಬುದು ಕುತೂಹಲ.
ಸುದ್ದಿಗೋಷ್ಠಿಯಲ್ಲಿ ನಾಯಕ ಕೆಎಲ್ ರಾಹುಲ್ಗೆ ಎದುರಾಗಬಹುದಾದ ಪ್ರಶ್ನೆ:
ಏಕದಿನ ಸರಣಿಗೆ ವೇಗಿಗಳ ನಡುವೆಯೂ ಪೈಪೋಟಿ ಏರ್ಪಟ್ಟಿದೆ. ಉಪ ನಾಯಕ ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಆಯ್ಕೆಯಾಗಿದ್ದಾರೆ. ಮೂರನೇ ವೇಗಿಯ ಸ್ಥಾನಕ್ಕೆ ಶಾರ್ದೂಲ್ ಥಾಕೂರ್, ದೀಪಕ್ ಚಹಾರ್ ಹಾಗೂ ಮೊಹಮ್ಮದ್ ಸಿರಾಜ್ ಮೂವರು ಬೌಲರ್ಗಳಿದ್ದಾರೆ. ಇವರಲ್ಲಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಸ್ಪಿನ್ನರ್ಗಳ ಪೈಕಿ ಆರ್. ಅಶ್ವಿನ್ ಹಾಗೂ ಯುಜ್ವೇಂದ್ರ ಚಹಾಲ್ ಬಹುತೇಕ ಖಚಿತ ಎನ್ನಬಹುದು. ಹಾಗಾದ್ರೆ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡುವುದಾದರೆ.
ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬಮ್ರಾ, ಯುಜ್ವೇಂದ್ರ ಚಹಾಲ್, ದೀಪಕ್ ಚಹಾರ್.
South Africa vs India ODI: ನಾಳೆ ಮೊದಲ ಏಕದಿನ: ಟೀಮ್ ಇಂಡಿಯಾ ಪರ ಪದಾರ್ಪಣೆಗೆ ಸಜ್ಜಾದ ಈ ಆಟಗಾರ
South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್ಬ್ಯಾಕ್
Published On - 12:15 pm, Tue, 18 January 22