
ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ (KL Rahul) ಅದ್ಭುತ ಫಾರ್ಮ್ನಲ್ಲಿದ್ದಾರೆ. ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಹುಲ್ ಅವರ ಬ್ಯಾಟ್ ಐಪಿಎಲ್ 2025 (IPL 2025) ರಲ್ಲೂ ಅಬ್ಬರಿಸುತ್ತಿದೆ. ಇದಕ್ಕೆ ಪೂರಕವಾಗಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಸ್ಫೋಟಕ ಶತಕ ಕೂಡ ಸಿಡಿಸಿದ್ದರು. ಹೀಗಾಗಿ ಟಿ20 ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಹುಲ್ ಮತ್ತೊಮ್ಮೆ ಭಾರತ ಟಿ20 ತಂಡದಲ್ಲಿ (Team India) ಕಾಣಿಸಿಕೊಳ್ಳುವ ಸಮಯ ಸನಿಹವಾಗಿದೆ.
ಕೆಎಲ್ ರಾಹುಲ್ ಐಪಿಎಲ್ 2025 ರಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ ಅವರನ್ನು ಬಾಂಗ್ಲಾದೇಶ ಪ್ರವಾಸಕ್ಕೆ ತಂಡದಲ್ಲಿ ಆಯ್ಕೆ ಮಾಡಬಹುದು. ವಾಸ್ತವವಾಗಿ, ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಏಕದಿನ ಮತ್ತು ಟಿ20 ಸರಣಿಗಳು ನಡೆಯಲಿವೆ. ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಾಹುಲ್ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಆಯ್ಕೆ ಮಂಡಳಿ ಕೂಡ ರಾಹುಲ್ ಮೇಲೆ ಒಲವು ತೋರಿಸಿದೆ ಎಂದು ವರದಿಯಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ರಾಹುಲ್ ತಮ್ಮ ಸ್ಟ್ರೈಕ್ ರೇಟ್‌ನಿಂದಾಗಿ ಟೀಕೆಗಳನ್ನು ಎದುರಿಸಿದ್ದರು. ಆದರೆ ಐಪಿಎಲ್ 2025 ರಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿರುವ ರಾಹುಲ್ ಅವರ ಸ್ಟ್ರೈಕ್ ರೇಟ್ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಸ್ತುತ ಐಪಿಎಲ್ನಲ್ಲಿ ಅವರು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು 61.62 ರ ಸರಾಸರಿಯಲ್ಲಿ 493 ರನ್ ಗಳಿಸಿದ್ದಾರೆ. ಇದರಲ್ಲಿ ಗುಜರಾತ್ ವಿರುದ್ಧದ 112 ರನ್‌ಗಳ ಅಜೇಯ ಇನ್ನಿಂಗ್ಸ್ ಕೂಡ ಸೇರಿದೆ. ಈ ಆವೃತ್ತಿಯಲ್ಲಿ ಅವರು 148.04 ಸ್ಟ್ರೈಕ್ ರೇಟ್‌ನಲ್ಲಿ ಈ ರನ್‌ಗಳನ್ನು ಗಳಿಸಿದ್ದಾರೆ. 1 ಶತಕದ ಹೊರತಾಗಿ, ಅವರು 3 ಅರ್ಧಶತಕಗಳನ್ನು ಸಿಡಿಸಿದ್ದಾರೆ.
IPL 2025: ಕೊಹ್ಲಿಯ ಟಿ20 ದಾಖಲೆಯನ್ನು ಧ್ವಂಸಗೊಳಿಸಿದ ಕೆಎಲ್ ರಾಹುಲ್
2022 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಈ ಪಂದ್ಯಾವಳಿಯಲ್ಲಿ ಅವರು 6 ಪಂದ್ಯಗಳನ್ನು ಆಡಿ 21.33 ರ ಸರಾಸರಿಯಲ್ಲಿ ಕೇವಲ 128 ರನ್‌ಗಳನ್ನು ಗಳಿಸಿದರು. ಅವರ ಸ್ಟ್ರೈಕ್ ರೇಟ್ ಕೂಡ 120.75 ಆಗಿತ್ತು. ಆದರೆ ಅವರ ಇತ್ತೀಚಿನ ಫಾರ್ಮ್ ಮತ್ತು ಅನುಭವವನ್ನು ಪರಿಗಣಿಸಿ, ಆಯ್ಕೆದಾರರು ಈಗ ಅವರನ್ನು ಪ್ರಮುಖ ಆಯ್ಕೆಯಾಗಿ ನೋಡುತ್ತಿದ್ದಾರೆ. ವಿಶೇಷವಾಗಿ ಭಾರತ ತಂಡಕ್ಕೆ 2026 ರ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಲು ಅನುಭವಿ ಮತ್ತು ಯುವ ಆಟಗಾರರ ಮಿಶ್ರಣದ ಅಗತ್ಯವಿದ್ದು, ರಾಹುಲ್ ಈ ಪಾತ್ರಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ