IND vs BAN: ಪಂತ್ ತಂಡದಲ್ಲಿದ್ದರೂ ಪೂಜಾರಗೆ ಉಪನಾಯಕತ್ವ ಪಟ್ಟ ಕಟ್ಟಿದ್ಯಾಕೆ? ರಾಹುಲ್ ಹೇಳಿದ್ದಿದು

IND vs BAN: ಈ ಸರಣಿಯಲ್ಲಿ ರಾಹುಲ್ ನಾಯಕತ್ವ ಪಡೆದರೆ, ಪಂತ್​ಗೆ ಉಪನಾಯಕತ್ವ ಪಟ್ಟ ಖಚಿತ ಎಂದು ಹೇಳಲಾಗಿತ್ತು. ಆದರೆ ಈ ಪಟ್ಟದ ರೇಸ್​ನಲ್ಲಿ ಎಲ್ಲಿಯೂ ಕಾಣಿಸಿಕೊಂಡಿರದ ಪೂಜಾರಗೆ ಈಗ ಉಪನಾಯಕತ್ವ ಕಟ್ಟಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

IND vs BAN: ಪಂತ್ ತಂಡದಲ್ಲಿದ್ದರೂ ಪೂಜಾರಗೆ ಉಪನಾಯಕತ್ವ ಪಟ್ಟ ಕಟ್ಟಿದ್ಯಾಕೆ? ರಾಹುಲ್ ಹೇಳಿದ್ದಿದು
ಪಂತ್, ಪೂಜಾರ
Follow us
TV9 Web
| Updated By: ಪೃಥ್ವಿಶಂಕರ

Updated on:Dec 12, 2022 | 4:32 PM

ಡಿಸೆಂಬರ್ 14 ರಿಂದ ಭಾರತ ಮತ್ತು ಬಾಂಗ್ಲಾದೇಶ (India and Bangladesh) ನಡುವೆ 2 ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ. ಸರಣಿ ಆರಂಭಕ್ಕೂ ಮುನ್ನ ಬಿಸಿಸಿಐ (BCCI) ಭಾರತ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಗಾಯಗೊಂಡಿರುವ ರೋಹಿತ್ ಶರ್ಮಾ (Rohit Sharma) ಬದಲಿಗೆ ಕೆಎಲ್ ರಾಹುಲ್ (KL Rahul) ಅವರನ್ನು ತಂಡದ ನಾಯಕನಾಗಿ ಆಯ್ಕೆ ಮಾಡಿದೆ. ಅದೇ ಸಮಯದಲ್ಲಿ ರಿಷಬ್ ಪಂತ್ (Rishabh Pant) ಬದಲಿಗೆ ಚೇತೇಶ್ವರ ಪೂಜಾರಗೆ (Cheteshwar Pujara) ಉಪನಾಯಕತ್ವ ಪಟ್ಟ ಕಟ್ಟಲಾಗಿದೆ. ಹೀಗಾಗಿ ಪಂತ್ ತಂಡದಲ್ಲಿದ್ದರೂ ಪೂಜಾರಗೆ ಉಪನಾಯಕ ಸ್ಥಾನ ನೀಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಇದೀಗ ತಂಡದ ನಾಯಕ ರಾಹುಲ್ ಉಪನಾಯಕನ ಆಯ್ಕೆ ಸಾಮರ್ಥ್ಯದ ಬಗ್ಗೆ ಮೌನ ಮುರಿದಿದ್ದಾರೆ.

ವಾಸ್ತವವಾಗಿ, ರೋಹಿತ್ ನಂತರ ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕರಾಗಬಹುದಾದ ಆಟಗಾರರ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಜೊತೆಗೆ ಪಂತ್ ಕೂಡ ಇದ್ದಾರೆ. ಅಲ್ಲದೆ ಕಳೆದ ಕೆಲವು ಟೆಸ್ಟ್ ಸರಣಿಗಳಲ್ಲಿ ಪಂತ್ ಪ್ರದರ್ಶನವೂ ಉತ್ತಮವಾಗಿದೆ. ಹೀಗಾಗಿ ಈ ಸರಣಿಯಲ್ಲಿ ರಾಹುಲ್ ನಾಯಕತ್ವ ಪಡೆದರೆ, ಪಂತ್​ಗೆ ಉಪನಾಯಕತ್ವ ಪಟ್ಟ ಖಚಿತ ಎಂದು ಹೇಳಲಾಗಿತ್ತು. ಆದರೆ ಈ ಪಟ್ಟದ ರೇಸ್​ನಲ್ಲಿ ಎಲ್ಲಿಯೂ ಕಾಣಿಸಿಕೊಂಡಿರದ ಪೂಜಾರಗೆ ಈಗ ಉಪನಾಯಕತ್ವ ಕಟ್ಟಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಕಳೆದ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧದ ಸ್ವದೇಶಿ ಸರಣಿಯಲ್ಲೂ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಪೂಜಾರ ವಿಫಲರಾಗಿದ್ದರು. ಇದರ ನಂತರ, ಇಂಗ್ಲೆಂಡ್‌ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಪೂಜಾರ ಆಡಿದ್ದರು. ಆ ಪಂದ್ಯದಲ್ಲಿ ಬುಮ್ರಾ ತಂಡದ ನಾಯಕನಾಗಿದ್ದರೆ, ಪಂತ್ ಉಪನಾಯಕರಾಗಿದ್ದರು. ಆದರೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರದಿಂದ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

IND vs BAN: ಭಾರತ- ಬಾಂಗ್ಲಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಬದಲಾದ ಸಮಯದಲ್ಲಿ ಪಂದ್ಯ ಆರಂಭ

ನಿರ್ಧಾರಗಳು ಜವಾಬ್ದಾರಿಯನ್ನು ಬದಲಾಯಿಸುವುದಿಲ್ಲ

ಏತನ್ಮಧ್ಯೆ, ಪಂತ್ ಬದಲಿಗೆ ಪೂಜಾರ ಅವರನ್ನು ಉಪನಾಯಕರನ್ನಾಗಿ ಏಕೆ ಆಯ್ಕೆ ಮಾಡಲಾಗಿದೆ ಎಂದು ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ರಾಹುಲ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಹುಲ್, ಇಂತಹ ನಿರ್ಧಾರಗಳು ತಂಡದ ಆಟಗಾರನ ಜವಾಬ್ದಾರಿಯನ್ನು ಬದಲಿಸುವುದಿಲ್ಲ. ಹಾಗೆಯೇ ನಾಯಕ ಅಥವಾ ಉಪನಾಯಕನನ್ನು ಆಯ್ಕೆ ಮಾಡುವ ಮಾನದಂಡದ ಬಗ್ಗೆ ತನಗೆ ತಿಳಿದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ತಿಳಿದಿದ್ದಾರೆ

ಇದು ಹೆಚ್ಚಿನ ಜವಾಬ್ದಾರಿಯಾಗಿದೆ ಅಷ್ಟೇ ಅಲ್ಲದೆ, ಹೆಚ್ಚಿನದಾಗಿ ಏನೂ ಬದಲಾವಣೆಯಾಗಿಲ್ಲ. ಪ್ರತಿಯೊಬ್ಬರಿಗೂ ಅವರ ಪಾತ್ರ ಮತ್ತು ಜವಾಬ್ದಾರಿ ಬಗ್ಗೆ ಚೆನ್ನಾಗಿ ತಿಳಿದಿದೆ. ಪಂತ್ ಮತ್ತು ಪೂಜಾರ ಇಬ್ಬರೂ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಅಲ್ಲದೆ ಈ ಇಬ್ಬರು ಅನೇಕ ಬಾರಿ ಒಟ್ಟಿಗೆ ಆಡಿದ್ದಾರೆ. ಹೀಗಾಗಿ ನೀವು ಹೆಚ್ಚು ಯೋಚಿಸುವ ಅಗತ್ಯವಿಲ್ಲ. ನಾವು ತಂಡವಾಗಿ ಮುನ್ನಡೆಯುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Mon, 12 December 22

ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ