AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

India vs South Africa ODI: ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ವಿಶಾಖಪಟ್ಟಣಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆದ್ದು, 2-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ದಕ್ಷಿಣ ಆಫ್ರಿಕಾ 270 ರನ್ ಗಳಿಸಿದರೆ, ಭಾರತ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಗೆಲುವು ಭಾರತಕ್ಕೆ ಟೆಸ್ಟ್ ಸರಣಿಯ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ, ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

IND vs SA: ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಂಡ ಟೀಂ ಇಂಡಿಯಾ
Ind Vs Sa
ಪೃಥ್ವಿಶಂಕರ
|

Updated on:Dec 06, 2025 | 9:35 PM

Share

ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯವನ್ನು ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಕೆಎಲ್ ರಾಹುಲ್ (KL Rahul) ನೇತೃತ್ವದ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಉಭಯ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ಪೂರ್ಣ 50 ಓವರ್​ಗಳನ್ನು ಆಡದೆ 47.5 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 270 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 39.5 ಓವರ್​ಗಳಲ್ಲಿ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಕರಾಳ ಇತಿಹಾಸ ಮರುಕಳಿಸಲಿಲ್ಲ

ಮೂರು ಪಂದ್ಯಗಳ ಸರಣಿ ಈಗಾಗಲೇ 1-1 ರಲ್ಲಿ ಸಮಬಲಗೊಂಡಿದ್ದರಿಂದ ಟೀಂ ಇಂಡಿಯಾಕ್ಕೆ 39 ವರ್ಷಗಳ ಹಿಂದಿನ ಆಘಾತ ಮತ್ತೆ ಪುನಾರವರ್ತನೆಯಾಗುತ್ತಾ ಎಂಬ ಆತಂಕ ಮೂಡಿತ್ತು. ವಾಸ್ತವವಾಗಿ 39 ವರ್ಷಗಳ ಹಿಂದೆ ಅಂದರೆ 1986-87 ರಲ್ಲಿ ಪಾಕಿಸ್ತಾನ, ಭಾರತ ಪ್ರವಾಸ ಮಾಡಿ ಟೆಸ್ಟ್ ಮತ್ತು ಏಕದಿನ ಸರಣಿಗಳಲ್ಲಿ ಟೀಂ ಇಂಡಿಯಾವನ್ನು ಸೋಲಿಸಿತ್ತು. ಅಂದಿನಿಂದ, ಟೀಂ ಇಂಡಿಯಾ ಒಂದೇ ತಂಡದ ವಿರುದ್ಧ ತವರಿನಲ್ಲಿ ಎರಡೂ ಸರಣಿಗಳನ್ನು ಸೋತಿರಲಿಲ್ಲ. ಆದರೆ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತಕ್ಕೆ ಆತಂಕ ಎದುರಾಗಿತ್ತು. ಆದಾಗ್ಯೂ ವಿಶಾಖಪಟ್ಟಣಂನಲ್ಲಿ ಏಕಪಕ್ಷೀಯ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಎಲ್ಲಾ ಆತಂಕಗಳನ್ನು ದೂರ ಮಾಡಿಕೊಂಡಿದೆ.

ಕುಲ್ದೀಪ್, ಪ್ರಸಿದ್ಧ್ ಮ್ಯಾಜಿಕ್

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ತಂಡಕ್ಕೆ ಮೊದಲ ಓವರ್‌ನಲ್ಲಿಯೇ ಅರ್ಷದೀಪ್ ಸಿಂಗ್, ರಯಾನ್ ರಿಕಲ್ಟನ್ ಅವರನ್ನು ಔಟ್ ಮಾಡುವ ಮೂಲಕ ಶಾಕ್ ನೀಡಿದರು. ಆದರೆ ಆ ನಂತರ ಕ್ವಿಂಟನ್ ಡಿ ಕಾಕ್ ಆಕ್ರಮಣಕಾರಿಯಾಗಿ ಆಡಿ ತಮ್ಮ 23 ನೇ ಶತಕವನ್ನು ಬಾರಿಸಿದರು. ಆದಾಗ್ಯೂ, ಆರಂಭದಲ್ಲಿ ಸರಾಗವಾಗಿ ರನ್ ಬಿಟ್ಟುಕೊಟ್ಟಿದ್ದ ಪ್ರಸಿದ್ಧ್ ಕೃಷ್ಣ, 29 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಂತರ 33 ನೇ ಓವರ್‌ನಲ್ಲಿ ಡಿ ಕಾಕ್ ಅವರನ್ನು ಔಟ್ ಮಾಡುವ ಮೂಲಕ ಅಮೋಘ ಪುನರಾಗಮನ ಮಾಡಿದರು. ಅಲ್ಲಿಂದ ಆಫ್ರಿಕಾ ತಂಡದ ವಿಕೆಟ್ ಪತನ ಆರಂಭವಾಯಿತು. ಇದರಲ್ಲಿ ಪ್ರಮುಖ ಪಾತ್ರ ವಹಿಸಿದ ಕುಲ್ದೀಪ್ 39 ನೇ ಓವರ್‌ನಲ್ಲಿ ಎರಡು ವಿಕೆಟ್‌, ಆನಂತರ ಮತ್ತೇರಡು ವಿಕೆಟ್‌ಗಳನ್ನು ಪಡೆದು ದಕ್ಷಿಣ ಆಫ್ರಿಕಾವನ್ನು 270 ರನ್‌ಗಳಿಗೆ ಸೀಮಿತಗೊಳಿಸಿದರು.

ರೋಹಿತ್- ಜೈಸ್ವಾಲ್ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಭಾರತದ ಪರ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಅತ್ಯುತ್ತಮ ಜೊತೆಯಾಟವನ್ನು ನಿರ್ಮಿಸಿದರು. ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಈ ಜೋಡಿ 25.5 ಓವರ್‌ಗಳಲ್ಲಿ 155 ರನ್‌ಗಳ ಬೃಹತ್ ಪಾಲುದಾರಿಕೆಯನ್ನು ನಿರ್ಮಿಸಿದರು, ಪಂದ್ಯದ ಫಲಿತಾಂಶವನ್ನು ಬಹುತೇಕ ದೃಢಪಡಿಸಿದರು. ಆದರೆ ರೋಹಿತ್ (75 ರನ್‌ಗಳು, 73 ಎಸೆತಗಳು, 7 ಬೌಂಡರಿಗಳು, 3 ಸಿಕ್ಸರ್‌ಗಳು) ತಮ್ಮ ಪ್ರಭಾವಶಾಲಿ ಇನ್ನಿಂಗ್ಸ್ ಅನ್ನು ಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಆದರೆ ಜೈಸ್ವಾಲ್ ಮಾತ್ರ ತಮ್ಮ ಮೊದಲ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

IND vs SA: 20000 ರನ್​ಗಳ ಸರದಾರ ರೋಹಿತ್ ಶರ್ಮಾ; ಐತಿಹಾಸಿಕ ಮೈಲಿಗಲ್ಲು

ಅಜೇಯರಾಗಿ ಉಳಿದ ಕೊಹ್ಲಿ- ಜೈಸ್ವಾಲ್

ರೋಹಿತ್ ಔಟಾದ ನಂತರ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ, ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರಿಸಿ ಕೆಲವೇ ನಿಮಿಷಗಳಲ್ಲಿ ಅರ್ಧಶತಕ ಪೂರೈಸಿದರು. ಇದರ ಜೊತೆಗೆ ಜೈಸ್ವಾಲ್ ಅವರೊಂದಿಗೆ 116 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಕೊಹ್ಲಿ 45 ಎಸೆತಗಳಲ್ಲಿ ಅಜೇಯ 65 ರನ್ ಗಳಿಸಿದರೆ (6 ಬೌಂಡರಿಗಳು, 3 ಸಿಕ್ಸರ್‌ಗಳು), ಜೈಸ್ವಾಲ್ 121 ಎಸೆತಗಳಲ್ಲಿ ಅಜೇಯ 116 ರನ್ ಗಳಿಸಿದರು (12 ಬೌಂಡರಿಗಳು, 2 ಸಿಕ್ಸರ್‌ಗಳು).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 6 December 25

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'