Team India: ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾಗೆ ಕನ್ನಡಿಗ ನಾಯಕ

India vs New Zealand: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಮೂರು ಟಿ20 ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ನವೆಂಬರ್ 17 (ಜೈಪುರ), ನವೆಂಬರ್ 19 (ರಾಂಚಿ) ಮತ್ತು ನವೆಂಬರ್ 21 (ಕೋಲ್ಕತ್ತಾ) ರಂದು ಟಿ20 ಪಂದ್ಯಗಳು ನಡೆಯಲಿವೆ.

Team India: ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾಗೆ ಕನ್ನಡಿಗ ನಾಯಕ
KL Rahul-Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 02, 2021 | 8:20 PM

ಟಿ20 ವಿಶ್ವಕಪ್​ನಲ್ಲಿ (T20 World Cup 2021) ನೀರಸ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ (Team India) ಸೆಮಿಫೈನಲ್ ಕನಸು ಬಹುತೇಕ ಕಮರಿದೆ. ಭಾರತ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೂ ಸೆಮಿಫೈನಲ್​ಗೇರುವ ಚಾನ್ಸ್​ ತುಂಬಾ ಕಡಿಮೆ. ಏಕೆಂದರೆ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವು ಒಂದರಲ್ಲಿ ಸೋತರೆ ಮಾತ್ರ ನೆಟ್​ ರನ್​ರೇಟ್​ ಮೂಲಕ ಭಾರತ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಆದರೆ ಅತ್ತ ನ್ಯೂಜಿಲೆಂಡ್ ಮುಂದಿನ ಪಂದ್ಯಗಳಲ್ಲಿ ಅಫ್ಘಾನಿಸ್ತಾನ್, ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ವಿರುದ್ದ ಆಡಲಿದ್ದು, ಈ ತಂಡಗಳಿಗಿಂತ ಕಿವೀಸ್ ಪಡೆ ಬಲಿಷ್ಠವಾಗಿದೆ.

ಹೀಗಾಗಿ ಭಾರತ ತಂಡ ಲೀಗ್ ಹಂತದಿಂದಲೇ ಹೊರಬೀಳುವ ಸಾಧ್ಯತೆ ಹೆಚ್ಚು. ಇನ್ನು ಟಿ20 ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾದ ಬಹುತೇಕ ಆಟಗಾರರು ವಿಶ್ರಾಂತಿ ಪಡೆದುಕೊಳ್ಳುವುದು ಬಹುತೇಕ ಖಚಿತ. ಈಗಾಗಲೇ ವಿಶ್ರಾಂತಿಯ ಅಗತ್ಯವಿದೆ ಎಂದು ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಹೇಳಿದ್ದಾರೆ. ಹಾಗಾಗಿ ತಂಡದ ಪ್ರಮುಖ ಆಟಗಾರರಿಗೆ ವಿಶ್ವಕಪ್ ಬಳಿಕ ವಿಶ್ರಾಂತಿ ನೀಡಲಾಗುತ್ತದೆ. ಆದರೆ ಇನ್ನೊಂದೆಡೆ ಇದೇ ತಿಂಗಳಲ್ಲಿ ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ದ ಟಿ20 ಸರಣಿ ಆಡಬೇಕಿದೆ.

ನವೆಂಬರ್ 17 ರಿಂದ ಶುರುವಾಗಲಿರುವ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರು ಹೊರಗುಳಿಯಲಿದ್ದಾರೆ. ಅತ್ತ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಲಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾ ಹೊಸ ನಾಯಕನ ಆಯ್ಕೆ ಮಾಡಲಿದೆ.

ಅದರಂತೆ ನ್ಯೂಜಿಲೆಂಡ್ ಸರಣಿಗಾಗಿ ಟೀಮ್ ಇಂಡಿಯಾ ನಾಯಕನ ಪಟ್ಟವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ವಹಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ರಾಹುಲ್ ಯುವ ಟೀಮ್ ಇಂಡಿಯಾದ ಸಾರಥ್ಯವಹಿಸಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಈ ಸರಣಿಯೊಂದಿಗೆ ಟೀಮ್ ಇಂಡಿಯಾ ಕೋಚ್​​ ಆಗಿ ರಾಹುಲ್ ದ್ರಾವಿಡ್​ ಕೂಡ ಹೊಸ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಕೋಚ್ ಹಾಗೂ ನಾಯಕರಾಗಿ ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

ಇದಾಗ್ಯೂ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಪರ್ಮನೆಂಟ್ ಕ್ಯಾಪ್ಟನ್ ಆಗೋದು ಅನುಮಾನ. ಏಕೆಂದರೆ ನ್ಯೂಜಿಲೆಂಡ್ ಸರಣಿ ಬಳಿಕ ರೋಹಿತ್ ಶರ್ಮಾ ಅವರನ್ನು ಟಿ20 ಹಾಗೂ ಏಕದಿನ ತಂಡಗಳಿಗೆ ನಾಯಕನಾಗಿ ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ. ಹೀಗಾಗಿ ರಾಹುಲ್ ಅವರು ನ್ಯೂಜಿಲೆಂಡ್ ಸರಣಿ ಬಳಿಕ ಭಾರತ ತಂಡದ ಉಪನಾಯಕನಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಮೂರು ಟಿ20 ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ನವೆಂಬರ್ 17 (ಜೈಪುರ), ನವೆಂಬರ್ 19 (ರಾಂಚಿ) ಮತ್ತು ನವೆಂಬರ್ 21 (ಕೋಲ್ಕತ್ತಾ) ರಂದು ಟಿ20 ಪಂದ್ಯಗಳು ನಡೆಯಲಿವೆ. ನವೆಂಬರ್ 25-29 (ಕಾನ್ಪುರ) ಮತ್ತು ಡಿಸೆಂಬರ್ 3-7 (ಮುಂಬೈ) ನಲ್ಲಿ ಟೆಸ್ಟ್ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(KL Rahul Likely To Lead Team India For New Zealand T20I Series)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ