IND vs BAN: 2ನೇ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾಕ್ಕೆ ಬಿಗ್ ಶಾಕ್; ನಾಯಕ ರಾಹುಲ್​ಗೆ ಇಂಜುರಿ..!

KL Rahul: ಮೀರ್‌ಪುರದಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗ ಕೆಎಲ್ ರಾಹುಲ್ ಅವರ ಕೈಗೆ ಗಾಯವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

IND vs BAN: 2ನೇ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾಕ್ಕೆ ಬಿಗ್ ಶಾಕ್; ನಾಯಕ ರಾಹುಲ್​ಗೆ ಇಂಜುರಿ..!
KL Rahul
Follow us
| Updated By: ಪೃಥ್ವಿಶಂಕರ

Updated on:Dec 21, 2022 | 4:35 PM

ಭಾರತ ಮತ್ತು ಬಾಂಗ್ಲಾದೇಶ (India Vs Bangladesh) ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಅದಕ್ಕೂ ಮುನ್ನ ಟೀಂ ಇಂಡಿಯಾ (Team India) ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ. ನಾಯಕ ಕೆಎಲ್ ರಾಹುಲ್ (KL Rahul) ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮೀರ್‌ಪುರದಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗ ಕೆಎಲ್ ರಾಹುಲ್ ಅವರ ಕೈಗೆ ಗಾಯವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ರಾಹುಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೋ, ಇಲ್ಲವೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ರಾಹುಲ್ ಇಂಜುರಿ ಬಗ್ಗೆ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿಕೆ ನೀಡಿದ್ದು, ಕೆಎಲ್ ರಾಹುಲ್ ಗಾಯ ಗಂಭೀರವಾಗಿಲ್ಲ. ಆದರೆ ಎರಡನೇ ಟೆಸ್ಟ್‌ಗೆ ರಾಹುಲ್ ಫಿಟ್ ಆಗುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ ಎಂದಿದ್ದಾರೆ. ಒಂದು ವೇಳೆ ರಾಹುಲ್ ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್‌ನಲ್ಲಿ ಆಡದೇ ಇದ್ದರೆ ಭಾರತ ತಂಡಕ್ಕೆ ನಾಯಕತ್ವ ಮತ್ತು ಓಪನಿಂಗ್ ಎರಡೂ ಕೂಡ ಸಮಸ್ಯೆಯಾಗಲಿದೆ.

IPL Auction 2023: ಮಿನಿ ಹರಾಜಿನಿಂದ ಹೊರಬಿದ್ದ ಸ್ಟಾರ್ ವಿದೇಶಿ ಆಟಗಾರರು ಇವರೇ! ಪಟ್ಟಿಯಲ್ಲಿ 9 ಮಂದಿ

ರಾಹುಲ್ ಗಾಯ ಗಂಭೀರವಾಗಿಲ್ಲ- ವಿಕ್ರಮ್ ರಾಥೋಡ್

ರಾಹುಲ್ ಬಗ್ಗೆ ಲೇಟೆಸ್ಟ್ ಅಪ್‌ಡೇಟ್ ನೀಡಿರುವ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಸದ್ಯಕ್ಕೆ ರಾಹುಲ್​ ಆರೋಗ್ಯವಾಗಿದ್ದಾರೆ. ಎಲ್ಲ ಸರಿಯಾಗಿದೆ ಎಂದು ಭಾವಿಸುವೆ. ಪ್ರಸ್ತುತ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಅಲ್ಲದೆ ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಅವರು ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಎಂದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಆಡಲಬೇಕಿದೆ. ಒಂದು ವೇಳೆ ರಾಹುಲ್ ಅಲಭ್ಯರಾದರೆ, ಅವರ ಸ್ಥಾನದಲ್ಲಿ ಶುಭಮನ್ ಗಿಲ್ ಜೊತೆ ಯಾರು ಇನ್ನಿಂಗ್ಸ್ ಆರಂಭಿಸುತ್ತಾರೆ ಎಂಬ ಪ್ರಶ್ನೆ ಉದ್ಭವಿಸಲಿದೆ. ಅಲ್ಲದೆ ರೋಹಿತ್ ಹಾಗೂ ಪಾಂಡ್ಯ ಅನುಪಸ್ಥಿತಿಯಲ್ಲಿ ಯಾರು ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.

ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಮುನ್ನಡೆ

ಎರಡು ಟೆಸ್ಟ್‌ಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಮೀರ್‌ಪುರದಲ್ಲಿ ಪಂದ್ಯ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಭಾರತ ತಂಡ ಬಯಸುತ್ತಿದೆ. ಬಾಂಗ್ಲಾದೇಶ ವಿರುದ್ಧ ಭಾರತ ಕ್ಲೀನ್ ಸ್ವೀಪ್ ಮಾಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತಕ್ಕೆ ಬಂಪರ್ ಅನುಕೂಲವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Wed, 21 December 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು