AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧತೆ ಸರಿಯಾಗಿದ್ದರೆ ಯಶಸ್ಸು ಖಚಿತ: ಶತಕದ ಹಿಂದಿನ ಶ್ರಮ ಬಿಚ್ಚಿಟ್ಟ ರಾಹುಲ್

ಕೆ.ಎಲ್. ರಾಹುಲ್ ನ್ಯೂಜಿಲೆಂಡ್‌ನಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. SENA ದೇಶಗಳಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಠಿಣ ಪರಿಸ್ಥಿತಿಗಾಗಿ ಆರು ತಿಂಗಳ ವಿಶೇಷ ಸಿದ್ಧತೆ ನಡೆಸಿ, ಪಿಚ್ ಅಧ್ಯಯನ ಮಾಡಿ, ಮುಂಚಿತವಾಗಿ ಆಗಮಿಸಿ ಯಶಸ್ಸು ಕಂಡಿದ್ದಾರೆ. ಈ ಶತಕದಿಂದ ಭಾರತ ಬಲಿಷ್ಠ ಸ್ಥಿತಿಯಲ್ಲಿದೆ.

ಸಿದ್ಧತೆ ಸರಿಯಾಗಿದ್ದರೆ ಯಶಸ್ಸು ಖಚಿತ: ಶತಕದ ಹಿಂದಿನ ಶ್ರಮ ಬಿಚ್ಚಿಟ್ಟ ರಾಹುಲ್
ಕೆಎಲ್ ರಾಹುಲ್Image Credit source: BCCI X
ಪೃಥ್ವಿಶಂಕರ
|

Updated on:Nov 21, 2026 | 3:22 PM

Share

ನ್ಯೂಜಿಲೆಂಡ್ ನೆಲದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕ ದಾಖಲಿಸಿರುವುದು ವಿಶೇಷ ಸಾಧನೆ ಎಂದು ಟೀಂ ಇಂಡಿಯಾದ ಅನುಭವಿ ಬ್ಯಾಟರ್ ಕೆ.ಎಲ್. ರಾಹುಲ್ ಹೇಳಿದ್ದಾರೆ. ನ್ಯೂಜಿಲೆಂಡ್‌ನ ಕಠಿಣ ಪರಿಸ್ಥಿತಿಯಲ್ಲಿ ವಿಶ್ವದ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಎದುರಿಸಿ ರನ್ ಗಳಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬೇಕೆಂಬ ಆಸೆ ಬಹಳ ಹಿಂದಿನಿಂದಲೂ ಇತ್ತು. ಈ ಅವಕಾಶಕ್ಕಾಗಿ ಕಳೆದ ಆರರಿಂದ ಏಳು ತಿಂಗಳಿನಿಂದಲೇ ವಿಶೇಷ ತಯಾರಿ ನಡೆಸಿದ್ದೆ. ನ್ಯೂಜಿಲೆಂಡ್‌ನಲ್ಲಿ ಯಶಸ್ವಿಯಾಗಿ ಬ್ಯಾಟಿಂಗ್ ಮಾಡಿದ ಆಟಗಾರರ ಪ್ರದರ್ಶನಗಳನ್ನು ಅಧ್ಯಯನ ಮಾಡಿದ್ದಲ್ಲದೆ, ಅಲ್ಲಿನ ವಾತಾವರಣ ಮತ್ತು ಪಿಚ್‌ಗೆ ಹೊಂದಿಕೊಳ್ಳಲು ಮುಂಚಿತವಾಗಿಯೇ ದೇಶಕ್ಕೆ ಆಗಮಿಸಿದ್ದಾಗಿ ರಾಹುಲ್ ಹೇಳಿದ್ದಾರೆ.

ಭಾರತದ ಮೊದಲ ಆರಂಭಿಕ ಬ್ಯಾಟರ್

ಶನಿವಾರ ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ರಾಹುಲ್ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರು ದಾಖಲಿಸಿದರು. ನ್ಯೂಜಿಲೆಂಡ್‌ನಲ್ಲಿ ಆಡಿದ ಚೊಚ್ಚಲ ಟೆಸ್ಟ್ ಇನಿಂಗ್ಸ್‌ನಲ್ಲೇ ಶತಕ ಬಾರಿಸಿದ ಭಾರತದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. 34 ವರ್ಷದ ರಾಹುಲ್ ಮತ್ತೊಂದು ಮಹತ್ವದ ಮೈಲಿಗಲ್ಲನ್ನೂ ತಲುಪಿದ್ದಾರೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ (SENA) ದೇಶಗಳಲ್ಲಿ ಟೆಸ್ಟ್ ಶತಕ ದಾಖಲಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ. ಇದು ಅವರ ಟೆಸ್ಟ್ ವೃತ್ತಿಜೀವನದ 13ನೇ ಶತಕವಾಗಿದೆ.

ಈ ಹಿಂದೆ ಆ ಅವಕಾಶ ಸಿಕ್ಕಿರಲಿಲ್ಲ

‘ವಿಭಿನ್ನ ಪರಿಸ್ಥಿತಿಗಳಲ್ಲಿ ಆಡಬೇಕು, ಬೇರೆ ಬೇರೆ ದೇಶಗಳಲ್ಲಿ ನಮ್ಮ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬೇಕು ಮತ್ತು ಅತ್ಯುತ್ತಮ ಬೌಲರ್‌ಗಳನ್ನು ಎದುರಿಸಬೇಕು ಎಂಬ ಆಸೆ ಪ್ರತಿಯೊಬ್ಬ ಆಟಗಾರನಿಗೂ ಇರುತ್ತದೆ. ನ್ಯೂಜಿಲೆಂಡ್‌ನಲ್ಲಿ ಪರಿಸ್ಥಿತಿಗಳು ಸವಾಲಿನಿಂದ ಕೂಡಿರುವುದರಿಂದ ಇಲ್ಲಿ ರನ್ ಗಳಿಸಲು ಸಾಕಷ್ಟು ಬ್ಯಾಟರ್‌ಗಳು ಪರದಾಡಿದ್ದಾರೆ. ಹೀಗಾಗಿ ಇಲ್ಲಿ ಟೆಸ್ಟ್ ಪಂದ್ಯವನ್ನಾಡಬೇಕು, ಸಾಧ್ಯವಾದರೆ ಇನ್ನಷ್ಟು ಪಂದ್ಯಗಳನ್ನು ಆಡಬೇಕು ಎಂಬ ಆಸೆ ನನಗಿತ್ತು. ಆದರೆ ಈ ಹಿಂದೆ ಆ ಅವಕಾಶ ಸಿಕ್ಕಿರಲಿಲ್ಲ. ಈಗ ಅವಕಾಶ ಸಿಕ್ಕಾಗ ಅದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ನಿರ್ಧರಿಸಿದೆ. ಅದಕ್ಕಾಗಿಯೇ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಮುಂಚಿತವಾಗಿಯೇ ಆಗಮಿಸಿದ್ದೆ’ ಎಂದು ಶನಿವಾರ ಮೂರನೇ ದಿನದಾಟದ ಅಂತ್ಯಕ್ಕೆ ಸುದ್ದಿಗಾರರೊಂದಿಗೆ ಮಾತನಾಡುವಾಗ ರಾಹುಲ್ ತಿಳಿಸಿದ್ದಾರೆ.

ಸಾಕಷ್ಟು ಪರಿಶ್ರಮ ಮತ್ತು ತಯಾರಿ ನಡೆಸಿದ್ದೆ

ಇನ್ನು ನ್ಯೂಜಿಲೆಂಡ್ ಪ್ರವಾಸದ ತಯಾರಿ ಕುರಿತು ಮಾತನಾಡಿದ ಅವರು, ‘ಇಲ್ಲಿ ಈ ಹಿಂದೆ ಕೆಂಪು ಚೆಂಡಿನ ಟೆಸ್ಟ್ ಕ್ರಿಕೆಟ್ ಆಡಿದ ಅನುಭವ ನನಗಿರಲಿಲ್ಲ. ಹೀಗಾಗಿ ಸಾಕಷ್ಟು ಮುಂಚಿತವಾಗಿಯೇ ತಯಾರಿ ಆರಂಭಿಸಿದ್ದೆ. ಕಳೆದ ಆರರಿಂದ ಏಳು ತಿಂಗಳಿನಿಂದ ನ್ಯೂಜಿಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್ ಆಡುವ ಬಗ್ಗೆ ಯೋಚಿಸುತ್ತಿದ್ದೆ. ಇಲ್ಲಿ ಉತ್ತಮವಾಗಿ ರನ್ ಗಳಿಸಿರುವ ಬ್ಯಾಟರ್‌ಗಳ ಆಟವನ್ನು ಗಮನಿಸಿ, ಅವರು ಯಾವ ರೀತಿ ಇನಿಂಗ್ಸ್ ಕಟ್ಟಿದ್ದಾರೆ ಎಂಬುದನ್ನು ಅಧ್ಯಯನ ಮಾಡಿದ್ದೆ. ಸಾಕಷ್ಟು ಪರಿಶ್ರಮ ಮತ್ತು ತಯಾರಿ ನಡೆಸಿದ್ದೆ. ಮೈದಾನಕ್ಕಿಳಿಯುವ ಮುನ್ನವೇ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಪಂದ್ಯ ಆಡುವಾಗ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಸ್ವಲ್ಪ ಸುಲಭವಾಗುತ್ತದೆ’ ಎಂದು ಹೇಳಿದ್ದಾರೆ.

ಗಂಭೀರ್ ಹಿಂದಿಕ್ಕಿದ ಯಶಸ್ವಿ ಜೈಸ್ವಾಲ್, ಏಷ್ಯಾದ ಆರಂಭಿಕರ ಪಟ್ಟಿಯಲ್ಲಿ ರಾಹುಲ್‌ಗೆ 2ನೇ ಸ್ಥಾನ

ಭಾರತ 4 ವಿಕೆಟ್ ನಷ್ಟಕ್ಕೆ 486 ರನ್ ಗಳಿಸಿದೆ

ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಲಿಷ್ಠ ಸ್ಥಿತಿಯಲ್ಲಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ ಭಾರತ 4 ವಿಕೆಟ್ ನಷ್ಟಕ್ಕೆ 486 ರನ್ ಗಳಿಸಿದೆ. 136 ರನ್‌ಗಳ ಅಮೋಘ ಇನಿಂಗ್ಸ್ ಆಡಿದ ರಾಹುಲ್, ಭಾರತ ತಂಡಕ್ಕೆ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಮುನ್ನಡೆ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 368 ರನ್‌ಗಳಿಗೆ ಆಲೌಟ್ ಆಗಿತ್ತು. ಇದರಿಂದ ಭಾರತ 118 ರನ್‌ಗಳ ಅಮೂಲ್ಯ ಮುನ್ನಡೆ ಸಾಧಿಸಿ ಪಂದ್ಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Sat, 21 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
"ಸನ್ಯಾಸಿ, ಸಿಎಂ ಎಲ್ಲವೂ ಹೊರಗಷ್ಟೇ, ಅಮ್ಮನ ಮುಂದೆ ಕೇವಲ ಮಗ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ