AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತಮ್ಮ ವಿಕೆಟ್ ಉಳಿಸಿಕೊಳ್ಳಲು; ಕನ್ನಡಿಗ ರಾಹುಲ್ ವಿರುದ್ಧ ಚೇತೇಶ್ವರ ಪೂಜಾರ ಗಂಭೀರ ಆರೋಪ

Cheteshwar Pujara criticism: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ, ದೆಹಲಿ ಕ್ಯಾಪಿಟಲ್ಸ್ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ. ಆದರೆ, ಚೇತೇಶ್ವರ ಪೂಜಾರ ಅವರ ಆಟದ ಶೈಲಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ಹೆಚ್ಚಿನ ರನ್ ಗಳಿಸುತ್ತಿದ್ದರೂ, ಅವರ ಸ್ಟ್ರೈಕ್ ರೇಟ್ ಕಡಿಮೆ ಇರುವುದು ಚರ್ಚೆಗೆ ಕಾರಣವಾಗಿದೆ.

IPL 2025: ತಮ್ಮ ವಿಕೆಟ್ ಉಳಿಸಿಕೊಳ್ಳಲು; ಕನ್ನಡಿಗ ರಾಹುಲ್ ವಿರುದ್ಧ ಚೇತೇಶ್ವರ ಪೂಜಾರ ಗಂಭೀರ ಆರೋಪ
Kl Rahul
Follow us
ಪೃಥ್ವಿಶಂಕರ
|

Updated on: Apr 17, 2025 | 5:06 PM

ಐಪಿಎಲ್ 2025 (IPL 2025) ರಲ್ಲಿ ಕೆಎಲ್ ರಾಹುಲ್ (KL Rahul) ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಆಡಿರುವ 6 ಪಂದ್ಯಗಳಲ್ಲಿ 5 ಗೆಲುವು ಸಾಧಿಸುವುದಕ್ಕೆ ಕೆಎಲ್ ರಾಹುಲ್ ಕೂಡ ಪ್ರಮುಖ ಕೊಡುಗೆ ನೀಡಿದ್ದಾರೆ. ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ 32 ಎಸೆತಗಳಲ್ಲಿ 38 ರನ್ ಗಳಿಸುವ ಮೂಲಕ ರಾಹುಲ್ ತಮ್ಮ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು. ಆದಾಗ್ಯೂ ಟೀಂ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಚೇತೇಶ್ವರ ಪೂಜಾರ, ರಾಹುಲ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ತಮ್ಮ ವಿಕೆಟ್ ಉಳಿಸಿಕೊಳ್ಳಲು ಆಡುತ್ತಿರುವಂತೆ ಕಾಣುತ್ತಿದೆ ಎಂದು ಹೇಳುವ ಮೂಲಕ ಪೂಜಾರ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ರಾಹುಲ್ ವಿರುದ್ಧ ಪೂಜಾರ ಕಿಡಿ

ಇಎಸ್‌ಪಿಎನ್‌ಕ್ರಿಕ್‌ಇನ್ಫೋ ಜೊತೆಗಿನ ಸಂವಾದದಲ್ಲಿ ಚೇತೇಶ್ವರ ಪೂಜಾರ, ‘ಒಬ್ಬ ಹಿರಿಯ ಆಟಗಾರನಾಗಿ, ಕೆಎಲ್ ರಾಹುಲ್ ಸೆಟ್ ಆಗಲು 15-30 ಎಸೆತಗಳನ್ನು ತೆಗೆದುಕೊಳ್ಳುತ್ತಾರೆ. ಅದರ ನಂತರ ಅವರು ಆಕ್ರಮಣಕಾರಿಯಾಗಿ ಆಡುತ್ತಾರೆ. ಆದರೆ ಅದೇ ಸಮಯದಲ್ಲಿ, ಅವರು ಸ್ವಲ್ಪ ಹೆಚ್ಚು ಆಕ್ರಮಣಶೀಲತೆಯನ್ನು ತೋರಿಸಬೇಕಾಗಿತ್ತು. ಏಕೆಂದರೆ ಅವರು ಸೆಟ್ ಆಗಿದ್ದರು ಮತ್ತು ಪಿಚ್ ಅನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಾಕಷ್ಟು ಅವಕಾಶವಿತ್ತು. ಅವರಿಗೆ ಪರಿಸ್ಥಿತಿ ಅರ್ಥವಾಗಿತ್ತು. ಪವರ್‌ಪ್ಲೇ ನಂತರ ಅವರು ಆಕ್ರಮಣಕಾರಿ ಆಟಕ್ಕೆ ಮುಂದಾಗಬೇಕಿತ್ತು. ಆದರೆ ರಾಹುಲ್ ತನ್ನ ಸಹಜ ಆಟವನ್ನು ಆಡುವ ಬದಲು ತನ್ನ ವಿಕೆಟ್ ಉಳಿಸಿಕೊಳ್ಳಲು ಆಡುತ್ತಿದ್ದಾರೆ ಎಂದು ತೋರುತ್ತದೆ ಎಂದಿದ್ದಾರೆ.

ರಾಹುಲ್ ಅದ್ಭುತ ಪ್ರದರ್ಶನ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಎಲ್ ರಾಹುಲ್ ಅವರ ಸ್ಟ್ರೈಕ್ ರೇಟ್ ಕಡಿಮೆಯಿದ್ದರೂ, ಈ ಟೂರ್ನಿಯಲ್ಲಿ ಇಲ್ಲಿಯವರೆಗೆ ಅತ್ಯಂತ ವೇಗವಾಗಿ ರನ್ ಗಳಿಸಿದ್ದಾರೆ. ರಾಹುಲ್ ಆಡಿರುವ 5 ಪಂದ್ಯಗಳಲ್ಲಿ 59 ರ ಸರಾಸರಿಯಲ್ಲಿ 238 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಸ್ಟ್ರೈಕ್ ರೇಟ್ 154 ಆಗಿದೆ. ದೊಡ್ಡ ವಿಷಯವೆಂದರೆ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಸ್ಥಾನ ಬದಲಾಗುತ್ತಲೇ ಇರುತ್ತದೆ, ಆದ್ದರಿಂದ ಅವರು ಯಾವಾಗಲೂ ಒಂದೇ ರನ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ.

RCB vs DC Highlights, IPL 2025: ರಾಹುಲ್ ಕ್ಯಾಚ್ ಕೈಚೆಲ್ಲಿ ಪಂದ್ಯ ಸೋತ ಆರ್​ಸಿಬಿ

ಡೆಲ್ಲಿ ಕ್ಯಾಪಿಟಲ್ಸ್ ನಂ.1

ರಾಹುಲ್ ಬಗ್ಗೆ ಪೂಜಾರ ಪ್ರಶ್ನೆಗಳನ್ನು ಎತ್ತುತ್ತಿರಬಹುದು ಆದರೆ ಸತ್ಯವೆಂದರೆ ರಾಹುಲ್ ತಂಡಕ್ಕೆ ಸಾಕಷ್ಟು ಸಮತೋಲನವನ್ನು ನೀಡಿದ್ದಾರೆ. ಅವರು ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಿರುತ್ತಾರೆ. ಅಲ್ಲದೆ ಅವರ ವಿಕೆಟ್ ಕೀಪಿಂಗ್ ಕೂಡ ಅತ್ಯುತ್ತಮವಾಗಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಾಹುಲ್ ಆಗಮನದಿಂದ ಲಾಭವಾಗಿದೆ. ಡೆಲ್ಲಿ ತಂಡ 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ